Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯ ಗೃಹರಕ್ಷಕ ದಳದ ಬಲವರ್ಧನೆಗೆ ಕ್ರಮ:...

ರಾಜ್ಯ ಗೃಹರಕ್ಷಕ ದಳದ ಬಲವರ್ಧನೆಗೆ ಕ್ರಮ: ರೂಪ ಮೌದ್ಗಿಲ್

ವಾರ್ತಾಭಾರತಿವಾರ್ತಾಭಾರತಿ7 Aug 2018 10:13 PM IST
share
ರಾಜ್ಯ ಗೃಹರಕ್ಷಕ ದಳದ ಬಲವರ್ಧನೆಗೆ ಕ್ರಮ: ರೂಪ ಮೌದ್ಗಿಲ್

ಮಂಗಳೂರು, ಆ.7: ರಾಜ್ಯ ಗೃಹರಕ್ಷಕ ದಳದ ಬಲವರ್ಧನೆಗೆ ಇಲಾಖೆ ವಿಶೇಷ ಕ್ರಮ ಕೈಗೊಂಡಿದೆ ಎಂದು ಗೃಹರಕ್ಷಕ ದಳ ಮತ್ತು ಪದನಿಮಿತ್ತ ಅಪರ ನಿರ್ದೇಶಕರು ಹಾಗೂ ಪೌರರಕ್ಷಣೆ ಆರಕ್ಷಕ ಮಹಾ ನಿರೀಕ್ಷಕರು ಮತ್ತು ಅಪರ ಮಹಾ ಸಮಾದೇಷ್ಟ ರೂಪ ಮೌದ್ಗಿಲ್ ತಿಳಿಸಿದ್ದಾರೆ.

ನಗರದ ಮೇರಿಹಿಲ್‌ನ ಗೃಹರಕ್ಷಕ ದಳ ಕಚೇರಿಗೆ ಮಂಗಳವಾರ ಭೇಟಿ ನೀಡಿ ಗೃಹರಕ್ಷಕ ದಳದ ಸಿಬ್ಬಂದಿಯಿಂದ ಗೌರವ ರಕ್ಷೆ ಸ್ವೀಕರಿಸಿ, ಜಿಲ್ಲಾ ಗೃಹರಕ್ಷಕ ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಗೃಹರಕ್ಷಕ ದಳದ ಸಿಬ್ಬಂದಿ ವೇತನ ವಿಳಂಬವು ಮುಂದಿನ ದಿನಗಳಲ್ಲಿ ಸರಿಹೋಗಲಿದೆ. ರಾಜ್ಯ ಸರಕಾರದ ಬಜೆಟ್‌ನಲ್ಲಿ ಅನುದಾನ ಬಿಡುಗಡೆಯು ವಿಳಂಬವಾದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿಯೊಬ್ಬ ಗೃಹರಕ್ಷಕ ಸಿಬ್ಬಂದಿಗೂ ತಮ್ಮ ಕರ್ತವ್ಯದ ವೇತನ ನೀಡಲು ನಮ್ಮ ಇಲಾಖೆ ಬದ್ಧವಾಗಿದೆ ಎಂದರು.

ಗೃಹರಕ್ಷಕ ದಳ ಸಿಬ್ಬಂದಿಗೆ ಕರ್ತವ್ಯದ ವೇಳೆ ಸರಕಾರಿ ಬಸ್‌ನಲ್ಲಿ ಸಂಚರಿಸಲು ಬಸ್ ಪಾಸ್ ನೀಡುವ ಬಗ್ಗೆ, ಪೊಲೀಸ್ ಇಲಾಖೆಯ ಸಿಬ್ಬಂದಿಗೆ ನೀಡುವಂತೆ ಪಡಿತರ ವ್ಯವಸ್ಥೆ, ಆರೋಗ್ಯ ವಿಮೆ ನೀಡುವ ಬಗ್ಗೆ ಇಲಾಖೆಯು ಕಾರ್ಯೋನ್ಮುಖವಾಗಿದೆ ಎಂದರು.

