ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಸಿಂಧು ಫೈನಲ್‌ಗೆ

ನಾನ್‌ಜಿಂಗ್(ಚೀನಾ), ಆ.4: ಭಾರತದ ಸ್ಟಾರ್ ಆಟಗಾರ್ತಿ ಪಿ.ವಿ.ಸಿಂಧು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.
ಹೈದರಾಬಾದ್‌ನ ಆಟಗಾರ್ತಿ ಸಿಂಧು ಶನಿವಾರ ನಡೆದ ಮಹಿಳೆಯರ ಸಿಂಗಲ್ಸ್ ಸೆಮಿ ಫೈನಲ್‌ನಲ್ಲಿ ಜಪಾನ್‌ನ ಎರಡನೇ ಶ್ರೇಯಾಂಕದ ಅಕಾನೆ ಯಮಗುಚಿ ಅವರನ್ನು 21-16, 24-22 ಗೇಮ್‌ಗಳ ಅಂತರದಿಂದ ಮಣಿಸಿದರು.
ಸಿಂಧು ಎರಡೂ ಗೇಮ್‌ಗಳಲ್ಲಿ ಆರಂಭಿಕ ಹಿನ್ನಡೆಯಿಂದ ಚೇತರಿಸಿಕೊಂಡು ಪಂದ್ಯವನ್ನು ಗೆದ್ದುಕೊಂಡಿದ್ದು ವಿಶೇಷವಾಗಿದೆ. ಎರಡನೇ ಗೇಮ್‌ನಲ್ಲಿ 11-19 ರಿಂದ ಹಿನ್ನಡೆಯಲ್ಲಿದ್ದ ಸಿಂಧು ಅಂತಿಮವಾಗಿ 24-22 ರಿಂದ ಗೆಲುವು ಸಾಧಿಸಿದ್ದಾರೆ.
ಸಿಂಧು ಫೈನಲ್‌ನಲ್ಲಿ ಸ್ಪೇನ್ ಆಟಗಾರ್ತಿ ಕರೊಲಿನ್ ಮರಿನ್‌ರನ್ನು ಎದುರಿಸಲಿದ್ದಾರೆ. ಈ ಇಬ್ಬರು ಆಟಗಾರ್ತಿಯರು 2016ರ ಒಲಿಂಪಿಕ್ಸ್‌ನ ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದರು.
Next Story





