ಕರುಣಾನಿಧಿ ನಿಧನ ಹಿನ್ನೆಲೆ: ಬೆಂಗಳೂರಿನಲ್ಲಿ ಪೊಲೀಸ್ ಭದ್ರತೆ

ಬೆಂಗಳೂರು, ಆ.7: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ನಿಧನದ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್‌ಕುಮಾರ್ ಆದೇಶಿಸಿದ್ದಾರೆ.
ಯಾವುದೇ ರೀತಿಯ ಸುಳ್ಳು ವಂದತಿಗಳ ಕಿವಿಗೊಡದಂತೆ ಹಾಗೂ ಎಲ್ಲಿಯೂ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಉಪವಿಭಾಗದ ಡಿಸಿಪಿ, ಇನ್ಸ್‌ಪೆಕ್ಟರ್‌ಗಳಿಗೆ ಅವರು ಸೂಚನೆ ನೀಡಿದ್ದಾರೆ.
Next Story





