ಬೆಂಗಳೂರು: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಬೆಂಗಳೂರು, ಆ.5: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಇಲ್ಲಿನ ಕೆಆರ್‌ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆಆರ್‌ಪುರಂನ ಟಿಸಿಪಾಳ್ಯದ ರಂಗಪ್ಪಲೇಔಟ್‌ನ ಮೇರಿಯಮ್ಮ (40) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಜಿಗುಪ್ಸೆ ಹೊಂದಿದ್ದ ಮೇರಿಯಮ್ಮ, ಶನಿವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೆಆರ್‌ಪುಂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story





