Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾನೂನು ಬಾಹಿರವಾಗಿ ಜಾನುವಾರುಗಳ ವಶ:...

ಕಾನೂನು ಬಾಹಿರವಾಗಿ ಜಾನುವಾರುಗಳ ವಶ: ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿಗೆ ವ್ಯಾಪಾರಿಗಳ ಮನವಿ

ವಾರ್ತಾಭಾರತಿವಾರ್ತಾಭಾರತಿ5 Aug 2018 8:11 PM IST
share

ಬೆಂಗಳೂರು, ಆ.5: ವ್ಯಾಪಾರಕ್ಕಾಗಿ ಖರೀದಿಸುವ ಜಾನುವಾರುಗಳನ್ನು ಕೆಲವು ಸಂಘಟನೆಗಳು ಕಾನೂನು ಬಾಹಿರವಾಗಿ ವಶಕ್ಕೆ ಪಡೆದುಕೊಂಡು ವ್ಯಾಪಾರಿಗಳಿಗೆ ಕಿರುಕುಳ ನೀಡುತ್ತಿರುವುದನ್ನು ತಪ್ಪಿಸಿ, ನ್ಯಾಯ ಒದಗಿಸಿಕೊಡಬೇಕು ಎಂದು ಜಮೀಯತ್ ಉಲ್ ಖುರೇಷ್ ಬೀಫ್ ಮರ್ಚೆಂಟ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಏಜಾಝ್ ಖುರೇಷಿ ಮನವಿ ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯನ್ನು ಮಾಜಿ ಸಚಿವ ರೋಷನ್‌ಬೇಗ್ ನೇತೃತ್ವದಲ್ಲಿ ಭೇಟಿ ಮಾಡಿದ ಖುರೇಷಿ ಸಮುದಾಯದ ಮುಖಂಡರು ತಮಗೆ ಆಗುತ್ತಿರುವ ಕಿರುಕುಳ ಕುರಿತು ಮನವರಿಕೆ ಮಾಡಿಕೊಟ್ಟರು.

ನಮ್ಮ ಖುರೇಷಿ ಸಮುದಾಯದವರು ವ್ಯಾಪಾರಕ್ಕಾಗಿ ಬೆಂಗಳೂರು ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಿಂದ ಜಾನುವಾರುಗಳನ್ನು ಖರೀದಿಸುವುದು ಹಾಗೂ ಮಾರಾಟ ಮಾಡುವ ವೃತ್ತಿಯನ್ನು ಅವಲಂಬಿಸಿದ್ದಾರೆ. ನಾವು ಶಾಂತಿಪ್ರಿಯ ಜನ. ಸಮಾಜದ ಆರ್ಥಿಕ, ಸಾಮಾಜಿಕ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿದ್ದೇವೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ನಾವು ಜಾನುವಾರುಗಳನ್ನು ಸಾಗಿಸುವ ವಾಹನಗಳನ್ನು ಕೆಲವು ಸಮಾಜಘಾತುಕ ಶಕ್ತಿಗಳು ಹಣಕ್ಕಾಗಿ ತಡೆದು ಹಿಂಸುತ್ತಿರುವುದು ನಿರಂತರವಾಗಿ ನಡೆಯುತ್ತಿದೆ. ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸುವುದಲ್ಲದೆ, ಅವಾಚ್ಯಶಬ್ಧಗಳಿಂದ ನಿಂದಿಸುತ್ತಾರೆ. ಇವರಿಗೆ ಜಾನುವಾರುಗಳ ರಕ್ಷಕರು ಎಂದು ಕರೆಯಲ್ಪಡುವ ಕೆಲವು ಸಂಘಟನೆಗಳು ಬೆಂಬಲ ನೀಡುತ್ತಿವೆ ಎಂದು ಅವರು ದೂರಿದರು.

ಇತ್ತೀಚಿನ ಕೆಲವು ತಿಂಗಳುಗಳಿಂದ ತನ್ನನ್ನು ಜಾನುವಾರುಗಳ ರಕ್ಷಕಿ ಎಂದು ಬಿಂಬಿಸಿಕೊಳ್ಳುತ್ತಿರುವ ಮಹಿಳೆಯೊಬ್ಬರು, ಈ ಸಮಾಜಘಾತುಕ ಶಕ್ತಿಗಳೊಂದಿಗೆ ಸೇರಿ ನಮ್ಮ ವಾಹನಗಳನ್ನು ತಡೆದು, ಅದರಲ್ಲಿರುವ ಜಾನುವಾರುಗಳನ್ನು ವಶಪಡಿಸಿ =ಕೊಳ್ಳುತ್ತಿದ್ದಾರೆ. ವ್ಯಾಪಾರಿಗಳು ತಮ್ಮ ಜಾನುವಾರುಗಳನ್ನು ಕಳೆದುಕೊಂಡು ಅಸಹಾಯಕರಾಗಿ, ತಮ್ಮ ಜೀವನೋಪಾಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿಗೆ ಅವರು ತಿಳಿಸಿದರು.

