ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾಗಿ ಎನ್.ಆರ್.ವಿಶುಕುಮಾರ್ ಅಧಿಕಾರ ಸ್ವೀಕಾರ
ಬೆಂಗಳೂರು, ಆ. 6: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ನಿರ್ದೇಶಕರಾಗಿ ಎನ್.ಆರ್.ವಿಶುಕುಮಾರ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಮೂಲತಃ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಯಾಗಿರುವ ವಿಶುಕುಮಾರ್ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರ ಕರ್ತವ್ಯದೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರ ಹುದ್ದೆಯಲ್ಲಿ ಪ್ರಭಾರದಲ್ಲಿರಿಸಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಅಧಿಕಾರ ವಹಿಸಿಕೊಂಡರು.
ನೂತನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಎನ್.ಆರ್.ವಿಶುಕುಮಾರ್ ಅವರಿಗೆ, ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ದಿನೇಶ್, ಜಂಟಿ ನಿರ್ದೇಶಕ ಬಸವರಾಜ ಕಂಬಿ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪುಷ್ಪಗುಚ್ಚ ನೀಡಿ ಅಭಿನಂದಿಸಿದರು.
Next Story