Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 13 ಜಿಲ್ಲೆಗಳಲ್ಲಿ ಮಳೆಯ ಕೊರತೆ:...

13 ಜಿಲ್ಲೆಗಳಲ್ಲಿ ಮಳೆಯ ಕೊರತೆ: ಆರ್.ವಿ.ದೇಶಪಾಂಡೆ

ಪರ್ಯಾಯ ಬೆಳೆ ಬೆಳೆಯಲು ಯೋಜನೆ ಸಿದ್ಧ

ವಾರ್ತಾಭಾರತಿವಾರ್ತಾಭಾರತಿ7 Aug 2018 7:28 PM IST
share
13 ಜಿಲ್ಲೆಗಳಲ್ಲಿ ಮಳೆಯ ಕೊರತೆ: ಆರ್.ವಿ.ದೇಶಪಾಂಡೆ

ಬೆಂಗಳೂರು, ಆ.7: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಉತ್ತಮವಾಗಿದ್ದರೂ, ಒಟ್ಟಾರೆ ಅಂಕಿ ಅಂಶಗಳನ್ನು ಗಮನಿಸಿದರೆ 13 ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾಗಿದೆ ಎಂದು ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.

ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟಾರೆಯಾಗಿ ಶೇ.3ರಷ್ಟು ಮಳೆ ಕೊರತೆ ಕಂಡು ಬಂದಿದೆ. ಕಲಬುರ್ಗಿ, ಕೊಪ್ಪಳ, ಬಿಜಾಪುರ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಸೇರಿದಂತೆ 13 ಜಿಲ್ಲೆಗಳು ಮಳೆ ಕೊರತೆ ಅನುಭವಿಸುತ್ತಿದ್ದು, ಈ ಪೈಕಿ 10 ಜಿಲ್ಲೆಗಳು ಉತ್ತರ ಒಳನಾಡಿನಲ್ಲಿದೆ ಎಂದರು.

ನೈರುತ್ಯ ಮುಂಗಾರು ಮಳೆಯು ಮೇ 19ರಂದು ರಾಜ್ಯ ಪ್ರವೇಶಿಸಿತು. ಜೂ.8ರ ವೇಳೆಗೆ ಇಡೀ ರಾಜ್ಯವನ್ನು ವ್ಯಾಪಿಸಿತು. ಜೂ.10ರ ಹೊತ್ತಿಗೆ ರಾಜ್ಯದ ಶೇ.93ರಷ್ಟು ಪ್ರದೇಶವನ್ನು ಆವರಿಸಿತು. ನಂತರ, ರಾಜ್ಯದ ಘಟ್ಟ ಪ್ರದೇಶ ಮತ್ತು ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆ ಅಬ್ಬರದಿಂದ ಮುಂದುವರೆದ ಫಲವಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಎಲ್ಲ ಪ್ರಮುಖ ಅಣೆಕಟ್ಟುಗಳು ಭರ್ತಿಯಾದವು ಎಂದು ಅವರು ಹೇಳಿದರು.

ಮಳೆ ಕೊರತೆ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯು ಕಡಿಮೆ ನೀರು ಬೇಡುವ ರಾಗಿ ಸೇರಿದಂತೆ ಇನ್ನಿತರ ಬೆಳೆಗಳನ್ನು ಬೆಳೆಯಲು ಅಗತ್ಯವಾದ ಯೋಜನೆಯನ್ನು ಸಿದ್ಧಪಡಿಸಿ, ಜಾರಿಗೊಳಿಸುತ್ತಿದೆ. ಇದರಿಂದಾಗಿ, ಸಂಭವನೀಯ ಬೆಳೆ ನಷ್ಟವನ್ನು ಗಮನಾರ್ಹ ಪ್ರಮಾಣದಲ್ಲಿ ತಡೆಯಲು ಸಾಧ್ಯವಿದೆ ಎಂದು ದೇಶಪಾಂಡೆ ಹೇಳಿದರು.

ಇನ್ನೊಂದೆಡೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಲ ಸಂರಕ್ಷಣೆ ಕಾರ್ಯಗಳಿಗೆ ಆದ್ಯತೆ ನೀಡಿದ್ದು, 150 ದಿನಗಳ ಉದ್ಯೋಗ ಸೃಷ್ಟಿಸಲು ಅಗತ್ಯ ಗಮನ ಹರಿಸಲಾಗಿದೆ. ಮಳೆ ಕೊರತೆ ಹಿನ್ನೆಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಯಾವುದೇ ಕಾರಣಕ್ಕೂ ಮೇವಿನ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

12 ಜಿಲ್ಲೆಯ 184 ಗ್ರಾಮಗಳಿಗೆ 275 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 277 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಆಧಾರದಲ್ಲಿ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ತಲಾ 5 ಕೋಟಿ ರೂ.ಗಳನ್ನು ಕುಡಿಯುವ ನೀರಿಗಾಗಿ ಬಳಸಲು ಒದಗಿಸಲಾಗಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಗಳಲ್ಲಿ 221.23 ಕೋಟಿ ರೂ.ಗಳು ಲಭ್ಯವಿದೆ ಎಂದು ದೇಶಪಾಂಡೆ ಹೇಳಿದರು.

