Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ರಕ್ತ ಸಂಬಂಧ’ ಕನ್ನಡ ಕಿರುಚಿತ್ರ...

‘ರಕ್ತ ಸಂಬಂಧ’ ಕನ್ನಡ ಕಿರುಚಿತ್ರ ಬಿಡುಗಡೆ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ7 Aug 2018 9:24 PM IST
share
‘ರಕ್ತ ಸಂಬಂಧ’ ಕನ್ನಡ ಕಿರುಚಿತ್ರ ಬಿಡುಗಡೆ ಸಮಾರಂಭ

ಮಂಗಳೂರು, ಆ.7: ದಿಲ್ಲಿ ಕನ್ನಡ ಹಿರಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಾತ್ರ ವಹಿಸಿದ ಸಂಜನಾರವಿ ನಿರ್ದೇಶನದ ಸಾಮಾಜಿಕ ಜಾಗೃತಿ ಮೂಡಿಸುವ ‘ರಕ್ತ ಸಂಬಂಧ’ ಕನ್ನಡ ಕಿರುಚಿತ್ರದ ಬಿಡುಗಡೆ ಸಮಾರಂಭವು ಇತ್ತೀಚೆಗೆ ದಿಲ್ಲಿ ಕನ್ನಡ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು.

ಕಿರುಚಿತ್ರದ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ದಿಲ್ಲಿ ಕನ್ನಡ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಕೆ.ಆರ್. ರಾಮಮೂರ್ತಿ ಮಾತನಾಡಿ, ಮುಗ್ಧ ಮನಸ್ಸಿನ ಮಕ್ಕಳಲ್ಲಿ ಮುಟ್ಟಿನ ಬಗ್ಗೆ ತಿಳಿಹೇಳಿ ಅದೊಂದು ಪ್ರಕೃತಿ ಸಹಜ ದೈಹಿಕ ಬದಲಾವಣೆ. ಇದರ ಬಗ್ಗೆ ಜನರು ತಾವಾಗಿಯೇ ಸಮಾಜದಲ್ಲಿ ಸಂಪ್ರದಾಯ, ಕಟ್ಟುಪಾಡುಗಳನ್ನು ನಿರ್ಮಿಸಿಕೊಂಡಿದ್ದಾರೆ. ಹಿರಿಯರು ಮಕ್ಕಳ ಮನಸ್ಸನ್ನು ಇಂತಹ ಸಾಮಾಜಿಕ ಕಟ್ಟಪಾಡುಗಳಿಂದ ಮುಕ್ತ ಮಾಡಿ ಹೊಸ ಸಮಾಜ ಕಟ್ಟುವ ಬಗ್ಗೆ ಮನದಟ್ಟು ಮಾಡಿಕೊಡುವ ಉದ್ದೇಶವನ್ನು ಹೊಂದಿರುವ ಈ ಕಿರುಚಿತ್ರವನ್ನು ಕಹಾನಿವಾಲೇ ಸಂಸ್ಥೆ ನಿರ್ಮಿಸಿದೆ ಎಂದರು.

ವಿದ್ಯಾರ್ಥಿಗಳ ವ್ಯಕ್ತಿತ್ವದ ಪರಿಪೂರ್ಣ ಬೆಳವಣಿಗೆಗೆ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ಅತ್ಯಗತ್ಯ. ಮೊದಲ ಬಾರಿಗೆ ಕಿರುಚಿತ್ರದಲ್ಲಿ ಪಾತ್ರ ವಹಿಸುವ ಅವಕಾಶ ಸಂಸ್ಥೆಯ ವಿದ್ಯಾರ್ಥಿಗಳಿಗೆ ಒದಗಿ ಬಂದಿರುವುದು ಸೌಭಾಗ್ಯ ಎಂದರು.

ಅವಕಾಶಗಳನ್ನು ಆಸಕ್ತ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡಲ್ಲಿ ಖಂಡಿತವಾಗಿ ಯಶಸ್ಸನ್ನು ಕಾಣಲು ಸಾಧ್ಯ. ಇಂತಹ ಸಾಮಾಜಿಕ ಜಾಗೃತಿ ಮೂಡಿಸುವಂತಹ ಕಿರುಚಿತ್ರಕ್ಕಾಗಿ ಸಂಸ್ಥೆಯನ್ನು ಆಯ್ಕೆ ಮಾಡಿ ವಿದಾರ್ಥಿಗಳಿಗೆ ಅವಕಾಶ ನೀಡಿದಂತಹ ಕಿರುಚಿತ್ರದ ತಂಡಕ್ಕೆ ಸಂಸ್ಥೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

ಕಿರುಚಿತ್ರದ ಸಂಕಲನಗಾರ ಜೀಯೋ ಸಿರಿಲ್, ಸಂಸ್ಥೆಯ ಪ್ರಭಾರ ಪ್ರಾಂಶುಪಾಲೆ ಎನ್.ವಿಜಯಕುಮಾರಿ ಮಾತನಾಡಿದರು. ಕಿರುಚಿತ್ರದಲ್ಲಿ ಪ್ರಧಾನ ಪಾತ್ರವಹಿಸಿದ ವಿದ್ಯಾರ್ಥಿಗಳಾದ ಶ್ರೇಷ್ಠಾ ಎಚ್.ತೇಲಿ, ಜಾಹ್ನವಿ, ಅಭಿಷೇಕ್ ಉಬಾಳೆ ಮತ್ತು ಶಿಕ್ಷಕರಾದ ಪ್ರೇಮಲತಾ, ಮಾಲಾಗೋಪಾಲ್, ಎಚ್.ಎಸ್. ತೇಲಿ ಕಿರುಚಿತ್ರದ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ಶಿವಾನಂದ ಇಂಗಳೇಶ್ವರ, ಕಲಾವಿದರಾದ ಮಾಲಿನಿ ಪ್ರಹ್ಲಾದ್, ಹರಿಪ್ರಿಯ ಉಪಸ್ಥಿತರಿದ್ದರು. ಶಿಕ್ಷಕ ಅರವಿಂದ ಬಿಜೈ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X