Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್ ವಿರುದ್ಧದ ಮೊದಲ ಸುತ್ತಿನ...

ಇರಾನ್ ವಿರುದ್ಧದ ಮೊದಲ ಸುತ್ತಿನ ದಿಗ್ಬಂಧನ ಜಾರಿ

ಮಾತುಕತೆಗೆ ತೆರೆದ ಮನಸ್ಸು ಎಂದ ಟ್ರಂಪ್

ವಾರ್ತಾಭಾರತಿವಾರ್ತಾಭಾರತಿ7 Aug 2018 7:57 PM IST
share
ಇರಾನ್ ವಿರುದ್ಧದ ಮೊದಲ ಸುತ್ತಿನ ದಿಗ್ಬಂಧನ ಜಾರಿ

ವಾಶಿಂಗ್ಟನ್, ಆ. 7: ಇರಾನ್ ಜೊತೆಗಿನ ಪರಮಾಣು ಒಪ್ಪಂದದಿಂದ ಹಿಂದೆ ಸರಿದ ಬಳಿಕ, ಅಮೆರಿಕ ಸೋಮವಾರ ಆ ದೇಶದ ವಿರುದ್ಧ ಮೊದಲ ಸುತ್ತಿನ ವ್ಯಾಪಾ ದಿಗ್ಬಂಧನಗಳನ್ನು ಘೋಷಿಸಿದೆ.

2015ರ ಪರಮಾಣು ಒಪ್ಪಂದವನ್ನು ಮರುರೂಪಿಸುವಂತೆ ಇರಾನ್ ಮೇಲೆ ಒತ್ತಡ ಹೇರುವುದು ಈ ದಿಗ್ಬಂಧನದ ಉದ್ದೇಶವಾಗಿದೆ. ದಿಗ್ಬಂಧನವು ಮಂಗಳವಾರದಿಂದ ಜಾರಿಗೆ ಬಂದಿದೆ.

ಮೂಲ ಪರಮಾಣು ಒಪ್ಪಂದದಿಂದ ಮೇ ತಿಂಗಳಲ್ಲಿ ಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತ ಹಿಂದೆ ಬಂದಿರುವುದನ್ನು ಸ್ಮರಿಸಬಹುದಾಗಿದೆ.

ಇರಾನ್‌ನ ವಾಹನ ಕ್ಷೇತ್ರ ಹಾಗೂ ಚಿನ್ನ ಮುಂತಾದ ಅಮೂಲ್ಯ ಲೋಹಗಳ ವ್ಯಾಪಾರಕ್ಕೆ ದಿಗ್ಬಂಧನ ಅನ್ವಯಿಸುತ್ತದೆ. ಅದೂ ಅಲ್ಲದೆ, ಅಂತಾರಾಷ್ಟ್ರೀಯ ವ್ಯಾಪಾರಕ್ಕೆ ಬಳಸುವ ಕರೆನ್ಸಿ ಅಮೆರಿಕ ಡಾಲರನ್ನು ಇರಾನ್ ಬಳಸುವುದನ್ನು ಈ ದಿಗ್ಬಂಧನ ನಿಷೇಧಿಸುತ್ತದೆ.

‘‘ಇರಾನ್ ಸರಕಾರದ ಮೇಲೆ ಗರಿಷ್ಠ ಆರ್ಥಿಕ ಒತ್ತಡವನ್ನು ಹೇರುವುದನ್ನು ನಾವು ಮುಂದುವರಿಸುತ್ತೇವೆ. ಅದೇ ವೇಳೆ, ಇರಾನ್‌ನ ಪ್ರಕ್ಷೇಪಕ ಕ್ಷಿಪಣಿ ಕಾರ್ಯಕ್ರಮ ಮತ್ತು ಭಯೋತ್ಪಾದನೆಗೆ ಅದು ನೀಡುತ್ತಿರುವ ಬೆಂಬಲ ಸೇರಿದಂತೆ ಅದರ ಆಕ್ಷೇಪಣೀಯ ಚಟುವಟಿಕೆಗಳನ್ನು ನಿಭಾಯಿಸುವ ಹೆಚ್ಚು ಸಮಗ್ರ ಒಪ್ಪಂದದ ಬಗ್ಗೆ ಮಾತುಕತೆ ನಡೆಸಲು ನಾನು ತೆರೆದ ಮನಸ್ಸು ಹೊಂದಿದ್ದೇನೆ. ಈ ಪ್ರಯತ್ನಗಳಲ್ಲಿ ಸಮಾನ ಮನಸ್ಕ ದೇಶಗಳೊಂದಿಗಿನ ಭಾಗೀದಾರಿಕೆಯನ್ನು ಅಮೆರಿಕ ಸ್ವಾಗತಿಸುತ್ತದೆ’’ ಎಂದು ದಿಗ್ಬಂಧನಗಳನ್ನು ಘೋಷಿಸುತ್ತಾ ಟ್ರಂಪ್ ಟ್ವೀಟ್ ಮಾಡಿದ್ದಾರೆ.

