Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕ್ರಮ ವಲಸಿಗರ ಪರ ವಕಾಲತ್ತು ವಹಿಸಿರುವ...

ಅಕ್ರಮ ವಲಸಿಗರ ಪರ ವಕಾಲತ್ತು ವಹಿಸಿರುವ ಕಾಂಗ್ರೆಸ್, ಟಿಎಂಸಿ ರಾಷ್ಟ್ರಘಾತುಕರು: ಶಾಸಕ ರವಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ7 Aug 2018 10:27 PM IST
share
ಅಕ್ರಮ ವಲಸಿಗರ ಪರ ವಕಾಲತ್ತು ವಹಿಸಿರುವ ಕಾಂಗ್ರೆಸ್, ಟಿಎಂಸಿ ರಾಷ್ಟ್ರಘಾತುಕರು: ಶಾಸಕ ರವಿ ಆಕ್ರೋಶ

ಚಿಕ್ಕಮಗಳೂರು, ಆ.7: ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಪೌರತ್ವ ನೋಂದಣಿ ಅಭಿಯಾನವನ್ನು ಮಾಡಲಾಗುತ್ತಿದೆ. ಅಸ್ಸಾಂ ರಾಜ್ಯವೊಂದರಲ್ಲೇ 40 ಲಕ್ಷಕ್ಕೂ ಹೆಚ್ಚು ಜನ ಅಕ್ರಮ ಬಾಂಗ್ಲಾ ನುಸುಳುಕೋರರು ಇರುವುದು ಅಭಿಯಾನದಿಂದ ಪತ್ತೆಯಾಗಿದೆ. ಅಕ್ರಮ ವಸಿಗರ ಪರ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ವಕಾಲತ್ತು ವಹಿಸುವ ಮೂಲಕ ರಾಷ್ಟ್ರಘಾತುಕ ಕೆಲಸದಲ್ಲಿ ತೊಡಗಿವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಆರೋಪಿಸಿದ್ದಾರೆ.

ಮಂಗಳವಾರ ನಗರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷದವರು ಅಕ್ರಮ ವಲಸಿಗರು ಮತ್ತು ಬಾಂಗ್ಲಾ ನುಸುಳುಕೋರಪರವಾಗಿ ಪರ ವಕಾಲತ್ತು ವಹಿಸಿ ಮಾತನಾಡುತ್ತಿದ್ದಾರೆ. 1972ರಲ್ಲೆ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಅವರು ಸಾರ್ವಜನಿಕವಾಗಿ ಮತ್ತು ಸಂಸತ್‍ನಲ್ಲಿ ಅಕ್ರಮ ವಲಸಿಗರನ್ನು ತಡೆಗಟ್ಟುವ ವಾಗ್ದಾನ ಮಾಡಿದ್ದರು. 1985ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಎನ್.ಆರ್.ಸಿ. ರಚನೆ ಮತ್ತು ಅಕ್ರಮ ವಲಸಿಗರನ್ನು ಗುರುತಿಸಿ ಹೊರ ಹಾಕುವುದಾಗಿ ದೇಶದ ಜನತೆಗೆ ಭರವಸೆ ನೀಡಿದ್ದರು. ಇದನ್ನು ಕಾಂಗ್ರೆಸ್ ಮುಖಂಡರು ಮರೆತಂತಿದೆ. 2002 ಮತ್ತು 2005ರಲ್ಲಿ ಅಕ್ರಮ ವಲಸಿಗರನ್ನು ಹೊರ ಹಾಕುವ ಕುರಿತು ಧ್ವನಿ ಎತ್ತಿದ್ದ ಮಮತಾ ಬ್ಯಾನರ್ಜಿ ಈಗ ಅದನ್ನು ಮರೆತು ಕೇವಲ ರಾಜಕೀಯ ಕಾರಣಕ್ಕಾಗಿ ಅಕ್ರಮ ವಲಸಿಗರ ಪರವಾಗಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಅಕ್ರಮ ವಲಸಿಗರ ಪರವಾಗಿ ಮಾತನಾಡುತ್ತಾ ರಾಷ್ಟ್ರಘಾತುಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪೌರತ್ವ ನೋಂದಣಿ ಅಭಿಯಾನವನ್ನು ದೇಶದಾದ್ಯಂತ ಮಾಡಬೇಕು. ದೇಶದಲ್ಲಿ 3 ಕೋಟಿಗೂ ಅಧಿಕ ಬಾಂಗ್ಲಾ ನುಸುಳುಕೋರರು ಇದ್ದಾರೆ ಎಂಬ ಮಾಹಿತಿ ಇದೆ. ದೇಶಾದ್ಯಂತ ಈ ಅಭಿಯಾನ ನಡೆಸಿ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರಗಟ್ಟಬೇಕು. ಅವರ ಪರ ವಕಾಲತ್ತು ವಹಿಸುವವರನ್ನೂ ಅವರೊಂದಿಗೆ ದೇಶದಿಂದ ಹೊರದಬ್ಬಬೇಕೆಂದು ಅವರು ತಿಳಿಸಿದ ಅವರು, ಈಗಿನ ಕಾಂಗ್ರೆಸ್ ಪಕ್ಷವು ತಾನು ಭಾರತದ ಪರ ಇಲ್ಲ. ನಾವು ಅಕ್ರಮ ಬಾಂಗ್ಲಾ ನುಸುಳುಕೋರರ ಪರ ಎಂದು ತೋರಿಸುವ ಮೂಲಕ ಸ್ವಾತಂತ್ರ್ಯ ಹೋರಾಟದ ವಾರಸುದಾರ ಎಂದು ಹೇಳಿಕೊಳ್ಳುವ ಹಕ್ಕನ್ನು ಕಳೆದುಕೊಂಡಿದೆ. ಆ ಮೂಲಕ ತಾನು ಓಟಿಗಾಗಿ ಯಾವ ಹಂತಕ್ಕೆ ಬೇಕಾದರೂ ಇಳಿಯಬಲ್ಲೆ ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಕೋಟೆ ರಂಗನಾಥ್, ತಮ್ಮಣ್ಣ  ಉಪಸ್ಥಿತರಿದ್ದರು.