ನಮ್ಮ ವ್ಯಾಪಾರಿಗಳು ಜಾನುವಾರುಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸುವಾಗ ಅವರ ವಾಹನಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡಬೇಕು. ಜಾನುವಾರು ಸಂರಕ್ಷಣಾ ಕಾಯ್ದೆ ದುರುಪಯೋಗಪಡಿಸಿಕೊಂಡು ಲಕ್ಷಾಂತರ ಜಾನುವಾರುಗಳನ್ನು ವಶಕ್ಕೆ ಪಡೆದು ಕೊಳ್ಳುತ್ತಿರುವ ಪ್ರಾಣಿ ದಯಾ ಸಂಘ, ಗೋರಕ್ಷಾ ಸಂತ ಸೇರಿದಂತೆ ಇನ್ನಿತರ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಜಾನುವಾರುಗಳಿಗೆ ಸರಿಯಾದ ರೀತಿಯಲ್ಲಿ ಮೇವು ಹಾಕುವ ಸಾಮರ್ಥ್ಯವನ್ನು ಈ ಸಂಘಟನೆಗಳು ಹೊಂದಿಲ್ಲ. ಅಶಕ್ತರಾಗುವ ಜಾನುವಾರುಗಳನ್ನು ಕೊಂದು ಅವುಗಳ ಉಪ ಉತ್ಪನ್ನಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಈ ಚಟುವಟಿಕೆಗಳನ್ನು ಮಾಧ್ಯಮಗಳೇ ಹಲವಾರು ಬಾರಿ ಬೆಳಕಿಗೆ ತಂದಿವೆ ಎಂದು ಏಜಾಝ್ ಖುರೇಷಿ ತಿಳಿಸಿದರು.

ಹಾಲು ನೀಡುವ ಹಾಗೂ ಆರೋಗ್ಯಕರವಾಗಿರುವ ಜಾನುವಾರುಗಳನ್ನು ನಮ್ಮ ವ್ಯಾಪಾರಿಗಳು ವಧೆ ಮಾಡುವುದಿಲ್ಲ. ಆದರೂ, ನಮ್ಮ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ. ಸಕ್ಷಮ ಪ್ರಾಧಿಕಾರಗಳಿಂದ ಅನುಮತಿಸಲ್ಪಡುವ ಜಾನುವಾರುಗಳನ್ನು ಮಾತ್ರ ವಧಾಗಾರಗಳಲ್ಲಿ ವಧೆ ಮಾಡಲಾಗುತ್ತಿದೆ. ಆದರೆ, ಈ ಸಂಘಟನೆಗಳು ಅಪಪ್ರಚಾರ ಮಾಡಿ ವ್ಯಾಪಾರಿಗಳು ಮಾರಾಟ ಮಾಡಲು ತಂದಿರುವ ಜಾನುವಾರುಗಳನ್ನು ತಮ್ಮ ವಶಕ್ಕೆ ಪಡೆಯುತ್ತಿದ್ದಾರೆ ಎಂದು ಅವರು ಅಸಮಾಧಾನ ಹೊರ ಹಾಕಿದರು.

ಈ ಸಮಾಜಘಾತುಕ ಶಕ್ತಿಗಳು ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ 1964 ಅನ್ನು ತಮ್ಮ ಆಯುಧದಂತೆ ಬಳಸಿಕೊಂಡು ಕಾನೂನು ಪ್ರಕಾರ ಜಾನುವಾರುಗಳ ಸಾಗಾಟ ನಡೆಯುತ್ತಿದ್ದರೂ ಅಪಪ್ರಚಾರದ ಮೂಲಕ ರಾಜ್ಯದಲ್ಲಿ ಕೋಮುಸಾಮರಸ್ಯ ಕದಡುವ ಪ್ರಯತ್ನ ಮಾಡುತ್ತಿವೆ ಎಂದು ಏಜಾಝ್ ಖುರೇಷಿ ದೂರಿದರು.

ತನಿಖಾ ಸಮಿತಿ ರಚಿಸಿ: ಈ ಮೇಲ್ಕಂಡ ಸಂಘಟನೆಗಳ ಅಧೀನದಲ್ಲಿ ಎಷ್ಟು ಜಾನುವಾರುಗಳಿವೆ ?, ವ್ಯಾಪಾರಿಗಳಿಗೆ ಸಂಬಂಧಿಸಿದ ಜಾನುವಾರುಗಳಿಂದ ಈ ಸಂಘಟನೆಗಳು ಮಾಡಿರುವ ಲಾಭವೆಷ್ಟು? ನ್ಯಾಯಾಲಯದ ಆದೇಶದಂತೆ ಈ ಸಂಘಟನೆಗಳು ಎಷ್ಟು ಜಾನುವಾರುಗಳನ್ನು ವ್ಯಾಪಾರಿಗಳಿಗೆ ಮರಳಿಸಿದ್ದಾರೆ ಎಂಬುದರ ಕುರಿತು ವಿವರವಾದ ಮಾಹಿತಿ ಸಂಗ್ರಹಿಸಲು ಒಂದು ತನಿಖಾ ಸಮಿತಿಯನ್ನು ರಚನೆ ಮಾಡಿ ಎಂದು ಮುಖ್ಯಮಂತ್ರಿಗೆ ಏಜಾಝ್ ಖುರೇಷಿ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X