ಕರ್ತವ್ಯದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ಮೃತ ಹೊಂದಿದ ಸಂದರ್ಭದಲ್ಲಿ ಇಲಾಖೆಯ ವತಿಯಿಂದ ಗೌರವ ರಕ್ಷೆ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಜಿಲ್ಲಾ ಗೃಹರಕ್ಷಕ ದಳದ ಸಿಬ್ಬಂದಿಗಳು ಪೊಲೀಸ್ ಠಾಣಾ ಕರ್ತವ್ಯದ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳ ಬಗ್ಗೆ ನಾನು ಆಲಿಸಿದ್ದು, ಇದರ ಪರಿಹಾರಕ್ಕಾಗಿ ಪಶ್ವಿಮ ವಲಯ ಐಜಿಪಿ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಜೊತೆ ಚರ್ಚಿಸುವೆ ಎಂದರು.

ಗೃಹರಕ್ಷಕ ಸಿಬ್ಬಂದಿ ವಾರ್ಷಿಕ ತರಬೇತಿ ಶಿಬಿರ ಹಾಗೂ ಕರ್ತವ್ಯದ ಸಂದರ್ಭದಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯಡಿ ವೇತನವನ್ನು ನೀಡುವ ಬಗ್ಗೆ ಇಲಾಖೆ ಕ್ರಮ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಇಲಾಖೆಯ ಕವಾಯತು ಸಮಯದಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಲಾಗುವುದು ಎಂದರು.

ಜಿಲ್ಲಾ ಗೃಹರಕ್ಷಕ ದಳದ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಹೆಚ್ಚಿನ ಸಿಬ್ಬಂದಿ ನೇಮಕದ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು. ಜಿಲ್ಲೆಯಲ್ಲಿ ಸಿವಿಲ್ ಡಿಫೆನ್ಸ್ ಘಟಕವನ್ನು ತಕ್ಷಣ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಸಿವಿಲ್ ಡಿಫೆನ್ಸ್ ಕಚೇರಿ ನಿರ್ಮಾಣವಾಗಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಸಿವಿಲ್ ಡಿಫೆನ್ಸ್ ಸೇವೆಯು ಲಭ್ಯವಾಗಲಿದೆ ಎಂದರು.

ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ.ಮುರಲಿ ಮೋಹನ್ ಚೂಂತಾರು ಮಾತನಾಡಿ, ಗೃಹರಕ್ಷಕ ದಳದ ಸಿಬ್ಬಂದಿ ಸಮಸ್ಯೆ ಬಗ್ಗೆ ಆರಕ್ಷಕ ಮಹಾ ನಿರೀಕ್ಷಕರು ಮತ್ತು ಅಪರ ಮಹಾ ಸಮಾದೇಷ್ಟರ ಜೊತೆ ಚರ್ಚಿಸಿದ್ದು, ಇದಕ್ಕೆ ಪೂರಕವಾಗಿ ಸ್ಪಂದಿಸಿದ್ದಾರೆ ಎಂದರು.

ಉಪಸಮಾದೇಷ್ಟ ರಮೇಶ್, ಸೆಕೆಂಡ್ ಇನ್ ಕಮಾಂಡ್ ಮುಹಮ್ಮದ್ ಇಯೀಲ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗೃಹರಕ್ಷಕ ದಳದ ಕ್ಷೇಮಾಭಿವೃದ್ಧಿ ನಿಧಿಯಿಂದ ಕರ್ತವ್ಯದ ಸಂಧರ್ಭದಲ್ಲಿ ಅಪಘಾತದಲ್ಲಿ ಮೃತ ಹೊಂದಿದ ಮಂಗಳೂರು ಘಟಕದ ಗೃಹರಕ್ಷಕ ಸಿಬ್ಬಂದಿ ರಾಜೇಶ್ ತಾಯಿಗೆ ಸಹಾಯ ಧನದ ಚೆಕ್‌ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕಳೆದ ವಾರ ಅಫಘಾತದಲ್ಲಿ ಮೃತಹೊಂದಿದ ಪುತ್ತೂರು ಘಟಕದ ಗೃಹರಕ್ಷಕ ಪ್ರಜ್ವಲ್ ಡಿಸೋಜ ಅವರಿಗೆ ಜಿಲ್ಲಾ ಗೃಹರಕ್ಷಕರು ಸಂಗ್ರಹಿಸಿದ 31,761 ರೂ.ನ್ನು ಮೃತರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X