ಸ್ಥಳೀಯ ಸಂಸ್ಥೆ ಚುನಾವಣೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳಿಸಬೇಕೆಂಬ ಹಿನ್ನೆಯಲ್ಲಿ ಆ.9ರಿಂದ ಪಕ್ಷದ ಮುಖಂಡರ ನೇತೃತ್ವದಲ್ಲಿ ಮೂರು ತಂಡಗಳು ರಾಜ್ಯಾದ್ಯಂತ ಕೈಗೊಳ್ಳಲಿದೆ. ಯಡಿಯೂರಪ್ಪ, ಗೋವಿಂದ ಕಾರಜೋಳ, ಶೋಭಾ ಕರಂದ್ಲಾಜೆ ನೇತೃತ್ವದ ತಂಡ, ಜಗದೀಶ್ ಶೆಟ್ಟರ್, ಆರ್.ಆಶೋಕ್, ಅರವಿಂದ ಲಿಂಬಾವಳಿ ನೇತೃತ್ವದ ತಂಡ ಹಾಗೂ ಈಶ್ವರಪ್ಪ ಹಾಗೂ ತನ್ನ ನೇತೃತ್ವದಲ್ಲಿ ಮೂರು ತಂಡಗಳನ್ನು ಈಗಾಗಲೇ ರಚಿಸಲಾಗಿದ್ದು, ತಮ್ಮ ತಂಡ ಆ.9ರಿಂದ ಮೈಸೂರಿನಿಂದ ಪ್ರವಾಸ ಆರಂಭಿಸಲಿದ್ದೇವೆ.
- ಸಿ.ಟಿ.ರವಿ

ಭಗವಾನ್‍ಗೆ ಬುದ್ಧಿ ಭ್ರಮಣೆಯಾಗಿದೆ: ಸ್ವಾಮಿ ವಿವೇಕಾನಂದ ಹಾಗೂ ಬಸವಣ್ಣ ಅವರದ್ದು ಸಹಜ ಸಾವಲ್ಲ, ಅವರನ್ನು ಕೊಲೆ ಮಾಡಲಾಗಿದೆ ಎಂದು ಸಾಹಿತಿ ಭಗವಾನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಭಗವಾನ್ ಅವರು ಕೇವಲ ಪ್ರಚಾರಕ್ಕಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರಷ್ಟೆ, ಅವರಿಗೆ ಬುಧ್ಧಿ ಭ್ರಮಣೆಯಾಗಿದೆ ಎಂಬುದನ್ನು ತೋರಿಸಿಕೊಳ್ಳಲು ಇಂತಹ ಹೇಳಿಕೆಗಳನ್ನು ಅವರು ಆಗಾಗ್ಗೆ ನೀಡುತ್ತಿದ್ದಾರೆ. ಭಗವಾನ್ ಅವರು ಇಂತಹ ಹೇಳಿಕೆಗಳನ್ನು ನೀಡುವುದು ಹೊಸದೇನಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X