ಸ್ವಚ್ಛ ಸರ್ವೇಕ್ಷಣ: ಗ್ರಾಮೀಣ-ಗ್ರಾಪಂಗಳು ಶುಚಿತ್ವಕ್ಕೆ ಗಮನಕೊಡಿ
ಉಡುಪಿ, ಆ. 5: ಜಿಲ್ಲೆಯಲ್ಲಿ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಕುರಿತಂತೆ ಪರಿಶೀಲಿಸಲು ಹೊಸದಿಲ್ಲಿಯಿಂದ ತಜ್ಞರ ತಂಡ ಆಗಮಿಸಲಿದ್ದು, ಜಿಲ್ಲೆಯ ಎಲ್ಲಾ ಗ್ರಾಪಂಗಳು ಹಾಗೂ ಸರ್ವೇಕ್ಷಣೆ ಅನುಷ್ಠಾನಕ್ಕಾಗಿ ನಿಯೋಜಿತಗೊಂಡಿ ರುವ ನೋಡಲ್ ಅಧಿಕಾರಿಗಳು ಗ್ರಾಪಂ ವ್ಯಾಪ್ತಿಯಲ್ಲಿ ಶುಚಿತ್ವವನ್ನು ಕಾಪಾಡು ವಂತೆ ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹೇಳಿದ್ದಾರೆ.
ಮಣಿಪಾಲದ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ನೋಡೆಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಆ.6ರ ಸೋಮವಾರ ಹೊಸದಿಲ್ಲಿಯ ತಂಡ ರಾಜ್ಯಕ್ಕೆ ಆಗಮಿಸಲಿದ್ದು, ಜಿಲ್ಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅವರ ಆಯ್ಕೆಯ ಗ್ರಾಪಂಗಳನ್ನು ಭೇಟಿ ಮಾಡಿ ಅಲ್ಲಿನ ಸ್ವಚ್ಚತೆಯನ್ನು ಪರಿಶೀಲಿಸಲಿದ್ದಾರೆ. ಆದ್ದರಿಂದ ಎಲ್ಲಾ ಗ್ರಾಪಂಗಳು ತಮ್ಮ ಪಂಚಾಯತ್‌ಗಳ ಸುತ್ತಮುತ್ತ ಹಾಗೂ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಸೂಚಿಸಿದರು.
ಈ ಕುರಿತು ಗ್ರಾಮದ ಎಲ್ಲಾ ಸಾರ್ವಜನಿಕರಿಗೆ ಮಾಹಿತಿ ನೀಡಿ. ಹಾಗೂ ಗ್ರಾಮ ವ್ಯಾಪ್ತಿಯ ಶಾಲೆ, ಅಂಗನವಾಡಿ, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ತಿಳಿಸಿದರು.
ಜಿಲ್ಲೆಯ ಗ್ರಾಪಂಗಳಲ್ಲಿ ನಡೆಯುವ ಸ್ವಚ್ಛ ಸರ್ವೇಕ್ಷಣೆಗೆ ನಿಯೋಜಿಸಲಾ ಗಿರುವ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಪಂಗಳಿಗೆ ನಿಯಮಿತವಾಗಿ ಭೇಟಿ ನೀಡಿ ಸ್ವಚ್ಛತೆಯ ಕುರಿತು ಪರಿಶೀಲನೆ ನಡೆಸುವಂತೆ ಅವರು ನುಡಿದರು. ಹೆದ್ದಾರಿ ಪಕ್ಕದಲ್ಲಿರುವ ಗ್ರಾಪಂಗಳು ರಸ್ತೆ ಬದಿಯಲ್ಲಿ ತ್ಯಾಜ್ಯ ಕಂಡು ಬರದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸರ್ವೇಕ್ಷಣೆಯಲ್ಲಿ ಯಾವುದೇ ನ್ಯೂನತೆ ಕಂಡು ಬರದಂತೆ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸು ವಂತೆ ತಿಳಿಸಿದರು.
ಹೆದ್ದಾರಿ ಪಕ್ಕದಲ್ಲಿರುವ ಗ್ರಾಪಂಗಳು ರಸ್ತೆ ಬದಿಯಲ್ಲಿ ತ್ಯಾಜ್ಯ ಕಂಡು ಬರದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸರ್ವೇಕ್ಷಣೆಯಲ್ಲಿ ಯಾವುದೇ ನ್ಯೂನತೆ ಕಂಡು ಬರದಂತೆ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸು ವಂತೆ ತಿಳಿಸಿದರು. ಸಭೆಯಲ್ಲಿ ಜಿಲ್ಲೆಯ ಎಲ್ಲಾ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.







