ತುರುವೇಕೆರೆ: ಕಾರು ಅಡ್ಡಗಟ್ಟಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ತುರುವೇಕೆರೆ,ಆ.04: ವಿಳಾಸ ಕೇಳುವ ನೆಪದಲ್ಲಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಮಾಯಸಂದ್ರ ಬಳಿ ನಡೆದಿದೆ.
ಮಾಯಸಂದ್ರ ನಿವಾಸಿ ಸಚಿನ್ (30) ಎಂಬಾತನೇ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕ. ಕಳೆದ ರಾತ್ರಿ ಸಚಿನ್ ಮಾಯಸಂದ್ರ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಮಾರ್ಗಮಧ್ಯೆ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು ವಿಳಾಸ ಕೇಳುವ ನೆಪದಲ್ಲಿ ಕಾರನ್ನು ಅಡ್ಡಗಟ್ಟಿ ಏಕಾಏಕಿ ಆತನ ಮೇಲೆ ಮಾರಕಾಸ್ತ್ರಗಳಿಂಗ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಸಚಿನ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ತುರುವೇಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಈತನ ದುಷ್ಕರ್ಮಿಗಳು ಹಲ್ಲೆ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ತುರುವೇಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.
Next Story





