Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪತ್ರಕರ್ತರು ರಾಜಕಾರಣಿ, ಅಧಿಕಾರಿಗಳಿಂದ...

ಪತ್ರಕರ್ತರು ರಾಜಕಾರಣಿ, ಅಧಿಕಾರಿಗಳಿಂದ ಅಂತರ ಕಾಯ್ದುಕೊಳ್ಳಬೇಕು: ಹಿರಿಯ ಪತ್ರಕರ್ತ ಬಿ.ಎಂ. ಹನೀಫ್

ವಾರ್ತಾಭಾರತಿವಾರ್ತಾಭಾರತಿ5 Aug 2018 6:34 PM IST
share
ಪತ್ರಕರ್ತರು ರಾಜಕಾರಣಿ, ಅಧಿಕಾರಿಗಳಿಂದ ಅಂತರ ಕಾಯ್ದುಕೊಳ್ಳಬೇಕು: ಹಿರಿಯ ಪತ್ರಕರ್ತ ಬಿ.ಎಂ. ಹನೀಫ್

ದಾವಣಗೆರೆ,ಆ.05: ಪತ್ರಕರ್ತರು ರಾಜಕಾರಣಿ, ಅಧಿಕಾರಿಗಳಿಂದ ಅಂತರ ಕಾಯ್ದುಕೊಳ್ಳಬೇಕು. ಜನರ ಕೆಲಸಕ್ಕಾಗಿ ಮಾತ್ರ ಅವರನ್ನು ಸಂಪರ್ಕದಲ್ಲಿಟ್ಟುಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಬಿ.ಎಂ. ಹನೀಫ್ ಸಲಹೆ ನೀಡಿದರು.

ಭಾನುವಾರ ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ವರದಿಗಾರರ ಕೂಟದಿಂದ ಏರ್ಪಡಿಸಿದ್ದ ಮಾಧ್ಯಮ ದಿನಾಚರಣೆ ಹಾಗೂ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.  

ರಾಜಕಾರಣಿಗಳು ಜನರು ಕೊಟ್ಟ ಅಧಿಕಾರದಿಂದ ಆಡಳಿತ ನಡೆಸುತ್ತಿರುತ್ತಾರೆ. ಅಂತಹ ವ್ಯಕ್ತಿಗಳಿಗೆ ನೀವು ಸಮಾಜ ಸೇವಕರೆಂದು ನೆನಪಿಸುವ ಪ್ರಯತ್ನವಾಗಬೇಕು. ಸ್ನೇಹ, ನೆರವು, ಜಾತಿ ಹೆಸರಿನಲ್ಲಿ ಬರುವ ಆಮಿಷ ಮೀರಿ ಕೆಲಸ ಮಾಡಬೇಕು. ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಪತ್ರಕರ್ತರು ಮೊದಲು ತಾವು ಶುದ್ಧವಾಗಿರಬೇಕು ಎಂದರು.

ಪ್ರಬುದ್ಧ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕಿದೆ. ಹಾಗೆಯೇ ಸ್ವತಂತ್ರ ಪತ್ರಿಕೆಗಳ ಸಂಖ್ಯೆಯೂ ಇನ್ನೂ ಹೆಚ್ಚಳ ಆಗಬೇಕಿದೆ ಎಂದ ಅವರು, ಇಂದಿನ ದಿನಗಳಲ್ಲಿ ಕಮಿಷನ್ ದಂಧೆಯೇ ಅಭಿವೃದ್ಧಿ ಎಂಬಂತಾಗಿದೆ. ಕಾಮಗಾರಿಗಳಿಗೆ ಮಂಜೂರಾದ ಒಟ್ಟು ಹಣದಲ್ಲಿ ಶೇ. 40ರಷ್ಟು ಮಾತ್ರವೇ ಸದ್ಬಳಕೆಯಾಗುತ್ತಿದೆ. ಇನ್ನುಳಿದ ಹಣವು ಕಮಿಷನ್ ರೂಪದಲ್ಲಿ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಜೇಬು ಸೇರುತ್ತಿದೆ. ಇದರ ವಿರುದ್ಧ ಧ್ವನಿ ಎತ್ತಲು ಸ್ವತಂತ್ರ ಮಾಧ್ಯಮಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗಬೇಕು ಎಂದರು.

