ಕರುಣಾನಿಧಿ ನಿಧನ: ಪ್ರಧಾನಿ, ರಾಷ್ಟ್ರಪತಿ ಸಹಿತ ರಾಷ್ಟ್ರ ರಾಜಕೀಯ ನಾಯಕರಿಂದ ಸಂತಾಪ
“ನನ್ನ ಬದುಕಿನ ಕರಾಳ ದಿನ” ಎಂದ ರಜಿನಿಕಾಂತ್

ಹೊಸದಿಲ್ಲಿ, ಆ.7: ಡಿಎಂಕೆ ನಾಯಕ, ತಮಿಳುನಾಡಿನ ಮಾಜಿ ಸಿಎಂ ಎಂ.ಕರುಣಾನಿಧಿಯವರ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿ ಹಲವು ರಾಜಕೀಯ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.
“ಕಲೈಞರ್ ಕರುಣಾನಿಧಿ ನಿಧನದ ಸುದ್ದಿ ಕೇಳಿ ಬೇಸರಗೊಂಡಿದ್ದೇನೆ. ಅವರು ದೇಶದ ಹಿರಿಯ ನಾಯಕರಲ್ಲೊಬ್ಬರು. ನಾವು ಇಂದು ಚಿಂತಕ, ಬರಹಗಾರ, ತಳಮಟ್ಟದ ನಾಯಕರೊಬ್ಬರನ್ನು ಕಳೆದುಕೊಂಡಿದ್ದೇವೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಸ್ಪೀಕರ್ ಸುಮಿತ್ರಾ ಮಹಾಜನ್, ಕೇಂದ್ರ ಸಚಿವ ಸುರೇಶ್ ಪ್ರಭು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್. ಜಮ್ಮು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಉಮರ್ ಅಬ್ದುಲ್ಲಾ ಸೇರಿ ಹಲವು ರಾಜಕೀಯ ನಾಯಕರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
“ಇಂದು ನನ್ನ ಬದುಕಿನಲ್ಲಿ ಕರಾಳ ದಿನ. ಕಲೈಞರ್ ರನ್ನು ನಾವು ಕಳೆದುಕೊಂಡಿದ್ದೇವೆ” ಎಂದು ನಟ, ರಾಜಕಾರಣಿ ರಜಿನಿಕಾಂತ್ ಟ್ವೀಟ್ ಮಾಡಿದ್ದಾರೆ.
Next Story





