ಕರ್ನಾಟಕ ಲೋಕಸೇವಾ ಆಯೋಗ: ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
ಬೆಂಗಳೂರು, ಆ.7: ಕರ್ನಾಟಕ ಲೋಕಸೇವಾ ಆಯೋಗವು ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿನ ಗ್ರಂಥಪಾಲಕರ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಆಯೋಗದ ವೆಬ್‌ಸೈಟ್ www.kpsc.kar.nic.in ನಲ್ಲಿ ಪ್ರಕಟಿಸಲಾಗಿದೆ.
ಆಯೋಗದ ವೆಬ್‌ಸೈಟ್ ನಿಂದ ಅಭ್ಯರ್ಥಿಗಳು ಪಟ್ಟಿಯನ್ನು ಪಡೆದು, ಪಟ್ಟಿ ಪ್ರಕಟಿಸಿದ ಏಳು ದಿನಗಳೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





