ಕರುಣಾನಿಧಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಕರ್ನಾಟಕ ಸರಕಾರ: ರಾಜ್ಯಾದ್ಯಂತ ಒಂದು ದಿನ ಶೋಕಾಚರಣೆ

ಬೆಂಗಳೂರು, ಆ.7: ತಮಿಳುನಾಡಿನ ಮಾಜಿ ಸಿಎಂ ಎಂ.ಕರುಣಾನಿಧಿ ಅವರ ನಿಧನಕ್ಕೆ ರಾಜ್ಯ ಸರಕಾರವು ತೀವ್ರ ಸಂತಾಪ ಸೂಚಿಸಿದ್ದು, ಆ.8ರಂದು ಒಂದು ದಿನ ಕರ್ನಾಟಕದಲ್ಲಿ ರಾಜ್ಯಾದ್ಯಂತ ಶೋಕಾಚರಣೆಯನ್ನು ಆಚರಿಸಲಾಗುತ್ತದೆ.
ಈ ಅವಧಿಯಲ್ಲಿ ಯಾವುದೇ ಅಧಿಕೃತ ಸಾರ್ವಜನಿಕ ಸಮಾರಂಭಗಳು, ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಆದರೆ, ಶಾಲಾ, ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಹಾಗೂ ನಿಯಮಿತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುತ್ತದೆ ಎಂದು ಸರಕಾರದ ಉಪ ಕಾರ್ಯದರ್ಶಿ ವಿಜಯಮಹಾಂತೇಶ ದಾನಮ್ಮನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