ರಾಜ್ಯದ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಹವಾಮಾನ ವೀಕ್ಷಣೆ ಸಮಿತಿಯು ರಾಜ್ಯದಲ್ಲಿ ಕಂಡು ಬರುತ್ತಿರುವ ಬರ ಪರಿಸ್ಥಿತಿ ಬಗ್ಗೆ ಸಂಬಂಧಿತ ಇಲಾಖೆಗಳೊಂದಿಗೆ ವಾರಕ್ಕೊಮ್ಮೆ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ. ನನ್ನ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಂಪುಟ ಉಪ ಸಮಿತಿಯು ಬರ ಪರಿಸ್ಥಿತಿಯ ಲಕ್ಷಣಗಳ ಕುರಿತು ಎರಡು ಸಭೆಗಳನ್ನು ನಡೆಸಿದ್ದು, ಮಳೆ ಕೊರತೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಿದೆ ಎಂದು ಅವರು ತಿಳಿಸಿದರು.

ಕೇಂದ್ರ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಬರ ನಿರ್ವಹಣೆ ಕುರಿತು ಹೊಸ ವಿಧಾನವನ್ನು ಜಾರಿಗೆ ತಂದಿದೆ. ಈ ವಿಧಾನವು ಹೆಚ್ಚು ವೈಜ್ಞಾನಿಕವಾದ ಮಾನದಂಡಗಳನ್ನು ಹೊಂದಿದೆ. ಅದರನ್ವಯ ಮಳೆ ಕೊರತೆ ಮತ್ತು ಮಳೆ ರಹಿತ ಸ್ಥಿತಿಗತಿಗಳ ಅಂಶಗಳನ್ನು ಮತ್ತು ಬರದ ಪರಿಣಾಮವನ್ನು ಅಳೆಯಲು ಬೀಜ ಬಿತ್ತನೆ ಪ್ರದೇಶ, ತೇವಾಂಶ ಮತ್ತು ನೀರಿನ ಲಭ್ಯತೆಯ ಸೂಚ್ಯಂಕಗಳನ್ನು ಒಳಗೊಂಡಿದೆ ಎಂದು ದೇಶಪಾಂಡೆ ಹೇಳಿದರು.

ಪ್ರತಿ 30 ವರ್ಷಕ್ಕೊಮ್ಮೆ ರಾಜ್ಯದ ಎಲ್ಲ ಭೂ ದಾಖಲೆಗಳ ಸರ್ವೇ ನಡೆಯಬೇಕು. ಆದರೆ, 1964ರ ನಂತರ 54 ವರ್ಷಗಳಾದರೂ ಈವರೆಗೆ ಅಂತಹ ಸರ್ವೇ ನಡೆದಿಲ್ಲ. 2018-19ನೆ ಸಾಲಿನಲ್ಲಿ ಬೆಳಗಾವಿ, ರಾಮನಗರ, ಉತ್ತರ ಕನ್ನಡ, ತುಮಕೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಭೂ ದಾಖಲೆಗಳ ಸರ್ವೇ ನಡೆಯಲಿದ್ದು, ಮುಂದಿನ ದಿನಗಳಲ್ಲಿ ಇತರ ಜಿಲ್ಲೆಗಳಲ್ಲೂ ಈ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ನಗರ ಪ್ರದೇಶಗಳಲ್ಲಿನ ಆಸ್ತಿಗಳ ಮಾಲಕತ್ವದ ದಾಖಲೆಗಳ ಯೋಜನೆ (ಯುಪಿಓಆರ್)ಯು ಶಿವಮೊಗ್ಗದಲ್ಲಿ ಯಶಸ್ವಿಯಾಗಿದ್ದು, ಈಗ ಮಂಗಳೂರಿನಲ್ಲಿ ಆರಂಭಿಸಲು ಸಿದ್ಧತೆಗಳು ಆರಂಭವಾಗಿದೆ. ಈಗಾಗಲೆ ಅಲ್ಲಿನ ಜಿಲ್ಲಾಧಿಕಾರಿಗಳು ಜನಪ್ರತಿನಿಧಿಗಳು, ಜನಸಾಮಾನ್ಯರನ್ನು ಕರೆದು ಈ ಯೋಜನೆ ಕುರಿತು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ದೇಶಪಾಂಡೆ ಹೇಳಿದರು.

ಬಗರ್‌ಹುಕುಂ ಸಮಿತಿ, ಅರಣ್ಯ ಹಕ್ಕು ಸಮಿತಿಯನ್ನು ರಚನೆ ಮಾಡಿ, ಆ.20ರೊಳಗೆ ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಭೂಮಿ ಹಂಚಿಕೆಯಲ್ಲಿ ಕೆಲವೆಡೆ ಸಮಸ್ಯೆಗಳಿವೆ, ಅವುಗಳನ್ನು ಸರಿಪಡಿಸಲಾಗುವುದು. ಒಂದು ವೇಳೆ ಅನರ್ಹರು ಇದರ ಪ್ರಯೋಜನ ಪಡೆದಿರುವುದು ಕಂಡುಬಂದರೆ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
-ಆರ್.ವಿ.ದೇಶಪಾಂಡೆ, ಕಂದಾಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X