Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವಾಭಿಮಾನದ ಸಂಕೇತ ಅಬ್ಬಕ್ಕ: ಸಚಿವ...

ಸ್ವಾಭಿಮಾನದ ಸಂಕೇತ ಅಬ್ಬಕ್ಕ: ಸಚಿವ ಯು.ಟಿ.ಖಾದರ್

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ4 Aug 2018 10:25 PM IST
share
ಸ್ವಾಭಿಮಾನದ ಸಂಕೇತ ಅಬ್ಬಕ್ಕ: ಸಚಿವ ಯು.ಟಿ.ಖಾದರ್

ಮಂಗಳೂರು, ಆ.4: ಸ್ವಾತಂತ್ರ ಹೋರಾಟಗಾರ್ತಿ ವೀರ ರಾಣಿ ಸ್ವಾಭಿಮಾನದ ಸಂಕೇತವಾಗಿದ್ದಾರೆ ಎಂದು ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಪುರಭವನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಲಾಂಛನವನ್ನು ಲೋಕಾರ್ಪಣೆ ಗೊಳಿಸಿ ಅವರು ಮಾತನಾಡಿದರು.

ಉಳ್ಳಾಲದಲ್ಲಿ ವೀರರಾಣಿ ಅಬ್ಬಕ್ಕಳ ವೃತ್ತವನ್ನು ನಿರ್ಮಾಣ ಮಾಡಲು 10 ಲಕ್ಷ ರೂ.ನ್ನು ಬಿಡುಗಡೆ ಮಾಡಲಾಗುವುದು. ನೂತನ ಪ್ರತಿಷ್ಠಾನವನ್ನು ಒಗ್ಗಟ್ಟು, ಏಕತೆ, ಸಹೋದರತೆಯಿಂದ ನಡೆಸಿಕೊಂಡು ಹೋಗಬೇಕು. ಎಲ್ಲ ವರ್ಗಗಳನ್ನು ತೊಡಗಿಸಿಕೊಂಡು ಪೋರ್ಚುಗೀಸರ ವಿರುದ್ಧ ಹೋರಾಟ ಮಾಡುವಲ್ಲಿ ಅಬ್ಬಕ್ಕ ಯಶಸ್ವಿಯಾಗಿದ್ದರು. ಅಬ್ಬಕ್ಕ ನಾಡಿನ ಸಂಸ್ಕೃತಿಯ ಪ್ರತೀಕವಾಗಬೇಕು. ಇದಕ್ಕೆ ಸರಕಾರವೂ ಸಹಕಾರ ನೀಡಲಿದೆ ಎಂದು ಹೇಳಿದರು.

