Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾವನೆಗಳ ಸಂವೇದನಾಶೀಲ ಅಭಿವ್ಯಕ್ತಿಗೆ...

ಭಾವನೆಗಳ ಸಂವೇದನಾಶೀಲ ಅಭಿವ್ಯಕ್ತಿಗೆ ಭಾಷೆ ಅತ್ಯಗತ್ಯ: ಪ್ರೊ. ಎಚ್.ಎಂ. ಮಹೇಶ್ವರಯ್ಯ

ವಾರ್ತಾಭಾರತಿವಾರ್ತಾಭಾರತಿ5 Aug 2018 11:13 PM IST
share
ಭಾವನೆಗಳ ಸಂವೇದನಾಶೀಲ ಅಭಿವ್ಯಕ್ತಿಗೆ ಭಾಷೆ ಅತ್ಯಗತ್ಯ: ಪ್ರೊ. ಎಚ್.ಎಂ. ಮಹೇಶ್ವರಯ್ಯ

ಮಂಗಳೂರು, ಆ.5: ಜಗತ್ತಿನ ಯಾವ ದೇಶದಲ್ಲಿಯೂ ಇಲ್ಲದಿರುವ ಭಾಷಾ ವೈವಿಧ್ಯತೆ ಭಾರತದಲ್ಲಿದ್ದು, ಅಧ್ಯಯನವೊಂದರ ಪ್ರಕಾರ ಅದಕ್ಕೆ ಇಲ್ಲಿ ಸುಮಾರು 1,650 ಭಾಷೆಗಳು ಇದ್ದುದು ಸಾಕ್ಷಿ. ಕಳೆದ 50 ವರ್ಷಗಳಲ್ಲಿ ದೇಶದ ಐದನೇ ಒಂದರಷ್ಟು ಭಾಷೆಗಳು ನಾಶ ಹೊಂದಿವೆ. ಪ್ರಸ್ತುತ ದೇಶದ 750 ಭಾಷೆಗಳು ಮಾತ್ರ ಜೀವಂತವಾಗಿವೆ. ಭಾವನೆಗಳ ಸಂವೇದನಾಶೀಲ ಅಭಿವ್ಯಕ್ತಿಗೆ ಭಾಷೆಯು ಅತ್ಯಗತ್ಯವಾಗಿದೆ. ಭಾಷಾ ಸಂವರ್ಧನೆ ಮೂಲಕ ಮುಂದಿನ ಪೀಳಿಗೆಗೆ ಭಾಷೆಗಳನ್ನು ಉಳಿಸಿಕೊಳ್ಳಬೇಕಿದೆ ಎಂದು ಕಲಬುರ್ಗಿಯ ಕರ್ನಾಟಕ ರಾಜ್ಯ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಎಚ್.ಎಂ. ಮಹೇಶ್ವರಯ್ಯ ಹೇಳಿದರು.

