Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನನ್ನ ಪುತ್ರ ರಶ್ಯ ವಕೀಲರನ್ನು...

ನನ್ನ ಪುತ್ರ ರಶ್ಯ ವಕೀಲರನ್ನು ಭೇಟಿಯಾಗಿದ್ದು ನಿಜ: ಒಪ್ಪಿಕೊಂಡ ಟ್ರಂಪ್

ವಾರ್ತಾಭಾರತಿವಾರ್ತಾಭಾರತಿ6 Aug 2018 8:48 PM IST
share
ನನ್ನ ಪುತ್ರ ರಶ್ಯ ವಕೀಲರನ್ನು ಭೇಟಿಯಾಗಿದ್ದು ನಿಜ: ಒಪ್ಪಿಕೊಂಡ ಟ್ರಂಪ್

 ವಾಶಿಂಗ್ಟನ್, ಆ. 6: ಎದುರಾಳಿಯೊಬ್ಬರ ಕುರಿತು ಮಾಹಿತಿ ಸಂಗ್ರಹಿಸುವುದಕ್ಕಾಗಿ ತನ್ನ ಪುತ್ರ 2016ರಲ್ಲಿ ‘ಟ್ರಂಪ್ ಟವರ್’ನಲ್ಲಿ ರಶ್ಯದ ವಕೀಲರೊಬ್ಬರನ್ನು ಭೇಟಿಯಾಗಿರುವುದು ನಿಜ ಎಂಬುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವಿವಾರ ಒಪ್ಪಿಕೊಂಡಿದ್ದಾರೆ. ಆದರೆ, ಇದು ‘ಸಂಪೂರ್ಣವಾಗಿ ಕಾನೂನುಬದ್ಧ’ ಎಂಬುದಾಗಿ ಸಮರ್ಥಿಸಿಕೊಂಡಿದ್ದಾರೆ.

2016ರ ಜೂನ್‌ನಲ್ಲಿ ನಡೆದ ಈ ಭೇಟಿಯ ಉದ್ದೇಶ, ಅಧ್ಯಕ್ಷೀಯ ಚುನಾವಣೆಯಲ್ಲಿ ತನ್ನ ಪ್ರತಿಸ್ಪರ್ಧಿಯಾಗಿದ್ದ ಡೆಮಾಕ್ರಟಿಕ್ ಪಕ್ಷದ ಹಿಲರಿ ಕ್ಲಿಂಟನ್ ಮೇಲೆ ಕೆಸರು ಎರಚುವುದಾಗಿತ್ತು ಎಂಬುದನ್ನು ಟ್ರಂಪ್ ಈ ಮೂಲಕ ಮೊದಲ ಬಾರಿಗೆ ನೇರವಾಗಿ ಒಪ್ಪಿಕೊಂಡಿದ್ದಾರೆ.

ತನ್ನ ಮಗ ಡೊನಾಲ್ಡ್ ಜೂನಿಯರ್ ಮತ್ತು ರಶ್ಯ ಸರಕಾರದೊಂದಿಗೆ ನಂಟು ಹೊಂದಿರುವ ವಕೀಲೆ ನಟಾಲಿಯಾ ವೆಸೆಲ್ನಿಸ್ಕಯ ನಡುವಿನ ಭೇಟಿಯ ಬಗ್ಗೆ ತನಗೆ ಅಂದು ತಿಳಿದಿರಲಿಲ್ಲ ಎಂದು ಟ್ರಂಪ್ ಹೇಳಿಕೊಂಡರು.

ಇದೇ ಮಾತನ್ನು ಅವರು ಹಿಂದಿನಿಂದಲೂ ಹೇಳಿಕೊಂಡು ಬರುತ್ತಿದ್ದಾರೆ.

‘‘ಅದು ಎದುರಾಳಿಯೊಬ್ಬರ ಬಗ್ಗೆ ಮಾಹಿತಿ ಪಡೆಯಲು ನಡೆದ ಭೇಟಿಯಾಗಿತ್ತು. ಅದು ಸಂಪೂರ್ಣವಾಗಿ ಕಾನೂನುಬದ್ಧವಾಗಿದೆ ಹಾಗೂ ಅದು ರಾಜಕೀಯದಲ್ಲಿ ಎಲ್ಲ ಕಾಲದಲ್ಲೂ ನಡೆದುಕೊಂಡು ಬಂದಿದೆ. ನನಗೆ ಅದರ ಬಗ್ಗೆ ಗೊತ್ತಿರಲಿಲ್ಲ’’ ಎಂದರು.

2016ರ ಅಧ್ಯಕ್ಷೀಯ ಚುನಾವಣೆಯನ್ನು ಟ್ರಂಪ್ ಪರವಾಗಿ ತಿರುಗಿಸುವ ಪ್ರಯತ್ನವಾಗಿ ಟ್ರಂಪ್ ಪ್ರಚಾರ ತಂಡದ ಸದಸ್ಯರು ರಶ್ಯದೊಂದಿಗೆ ಕೈಜೋಡಿಸಿದ್ದರೇ ಎನ್ನುವ ಬಗ್ಗೆ ವಿಶೇಷ ವಕೀಲ ರಾಬರ್ಟ್ ಮುಲ್ಲರ್ ತನಿಖೆ ನಡೆಸುತ್ತಿದ್ದಾರೆ.

ಟ್ರಂಪ್ ಜೂನಿಯರ್ ಮತ್ತು ರಶ್ಯನ್ ವಕೀಲೆ ನಡುವೆ ನಡೆದ ಸಭೆಯ ಬಗ್ಗೆ ಮುಲ್ಲರ್ ತೀವ್ರ ತನಿಖೆ ನಡೆಸುತ್ತಿದ್ದಾರೆ.

ಮುಲ್ಲರ್ ವಿರುದ್ಧ ತೀವ್ರ ವಾಗ್ದಾಳಿ

  2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಸಂದರ್ಭದಲ್ಲಿ ಡೆಮಾಕ್ರಟಿಕ್ ಅಭ್ಯರ್ಥಿ ಹಿಲರಿ ಕ್ಲಿಂಟನ್‌ರನ್ನು ಸೋಲಿಸುವುದಕ್ಕಾಗಿ, ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್‌ರ ಪ್ರಚಾರ ತಂಡವು ರಶ್ಯ ಸರಕಾರದೊಂದಿಗೆ ನಂಟು ಹೊಂದಿತ್ತೇ ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಸುತ್ತಿರುವ ವಿಶೇಷ ವಕೀಲ ರಾಬರ್ಟ್ ಮುಲ್ಲರ್ ವಿರುದ್ಧ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಿಂದಿನಿಂದಲೂ ತೀವ್ರ ವಾಗ್ದಾಳಿ ನಡೆಸುತ್ತಲೇ ಬಂದಿದ್ದಾರೆ.

‘‘ಅವರ ತನಿಖೆಯು ನಮ್ಮ ದೇಶದ ಇತಿಹಾಸದಲ್ಲೇ ಅತ್ಯಂತ ಏಕಪಕ್ಷೀಯ ಸೇಡಿನ ಕ್ರಮವಾಗಿದೆ ಹಾಗೂ ಅವರ ತನಿಖೆಯಲ್ಲಿರುವುದು ಸುಳ್ಳುಗಳು ಮತ್ತು ಭ್ರಷ್ಟಾಚಾರ’’ ಎಂಬುದಾಗಿ ಟ್ರಂಪ್ ಆಗಾಗ ಟ್ವೀಟ್ ಮಾಡುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X