Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆ. 4: ಲಯನ್ಸ್ ಪದಗ್ರಹಣ ಸಮಾರಂಭ

ಆ. 4: ಲಯನ್ಸ್ ಪದಗ್ರಹಣ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ2 Aug 2018 9:43 PM IST
share

ಮಂಗಳೂರು, ಆ.2: ಲಯನ್ಸ್ ಜಿಲ್ಲಾ ಸಂಪುಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ‘ಸಮರ್ಪಣ’ವು ಅಡ್ಯಾರ್‌ನ ಅಡ್ಯಾರ್ ಗಾರ್ಡನ್‌ನ ವಿ.ಕೆ.ಶೆಟ್ಟಿ ಸಭಾಂಗಣದಲ್ಲಿ ಆ.4ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

 ನಗರದ ಖಾಸಗಿ ಹೊಟೇಲ್‌ವೊಂದರಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಯನ್ಸ್ ಜಿಲ್ಲಾ ರಾಜ್ಯಪಾಲ ದೇವದಾಸ್ ಭಂಡಾರಿ, ಸಮಾರಂಭದ ಮುಖ್ಯಅತಿಥಿಯಾಗಿ ಪೂರ್ವ ರಾಜ್ಯಪಾಲ ಡಾ.ಶಾಂತಾರಾಮ್ ಶೆಟ್ಟಿ ಭಾಗವಹಿಸಿ ಪ್ರದಗ್ರಹಣವನ್ನು ನೆರವೇರಿಸಲಿದ್ದಾರೆ. ಗೌರವ ಅತಿಥಿಯಾಗಿ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಪಾಲ್ಗೊಳ್ಳಲಿದ್ದಾರೆ ಎಂದರು.

ಲಯನ್ಸ್ ಜಿಲ್ಲಾ ಪ್ರಥಮ ಮಹಿಳೆ ಸುಖಲತಾ ಭಂಡಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರಥಮ ಉಪರಾಜ್ಯಪಾಲ ರೊನಾಲ್ಡ್ ಗೋಮ್ಸ್ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆಗೊಳಿಸಲಿದ್ದಾರೆ. ದ್ವೀತಿಯ ಉಪರಾಜ್ಯಪಾಲ ಡಾ.ಗೀತ್‌ಪ್ರಕಾಶ್, ಶಶಿಧರ್ ಮಾರ್ಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

2008-19ನೇ ಸಾಲಿನಲ್ಲಿ ಲಯನ್ಸ್ ರಾಜ್ಯಪಾಲ ದೇವದಾಸ್ ಭಂಡಾರಿ ‘ಡೆಡಿಕೇಟ್’ ಎಂಬ ಧ್ಯೇಯವಾಕ್ಯದೊಂದಿಗೆ ಸುಮಾರು 20 ಕೊಟಿ ರೂ. ಸೇವಾ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಅದರಲ್ಲಿ ಮುಖ್ಯವಾಗಿ ಸಕ್ಕರೆ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸುವುದು, ಸ್ವಚ್ಛತಾ ಅಭಿಯಾನದೊಂದಿಗೆ ಪರಿಸರ ಸಂರಕ್ಷಣೆ, ಮಾದಕ ದ್ರವ್ಯ ಬಗ್ಗೆ ಮಾಹಿತಿ, ಲಯನ್ಸ್ ಸೇವಾ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿ ಸೇವಾ ಕಾರ್ಯಗಳಿಗೆ ಸ್ಪಂದಿಸುವ ಕಾರ್ಯಗಳನ್ನು ಹಾಕಿಕೊಳ್ಳಲಿದೆ ಎಂದರು.

ಅಂಗವೈಫಲ್ಯ ಅಥವಾ ವಿಶೇಷ ಮಕ್ಕಳ ಆರೈಕೆ, ಪಾಳುಬಿದ್ದ ಕೃಷಿಗೆ ಪೂರಕವಾದ ಪ್ರದೇಶವನ್ನು ಅಭಿವೃದ್ಧಿಪಡಿಸಿ ಕೃಷಿ ಮಾಡುವಂತೆ ಪ್ರೇರೇಪಿಸುವುದು, ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವುದು ಹಗೂ ಮಹಿಳಾ ಸಬಲೀಕರಣಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು, ಸೂರಿಲ್ಲದವರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ಬಡತನ ರೇಖೆಗಿಂತ ಕೆಳಗಿರುವ ಮನೆ ಇಲ್ಲದಿರುವ ಕುಟುಂಬದವರನ್ನು ಗುರುತಿಸಿ ಅವರಿಗೆ ಮನೆ ಕಟ್ಟಿ ಕೊಡಲಾಗುವುದು ಎಂದು ತಿಳಿಸಿದರು.

ಲಯನ್ಸ್‌ನ ನಾಲ್ಕು ಕಂದಾಯ ಜಿಲ್ಲೆಯಲ್ಲಿ ಶೌಚಾಲಯ ಇಲ್ಲದ ಕುಟುಂಬವನ್ನು ಗುರುತಿಸಿ ಅವರಿಗೆ ಶೌಚಾಲಯವನ್ನು ಜಿಲ್ಲೆಯ ಲಯನ್ಸ್ ಕ್ಲಬ್‌ಗಳ ಮೂಲಕ ನಿರ್ಮಿಸುವುದಕ್ಕೆ ಪ್ರೋತ್ಸಾಹ ನೀಡುವುದು ಸೇರಿದಂತೆ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಅಮೆರಿಕದ ಲಾಸ್‌ವೇಗಾಸ್‌ನಲ್ಲಿ ಜು.3ರಂದು ನಡೆದ ಅಂತರ್‌ರಾಷ್ಟ್ರೀಯ ಲಯನ್ಸ್ ಸಮ್ಮೇಳನದಲ್ಲಿ ದೇವದಾಸ್ ಭಂಡಾರಿ ಜಿಲ್ಲಾ ರಾಜ್ಯಪಾಲರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಲಯನ್ಸ್ ಜಿಲ್ಲಾ ಪ್ರಥಮ ಉಪರಾಜ್ಯಪಾಲ ರೊನಾಲ್ಡ್ ಗೋಮ್ಸ್, ದ್ವಿತೀಯ ಉಪರಾಜ್ಯಪಾಲ ಡಾ.ಗೀತ್‌ಪ್ರಕಾಶ್, ಜಿಲ್ಲಾ ಸಂಪುಟ ಕಾರ್ಯದರ್ಶಿ ಬಾಲಕೃಷ್ಣ ಹೆಗ್ಡೆ, ಖಜಾಂಚಿ ಶ್ರೀನಾಥ್ ಕೊಂಡೆ, ಪ್ರದಗ್ರಹಣ ಕಾರ್ಯಕ್ರಮದ ಕಾರ್ಯಾಧ್ಯಕ್ಷ ಶಶಿಧರ್ ಮಾರ್ಲ, ಸಾರ್ವಜನಿಕ ಸಂಪರ್ಕಾಧಿಕಾರಿ ಚಂದ್ರಹಾಸ ಶೆಟ್ಟಿ, ಡಾ.ನವೀನ್ ಶೆಟ್ಟಿ, ಮೈನಾ ಕೊಂಡೆ, ರಾಮು, ಸೌಮ್ಯಾಶೆಟ್ಟಿ, ಸ್ವರೂಪಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X