Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಪೂಜಾ...

​ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಪೂಜಾ ಸೇವಾ ವಿವಾದ ಪ್ರಕರಣ: ಬಗೆಹರಿಸಲು ಬಾಳೆಕೋಡಿ ಮಠದ ಸ್ವಾಮೀಜಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Aug 2018 11:04 PM IST
share

ಮಂಗಳೂರು, ಆ.1: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಸಲಾಗುವ ಹಲವು ರೀತಿಯ ಪೂಜಾ ಸೇವೆಗಳನ್ನು ಸುಬ್ರಹ್ಮಣ್ಯ ಮಠದಲ್ಲಿ ನಡೆಸಬಾರದೆಂಬ ವಿರೋಧ ಖಂಡನೀಯ ಎಂದು ಬಾಳೆಕೋಡಿ ಮಠದ ಶಶಿಕಾಂತಮಣಿ ಸ್ವಾಮೀಜಿ ಹೇಳಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಕ್ಕೆ ಕ್ಷೇತ್ರದಲ್ಲಿ ನಡೆಸಲಾಗುವ ಆಶ್ಲೇಷಾ ಬಲಿ, ಸರ್ಪಸಂಸ್ಕಾರ, ನಾಗಪ್ರತಿಷ್ಠೆ ಮುಂತಾದ ಸೇವೆಗಳನ್ನು ಸುಬ್ರಹ್ಮಣ್ಯ ಮಠದಲ್ಲಿ ನಡೆಸಬಾರದು ಎಂದು ದೇವಳದ ಆಡಳಿತ ಮಂಡಳಿಯ ಕೆಲವರು ವಿರೋಧಿಸುತ್ತಿದ್ದಾರೆ ಎಂದರು.

ಇದರಿಂದ ಭಕ್ತರ ಭಾವನೆಗಳಲ್ಲಿ ಗೊಂದಲ ಮೂಡಿಸಲಾಗುತ್ತಿದೆ. ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಕೂಡಲೇ ಕ್ರಮ ತೆಗೆದುಕೊಂಡು ಪ್ರಕರಣವನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಕುಮಾರ ಪರ್ವತದಿಂದ ಕುಮಾರಧಾರಾ ನದಿಯವರೆಗೆ ಇರುವ ಕುಕ್ಕೆ ಸ್ಥಳವು ಪವಿತ್ರ ಭೂಮಿಯೆಂದೇ ಪರಿಗಣಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ಕಾನೂನುಗಳು ದೇವಸ್ಥಾನದೊಳಗೆ ಅನ್ವಯವಾಗುತ್ತವೆಯೇ ವಿನಃ ದೇವಸ್ಥಾನದ ಹೊರಗಿರುವ ಸುಬ್ರಹ್ಮಣ್ಯ ಮಠದಲ್ಲಿಯೂ ಸೇವೆಗಳನ್ನು ಮಾಡಬಾರದು ಎಂದು ಹೇಳುವುದು ಸರಿಯಲ್ಲ. ಅಲ್ಲದೆ ಪುರಾಣ ಕಾಲದಿಂದಲೂ ಸಂಪುಟೀ ನರಸಿಂಹ ದೇವರು ಸುಬ್ರಹ್ಮಣ್ಯ ದೇವರನ್ನು ಒಂದೇ ಪಲ್ಲಕ್ಕಿಯಲ್ಲಿ ಇರಿಸಿ ಉತ್ಸವ ಮಾಡಲಾಗುತ್ತಿತ್ತು. ಇದೀಗ ಉತ್ಸವ ನಿಂತು ಹೋಗಿದೆ. ಈ ನಡುವೆ, ಸೇವೆಗಳ ಕುರಿತಂತೆ ಗೊಂದಲ ಮೂಡಿಸುವ ಕೆಲಸವನ್ನು ದೇವಸ್ಥಾನದ ಆಡಳಿತ ಮಂಡಳಿ ಮಾಡಬಾರದು ಎಂದು ಹೇಳಿದರು.

ಈ ನಡುವೆ ಕ್ಷೇತ್ರದ ಸ್ವಾಮೀಜಿಯ ಮೇಲೆಯೂ ಆರೋಪ ಮಾಡುವ ಕೆಲಸ ಮಾಡಲಾಗುತ್ತಿದೆ. ಸ್ವಾಮೀಜಿಗಳೇ ಹೊರಗಿನಿಂದ ತಮ್ಮ ಲಾಭಕ್ಕಾಗಿ ಹೋಮ ಹವನ ಮಾಡಿಸುತ್ತಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿದ್ದುಕೊಂಡೇ ಇಂತಹ ಆರೋಪ ಮಾಡುವುದಾದರೆ ಅವರು ದತ್ತಿ ಇಲಾಖೆ ಸಮಿತಿಯಲ್ಲಿ ಇರಲು ಅರ್ಹರೇ ಎಂದವರು ಪ್ರಶ್ನಿಸಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದಲಿತರ ಸೇವೆ ಪ್ರಧಾನವಾದುದು. ದಲಿತರು ಮತ್ತು ದೇವಸ್ಥಾನದ ಸಿಬ್ಬಂದಿ, ಮಠದ ಸ್ವಾಮೀಜಿ ಸಾಮರಸ್ಯದಿಂದ ದೇವರ ಸೇವೆಯನ್ನು ಮಾಡಿಕೊಂಡು ಬರುತ್ತಿದ್ದಾರೆ. ಇದೀಗ ಮಠದಲ್ಲಿ ಸಲ್ಲಿಸುವ ಸೇವೆಯನ್ನು ಅನಧಿಕೃತ ಎಂದು ಹೇಳುವುದರಲ್ಲಿ ಅರ್ಥವಿಲ್ಲ ಎಂದವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಟ್ರಸ್ಟಿಗಳಾದ ಶ್ರೀಧರ್, ಸಚಿನ್ ಕುಮಾರ್, ರೋಶನ್ ಕುಮಾರ್, ಸುಮನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X