ವಿಶ್ರಾಂತ ಕುಲಪತಿ, ವಿದ್ವಾಂಸ ಡಾ.ಬಿ.ಎ.ವಿವೇಕ ರೈ ಮಾತನಾಡಿ, ದ.ಕ. ಜಿಲ್ಲೆಯಲ್ಲಿ ಸೌಹಾರ್ದ ವಾತಾವರಣ ಕ್ಷೀಣಿಸುತ್ತಿದೆ. ಪ್ರತಿಷ್ಠಾನವು ಸಾಮಾಜಿಕ ಕಳಕಳಿಯ ಕೆಲಸಗಳನ್ನು ಮಾಡುತ್ತಾ ಮುಂದುವರಿಯಬೇಕು. ಇದರಲ್ಲಿ ಮಹಿಳಾ ವಿಭಾಗ ಮಾಡಿಕೊಂಡು ದೌರ್ಜನ್ಯ, ಆತಂಕ ಎದುರಿಸುವಂತಹ ಜಾಗೃತಿ ಮೂಡಿಸುವ ಕೆಲಸಗಳನ್ನು ಪ್ರತಿಷ್ಠಾನ ಮಾಡಬೇಕು. ತಳಮಟ್ಟದ ಚಟುವಟಿಕೆಗಳನ್ನು ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಲೇಡಿಗೋಶನ್ ಹೆಸರು ಜಿಲ್ಲೆಯ ಜನತೆಗೆ ಪರಿಚಯವಿಲ್ಲ. ಆಸ್ಪತ್ರೆಯ ಹೆಸರನ್ನು ಬದಲಿಸಬೇಕು. ಅಬ್ಬಕ್ಕರಂತಹ ಹೆಸರನ್ನು ಇಡಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ರಾಣಿ ಅಬ್ಬಕ್ಕ ಸೇವಾ ಪುರಸ್ಕಾರವನ್ನು ಹಿರಿಯ ಸಮಾಜ ಸೇವಕಿ ಸುವಾಸಿನಿ ಬಬ್ಬುಕಟ್ಟೆ ಅವರಿಗೆ ಪ್ರೊ.ಬಿ.ಎ.ವಿವೇಕ ರೈ ಪ್ರದಾನ ಮಾಡಿದರು. ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಭಾಸ್ಕರ ರೈ ಕುಕ್ಕುವಳ್ಳಿ, ವಿಶ್ರಾಂತ ಪ್ರಾಧ್ಯಾಪಕ ಡಾ.ಎ.ವಿ.ನಾವಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮಾರಂಭದಲ್ಲಿ ಎಸ್.ಎಲ್.ಭೋಜೇಗೌಡ, ಐವನ್ ಡಿಸೋಜ, ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಹರಿಕೃಷ್ಣ ಪುನರೂರು, ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ .ಸಿ.ಭಂಡಾರಿ, ಕೊಂಕಣಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಆರ್.ಪಿ.ನಾಯ್ಕಾ, ಶ್ರೀದೇವಿ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕಿ ಮೈನಾ ಎಸ್.ಶೆಟ್ಟಿ, ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್‌ಕುಮಾರ್ ಕಲ್ಕೂರ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಳ್ಳಾಲ ನಗರಸಭೆ ಅಧ್ಯಕ್ಷ ಹುಸೈನ್ ಕುಂಞಿ ಮೋನು, ಬಶೀರ್ ಬೈಕಂಪಾಡಿ, ಮಮತಾ ಎಸ್. ಗಟ್ಟಿ, ಸದಾನಂದ ಬಂಗೇರಾ, ಶಿವಾನಂದ ಕರ್ಕೇರಾ, ತುಳು ಸಾಹಿತ್ಯ ಅಕಾಡಮಿ ರಿಜಿಸ್ಟ್ರಾರ್ ಚಂದ್ರಹಾಸ್ ರೈ ಬಿ. ಮತ್ತಿತರರು ಉಪಸ್ಥಿತರಿದ್ದರು.

‘ಲೇಡಿಗೋಶನ್ ಹೆಸರು ಬದಲಿಸುವುದು ಸಲ್ಲ’

ನಗರದ ಲೇಡಿಗೋಶನ್, ವೆನ್ಲಾಕ್ ಆಸ್ಪತ್ರೆಗಳಿಗೆ ಇಟ್ಟಿರುವ ಹೆಸರುಗಳನ್ನು ಬದಲಿಸಬೇಕು ಎನ್ನುವುದು ಸರಿಯಲ್ಲ. ಹೆಸರು ಬದಲಿಸುವುದರಿಂದ ಒಂದು ಸಮುದಾಯದ ಜನರ ಮನಸನ್ನು ನೋಯಿಸಿದಂತಾಗುತ್ತದೆ. ಅಭಿವೃದ್ಧಿ ಪರ ಕೆಲಸಗಳನ್ನು ಮಾಡಬೇಕೇ ಹೊರತು ಇನ್ನೊಬ್ಬರ ಮನಸ್ಸನ್ನು ಒಡೆಯಬಾರದು. ಲೇಡಿಗೋಶನ್, ವೆನ್ಲಾಕ್‌ಗಳಿಗೆ ಅವುಗಳದ್ದೇ ಆದ ಮಹತ್ವವಿದೆ. ಹೆಸರನ್ನು ಬದಲಿಸುವ ಕಾರ್ಯ ಮೆಚ್ಚುವಂತಹದ್ದಲ್ಲ. ಹೆಸರನ್ನು ಇಡುವುದೇ ಆದರೆ ನಗರಕ್ಕೆ ಇನ್ನೂ ಹೆಚ್ಚು ಕಾಲೇಜುಗಳು, ಆಸ್ಪತ್ರೆಗಳು ಮತ್ತಿತರ ಯೋಜನೆಗಳು ಬರುತ್ತಿವೆ. ಅವುಗಳಿಗೆ ಅಬ್ಬಕ್ಕ ಹೆಸರನ್ನು ಇಡಬಹುದು ಎಂದು ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X