ಪತ್ರಕರ್ತರು ಮಾಹಿತಿ ಪಡೆಯುವ ಸಲುವಾಗಿ ಅಧಿಕಾರಿ, ರಾಜಕಾರಣಿಗಳನ್ನು ಓಲೈಸುವ ಅಗತ್ಯವಿಲ್ಲ. ಅದಕ್ಕಾಗಿ ನಾನಾ ದಾರಿಗಳಿವೆ. ಯಾವುದೇ ಸಂದರ್ಭ ಪತ್ರಕರ್ತರು ಪ್ರಾಮಾಣಿಕತೆ ಮರೆಯಬಾರದು. ಭಾಷೆಯ ಬಳಕೆ, ಸಾರ್ವಜನಿಕ ಸಂಬಂಧ ಉತ್ತಮವಾಗಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು. ಕಳೆದ ವರ್ಷಗಳಿಗೆ ಹೋಲಿಸಿದರೆ ಈಗ ದಾವಣಗೆರೆ ಸಾಕಷ್ಟು ಸುಧಾರಣೆಯಾಗಿದೆ. ಇದರಲ್ಲಿ ಪತ್ರಕರ್ತರ ಕೊಡುಗೆ ಅಪಾರವಾಗಿದೆ ಎಂದರು.

ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಐನಕೈ ಮಾತನಾಡಿ, ಸ್ಮಾರ್ಟ್ ಸಿಟಿ ದಾವಣಗೆರೆಯಲ್ಲಿ ಸ್ಮಾರ್ಟ್ ಕೆಲಸಗಳು ಆಗುವಂತೆ ಪತ್ರಕರ್ತರು ನಿಗಾ ವಹಿಸಬೇಕು. ಚೆನ್ನಾಗಿರುವ ರಸ್ತೆಯನ್ನೇ ಅಗೆದು, ಕಾಮಗಾರಿಯ ಹಣ ಕೊಳ್ಳೆ ಹೊಡೆಯುವುದು ಅಭಿವೃದ್ಧಿಯಲ್ಲ. ಸಮಾಜಕ್ಕೆ ಒಳಿತಾಗುವ ಕೆಲಸಗಳ ಬಗ್ಗೆ ಪತ್ರಕರ್ತರು ಗಮನ ಹರಿಸಬೇಕು ಎಂದರು.

24*7 ಮಾಧ್ಯಮ ಯುಗದಲ್ಲಿ ಪತ್ರಿಕಾ ಕ್ಷೇತ್ರದಲ್ಲೂ ಧಾವಂತ ಮನೆ ಮಾಡುತ್ತಿದೆ. ಇದರಿಂದಾಗಿ ಪತ್ರಕರ್ತರೂ ಹೆಚ್ಚುವರಿ ಕೆಲಸ ಮಾಡುವ ಒತ್ತಡಕ್ಕೆ ಸಿಲುಕಿದ್ದಾರೆ. ಎಕ್ಸ್‍ಕ್ಲೂಸಿವ್ ಸುದ್ದಿಗಳಿಗೆ ಮಹತ್ವ ಕೊಡಬೇಕಾದ ಪರಿಸ್ಥಿತಿ ಉದ್ಭವಿಸಿದೆ. ಆದರೂ ಇತ್ತೀಚಿನ ಪತ್ರಕರ್ತರಲ್ಲಿ ಭಾಷಾಂತರ ಜ್ಞಾನ ಕಡಿಮೆ ಇದ್ದು, ಈ ಬಗ್ಗೆ ತರಬೇತಿ ಅಗತ್ಯವಿದೆ. ಕನ್ನಡವನ್ನು ಅದ್ಭುತವಾಗಿ ಬರೆಯಬಲ್ಲ ಪತ್ರಕರ್ತರಿಗೆ ಮುಂದಿನ ದಿನಗಳಲ್ಲಿ ಸಾಕಷ್ಟು ಬೇಡಿಕೆ ಸೃಷ್ಟಿಯಾಗಲಿದೆ ಎಂದು ತಿಳಿಸಿದರು.

ಇದೇ ಸಂದರ್ಭ ಪತ್ರಕರ್ತರಾದ ಎನ್.ಆರ್. ನಟರಾಜ್, ಹೆಚ್.ಎಂ. ರಾಜಶೇಖರ, ಮಂಜುನಾಥ ಕಾಡಜ್ಜಿ, ಐ. ಗುರುಶಾಂತಪ್ಪ, ಹೆಚ್.ಟಿ. ಪರಶುರಾಮ ಅವರಿಗೆ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಬಿ.ಎನ್. ಮಲ್ಲೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ನಾಗರಾಜ ಎಸ್. ಬಡದಾಳ್ ಪ್ರಾಸ್ತಾವಿಕ ಮಾತನಾಡಿದರು. ಖಜಾಂಚಿ ಎಲ್. ತಾರಾನಾಥ್, ಮಾಜಿ ಅಧ್ಯಕ್ಷರಾದ ಕೆ. ಏಕಾಂತಪ್ಪ, ಬಸವರಾಜ ದೊಡ್ಮನಿ, ಜಿ.ಎಂ.ಆರ್. ಆರಾಧ್ಯ, ಗಣೇಶ ಕಮ್ಲಾಪುರ, ವಿನಾಯಕ ಪೂಜಾರ  ಮತ್ತಿತರರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X