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಮಂಗಳೂರು ವಿಭಾಗ ವತಿಯಿಂದ ನಗರದ ಕೆನರಾ ಪದವಿ ಕಾಲೇಜು ಸೆಮಿನಾರ್ ಹಾಲ್‌ನಲ್ಲಿ ರವಿವಾರ ನಡೆದ ‘ಭಾಷಾ ಸಂವರ್ಧನೆ’ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸ್ತಬ್ಧವಾದ ವೌಖಿಕತೆ ದೇಶಕ್ಕೆ ಬೌದ್ಧಿಕ ಬರ ತರುತ್ತದೆ. ಭಾಷೆಯ ನಾಶದಿಂದ ಬುದ್ಧಿಶಕ್ತಿಯ ದಾಸ್ತಾನು ಕೂಡಾ ದುರ್ಬಲಗೊಳ್ಳುತ್ತದೆ ಎಂದ ಪ್ರೊ. ಎಚ್. ಎಂ. ಮಹೇಶ್ವರಯ್ಯ ಭಾಷೆಯ ಉಳಿವಿಗೆ ಕೇಂದ್ರ ಸರಕಾರ ಕ್ರಮ ಕೈಗೊಂಡಿದ್ದು, ಕೇಂದ್ರೀಯ ವಿದ್ಯಾಲಯ ಮೂಲಕ ಭಾಷೆಗಳ ದಾಖಲೀಕರಣ ಮಾಡಲಾಗುತ್ತಿದೆ. ಕರಾವಳಿಯ ಕೊರಗ, ಬೆಳಾರಿ ಭಾಷೆಗಳ ದಾಖಲೀಕರಣ ಮಾಡಲಾಗುತ್ತಿದ್ದೇವೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ನಮ್ಮದು ಬಹುಭಾಷಾ, ಸಂಸ್ಕೃತಿಯ ದೇಶ. ಬಹುತ್ವದ ಆಚಾರ ವಿಚಾರಗಳು ವಿಶ್ವದಲ್ಲಿ ದೇಶಕ್ಕೆ ವಿಶಿಷ್ಟ ಸ್ಥಾನ ಕಲ್ಪಿಸಿದೆ. ಸಂಸ್ಕೃತ ಭಾಷೆಯು ದೇಶದ ಪ್ರಾಚೀನ ಭಾಷೆಯಾಗಿದೆ. ಭಾರತದ ಎಲ್ಲ ಭಾಷೆಗಳ ಮೇಲೆ ಸಂಸ್ಕೃತದ ಪ್ರಭಾವ ಇದೆ. ಭಾಷೆ ಜನಪ್ರಿಯಗೊಳ್ಳಲು, ಉಳಿಯಲು ಮಾಧ್ಯಮಗಳ ಪಾತ್ರವಿದೆ. ಆದರೆ ಇಂದಿನ ಮಾಧ್ಯಮಗಳು ಭಾಷೆಯನ್ನು ನಾಶ ಮಾಡುತ್ತಿವೆ. ಪ್ರತಿ ವಾಕ್ಯದಲ್ಲೂ ಇಂಗ್ಲಿಷ್ ಬಳಕೆ ಮೂಲಕ ಕನ್ನಡಕ್ಕೆ ತೊಡಕುಂಟುಮಾಡುತ್ತಿವೆ. ಇವೆಂಟ್ ಮ್ಯಾನೇಜರ್‌ಗಳು, ಆ್ಯಂಕರ್‌ಗಳು ಪ್ರಾದೇಶಿಕ ಭಾಷೆಯನ್ನು ಹಾಳು ಮಾಡುತ್ತಿದ್ದಾರೆ. ಕೆಲವು ಸಿನೆಮಾಗಳೂ ಕೂಡಾ ಭಾಷೆಯನ್ನು ಕುಲಗೆಡಿಸುತ್ತಿವೆ ಎಂದರು.

ಕನ್ನಡ ಭಾಷೆಯನ್ನು ಯಕ್ಷಗಾನವು ಉಳಿಸುತ್ತಿವೆ. ಸಾಮರಸ್ಯದ ಬದುಕಿಗೆ ತುಳು ಭಾಷೆಯು ದೊಡ್ಡ ಕೊಡುಗೆಯನ್ನೇ ನೀಡುತ್ತಿವೆ. ಶೈಕ್ಷಣಿಕ ಸಂಸ್ಥೆಗಳು ಕೂಡಾ ದೇಶಿಯ ಭಾಷೆಗಳ ಉಳಿವಿಗೆ ಮುಂದಾಗಬೇಕು. ನ.15ರಿಂದ 18ರವರೆಗೆ ನಡೆಯುವ ಆಳ್ವಾಸ್ ನುಡಿಸಿರಿಯಲ್ಲಿ ‘ಕರ್ನಾಟಕ ದರ್ಶನ’ ಪರಿಕಲ್ಪನೆಯೊಂದಿಗೆ ಭಾಷೆಯನ್ನು ಪ್ರಮುಖ ವಿಚಾರವಾಗಿಟ್ಟುಕೊಂಡು ಚಿಂತನ ಮಂಥನ ನಡೆಸಲಾಗುವುದು ಎಂದು ಡಾ.ಮೋಹನ್ ಆಳ್ವ ಹೇಳಿದರು.

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ದಿಕ್ಸೂಚಿ ಭಾಷಣಗೈದರು. ಪ್ರಜ್ಞಾ ಪ್ರವಾಹ ದಕ್ಷಿಣ ಮಧ್ಯ ಕ್ಷೇತ್ರ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ರಘುನಂದನ್, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ಉಪಸ್ಥಿತರಿದ್ದರು.

ಕಾರ್ಯಾಗಾರ ಸಂಚಾಲನಾ ಸಮಿತಿ ಅಧ್ಯಕ್ಷ ರಮೇಶ ಕೆ. ಸ್ವಾಗತಿಸಿದರು. ಕಾರ್ಯದರ್ಶಿ ಶೈಲೇಶ್ ವಂದಿಸಿದರು. ಉಪನ್ಯಾಸಕ ಕೇಶವ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X