ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ: ಸ್ವಚ್ಛತಾ ರಥಕ್ಕೆ ಚಾಲನೆ

ಉಡುಪಿ, ಆ.5: ನೈರ್ಮಲ್ಯ ಹಾಗೂ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2018 ಬಗ್ಗೆ ಜಿಲ್ಲೆಯ ವಿವಿಧ ಭಾಗಗಳಿಗೆ ತೆರಳಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಸಲುವಾಗಿ ವಿಶೇಷವಾಗಿ ಸಿದ್ದಪಡಿಸಲಾದ ಸ್ವಚ್ಛತಾ ರಥಕ್ಕೆ ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಅಲೆವೂರು ಗ್ರಾಪಂನಲ್ಲಿ ಶನಿವಾರ ಚಾಲನೆ ನೀಡಿದರು.
ಅಲೆವೂರು ಗ್ರಾಪಂ ಅಧ್ಯಕ್ಷರು ಗಿಡ ನೆಟ್ಟು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಸಿ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣದ ಮಾಹಿತಿ ಕರಪತ್ರ ಬಿಡುಗಡೆಗೊಳಿಸಿದರು.
ಅಲೆವೂರು ಗ್ರಾಪಂ ಅ್ಯಕ್ಷರುಗಿಡನೆಟ್ಟುಕಾರ್ಯಕ್ರಮಕ್ಕೆಶು ಹಾರೈಸಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಸಿ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣದ ಮಾಹಿತಿ ಕರಪತ್ರ ಬಿಡುಗಡೆಗೊಳಿಸಿದರು. ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2018ರ ಬಗ್ಗೆ ಮಾಹಿತಿ ನೀಡಿದರು. ಅಲೆವೂರು ಗ್ರಾಪಂನಿಂದ ಹೊರಟ ರಥವು ಮುಂದಿನ ಮೂರು ದಿನಗಳ ಕಾಲ ಜಿಲ್ಲೆಯ ವಿವಿಧ ಗ್ರಾಪಂಗಳಿಗೆ ತೆರಳಿ ಸಾರ್ವಜನಿಕರಿಗೆ ಮಾಹಿತಿ ನೀಡಲಿದೆ.
ಕಾರ್ಯಕ್ರಮದಲ್ಲಿ ಉಡುಪಿ ತಾಪಂ ಸದಸ್ಯೆ ಬೇಬಿ ರಾಜೇಶ್, ಅಲೆವೂರು ಗ್ರಾಪಂ ಉಪಾಧ್ಯಕ್ಷೆ ಜಯಲಕ್ಷ್ಮೀ ಹಂಸರಾಜ್ ಹಾಗೂ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.







