ಸೋಮವಾರಪೇಟೆ: ವಕೀಲರ ಮೇಲಿನ ಹಲ್ಲೆ ಖಂಡಿಸಿ ಕಲಾಪ ಬಹಿಷ್ಕಾರ
ಸೋಮವಾರಪೇಟೆ,ಆ.06: ಇಲ್ಲಿನ ವಕೀಲರ ಸಂಘದ ಅಧ್ಯಕ್ಷರಾದ ಎಂ.ಬಿ.ಅಭಿಮನ್ಯು ಕುಮಾರ್ ರವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಖಂಡಿಸಿ ವಕೀಲರುಗಳು ಸೋಮವಾರದಂದು ನ್ಯಾಯಾಲಯ ಕಾರ್ಯಕಲಾಪವನ್ನು ಬಹಿಷ್ಕರಿಸಿದರು.
ವಕೀಲರ ಸಂಘದ ಉಪಾಧ್ಯಕ್ಷರಾದ ಕಾಟ್ನಮನೆ ವಿಠಲಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲ್ಲೆ ನಡೆಸಿದ ಇಬ್ಬರು ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿ, ಒಂದು ದಿನದ ಕಲಾಪವನ್ನು ಬಹಿಷ್ಕರಿಸಿದರು.
Next Story