Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ: ಹೆರಿಗೆಯಾದ ಆರು ದಿನಗಳಲ್ಲಿ ಮಗು...

ಕಡಬ: ಹೆರಿಗೆಯಾದ ಆರು ದಿನಗಳಲ್ಲಿ ಮಗು ಮೃತ್ಯು

ವೈದ್ಯರ ನಿರ್ಲಕ್ಷ್ಯ ಆರೋಪ

ವಾರ್ತಾಭಾರತಿವಾರ್ತಾಭಾರತಿ5 Aug 2018 10:24 PM IST
share
ಕಡಬ: ಹೆರಿಗೆಯಾದ ಆರು ದಿನಗಳಲ್ಲಿ ಮಗು ಮೃತ್ಯು

ಕಡಬ, ಆ. 5. ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆಯಾದ ಆರು ದಿನಗಳ ಹಸುಗೂಸೊಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆ ತಲುಪುವಷ್ಟರಲ್ಲಿಯೇ ಮೃತಪಟ್ಟಿರುವ ಘಟನೆ ಕಡಬದಲ್ಲಿ ರವಿವಾರ ನಡೆದಿದ್ದು, ವೈದ್ಯರ ಬೇಜವಾಬ್ದಾರಿಯಿಂದಾಗಿ ಮಗು ಮೃತಪಟ್ಟಿದೆ ಎಂದು ಮಗುವಿನ ಪೋಷಕರು ಆರೋಪಿಸಿದ್ದಾರೆ.

ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕಾಯರಡ್ಕ ನಿವಾಸಿ ಕೂಲಿ ಕಾರ್ಮಿಕ ಶೇಖರ ಎಂಬವರ ಪತ್ನಿ ವಸಂತಿ ಎರಡನೇ ಹೆರಿಗೆಗಾಗಿ ಜು. 30 ರಂದು ಕಡಬದ ಸಮುದಾಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿನ ವೈದ್ಯರ ಸಲಹೆಯ ಮೇರೆಗೆ ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ರಾತ್ರಿ ಸಿಸೇರಿಯನ್ ಮೂಲಕ ಹೆರಿಗೆ ನಡೆದಿದ್ದು, ವಸಂತಿ ಗಂಡು ಮಗುವಿಗೆ ಜನ್ಮ ನೀಡಿದ್ದರು. 2.65 ಕೆ.ಜಿ. ತೂಕವಿದ್ದ ಮಗು ಆರಂಭದಲ್ಲಿ ಆರೋಗ್ಯವಾಗಿತ್ತಾದರೂ ಆ ಬಳಿಕ ಸರಿಯಾಗಿ ಎದೆಹಾಲು ಉಣ್ಣುತ್ತಿರಲಿಲ್ಲ್ಲ ಎಂದು ಮಗುವಿನ ಪೋಷಕರು ವೈದ್ಯರಿಗೆ ತಿಳಿಸಿದ್ದರು.

ಆದರೆ ಆ. 4 ರಂದು ತಾಯಿ ಮತ್ತು ಮಗುವನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಹೋಗುವಂತೆ ತಿಳಿಸಲಾಗಿತ್ತು. ಮಗು ಆರೋಗ್ಯವಾಗಿಲ್ಲ ಎನ್ನುವ ಕಾರಣಕ್ಕಾಗಿ ಪೋಷಕರು ಮಗುವಿನ ಜೊತೆಗೆ ರಾತ್ರಿ ಆಸ್ಪತ್ರೆಯಲ್ಲಿಯೇ ಉಳಿದಿದ್ದರು. ರವಿವಾರ ಬೆಳಗ್ಗೆ ಅವರಿದ್ದ ಬೆಡ್‌ಗೆ ಆಸ್ಪತ್ರೆಯವರು ಬೇರೆ ರೋಗಿಯನ್ನು ದಾಖಲಿಸಿದ್ದರು. ಮಗು ಹುಷಾರಿಲ್ಲ ಚಿಕಿತ್ಸೆ ನೀಡಿ ಎಂದು ವೈದ್ಯರಲ್ಲಿ ಮನವಿ ಮಾಡಿದರೂ ನಿಮ್ಮ ಮಗು ಆರೋಗ್ಯವಾಗಿದ್ದು, ನೀವು ಇಲ್ಲಿಯೇ ಉಳಿದುಕೊಳ್ಳಲು ಈ ರೀತಿಯ ನಾಟಕ ಮಾಡುತ್ತೀರಿ ಎಂದು ಬಲವಂತವಾಗಿ 108 ಅಂಬ್ಯುಲೆನ್ಸ್‌ನಲ್ಲಿ ಅವರನ್ನು ಕಡಬಕ್ಕೆ ಕಳುಹಿಸಿದ್ದಾರೆ ಎನ್ನಲಾಗಿದ್ದು,  ಅವರು ಕಡಬ ತಲುಪಿದ ಕೆಲವೇ ಹೊತ್ತಿನಲ್ಲಿ ಮಗು ಮೃತಪಟ್ಟಿದೆ ಎಂದು ತಿಳಿಸಿದ್ದಾರೆ.

ಇದೀಗ ಈ ಬಡ ದಲಿತ ಕುಟುಂಬ ಅಸಹಾಯಕರಾಗಿ ಕಂಗಾಲಾಗಿದ್ದು, ನಮಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸುತ್ತಿದೆ. ಕಡಬ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸುಚಿತ್ರಾ ರಾವ್ ಅವರು ಸ್ಥಳಕ್ಕೆ ತೆರಳಿ ಮಾಹಿತಿ ಪಡೆದುಕೊಂಡಿದ್ದಾರೆ.

ಮಗುವಿನ ಆರೋಗ್ಯ ಚೆನ್ನಾಗಿಲ್ಲದ ಕಾರಣ ಚಿಕಿತ್ಸೆ ನೀಡಿ ಎಂದು ಎಷ್ಟೇ ಮನವಿ ಮಾಡಿದರೂ ಒತ್ತಾಯ ಪೂರ್ವಕವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ಬಡಕುಟುಂಬವೊಂದು ತಮ್ಮ ಮಗುವನ್ನು ಕಳೆದುಕೊಂಡಿದೆ. ಈ ಅನ್ಯಾಯದ ವಿರುದ್ಧ ದಲಿತ ಸಂಘಟನೆಗಳ ಮೂಲಕ ಕಾನೂನು ಹೋರಾಟ ಮಾಡಲಾಗುವುದಲ್ಲದೆ ಸಂಬಂಧಪಟ್ಟ ಅಧಿಕಾರಿಗಳಿಗೂ, ರಾಜ್ಯ ಆರೋಗ್ಯ ಸಚಿವರಿಗೂ ದೂರು ನೀಡಲಾಗುವುದು.

 -ಗುರುವಪ್ಪ ಕಲ್ಲುಗುಡ್ಡೆ, ದಸಂಸ ಜಿಲ್ಲಾ ಮುಖಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X