ಮುಂದಿನ ಸುತ್ತಿನ ದಿಗ್ಬಂಧನಗಳು ನವೆಂಬರ್‌ನಲ್ಲಿ ಜಾರಿಗೆ ಬರಲಿವೆ. ಆ ದಿಗ್ಬಂಧನಗಳು ಇರಾನ್‌ನ ಬಂದರುಗಳು ಮತ್ತು ಕಚ್ಚಾತೈಲ ರಫ್ತುಗಳ ಮೇಲೆ ಹೊಡೆತ ನೀಡುತ್ತವೆ.

ಮಾತುಕತೆ ಪ್ರಸ್ತಾಪ ತಿರಸ್ಕರಿಸಿದ ಇರಾನ್

ಇರಾನ್ ವಿರುದ್ಧ ಮೊದಲ ಸುತ್ತಿನ ಆರ್ಥಿಕ ದಿಗ್ಬಂಧನಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಘೋಷಿಸಿದಂತೆಯೇ, 2015ರ ಪರಮಾಣು ಒಪ್ಪಂದವನ್ನು ಮರುರೂಪಿಸಲು ಅದು ನೀಡಿರುವ ಕರೆಯನ್ನು ಇರಾನ್ ತಿರಸ್ಕರಿಸಿದೆ.

ಒಪ್ಪಂದದಿಂದ ಅಮೆರಿಕ ಹೊರಬಂದ ಹೊರತಾಗಿಯೂ, ಒಪ್ಪಂದದ ಇತರ ಪಕ್ಷಗಳಾದ ರಶ್ಯ, ಜರ್ಮನಿ, ಬ್ರಿಟನ್, ಚೀನಾ ಮತ್ತು ಫ್ರಾನ್ಸ್‌ಗಳು ಒಪ್ಪಂದದಲ್ಲೇ ಮುಂದುವರಿದಿರುವುದನ್ನು ಸ್ಮರಿಸಬಹುದಾಗಿದೆ.

‘‘ನೀವೊಂದು ಶತ್ರುವಾಗಿದ್ದೀರಿ ಹಾಗೂ ನೀವು ಇನ್ನೊಬ್ಬ ವ್ಯಕ್ತಿಗೆ ಚೂರಿಯಿಂದ ಇರಿಯುತ್ತೀರಿ. ಆದರೆ, ನಂತರ ಮಾತುಕತೆಗೆ ಸಿದ್ಧ ಎಂದು ನೀವು ಹೇಳುತ್ತೀರಿ. ಹಾಗಾದರೆ, ನೀವು ಮೊದಲು ಚೂರಿಯನ್ನು ತೆಗೆಯಬೇಕಾಗುತ್ತದೆ’’ ಎಂದು ಇರಾನ್ ಅಧ್ಯಕ್ಷ ಹಸನ್ ರೂಹಾನಿ ಸರಕಾರಿ ಟೆಲಿವಿಶನ್‌ನಲ್ಲಿ ಹೇಳಿದ್ದಾರೆ.

‘‘ಅವರು ಇರಾನ್ ದೇಶದ ವಿರುದ್ಧ ಮಾನಸಿಕ ಯುದ್ಧ ನಡೆಸಲು ಹೊರಟಿದ್ದಾರೆ. ದಿಗ್ಬಂಧನಗಳು ಜಾರಿಯಲ್ಲಿರುವಾಗ ಮಾತುಕತೆ ಸರಿಯಾಗುವುದಿಲ್ಲ’’ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X