Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಯಮಾನುಸಾರ ಸ್ಥಳೀಯ ಸಂಸ್ಥೆ ಚುನಾವಣೆ...

ನಿಯಮಾನುಸಾರ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತುಮಕೂರು ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Aug 2018 11:09 PM IST
share
ನಿಯಮಾನುಸಾರ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತುಮಕೂರು ಜಿಲ್ಲಾಧಿಕಾರಿ ಸೂಚನೆ

ತುಮಕೂರು,ಆ.7: ಮುಂಬರುವ ಆಗಸ್ಟ್ 29ರಂದು ನಡೆಯುವ ಮಧುಗಿರಿ ಹಾಗೂ ಚಿಕ್ಕನಾಯಕನಹಳ್ಳಿ ಪುರಸಭೆ ಮತ್ತು ಗುಬ್ಬಿ ಹಾಗೂ ಕೊರಟಗೆರೆ ಪಟ್ಟಣ ಪಂ. ನ ಚುನಾವಣೆಯನ್ನು ಶಾಂತಿಯುತ ಹಾಗೂ ನ್ಯಾಯಸಮ್ಮತವಾಗಿ ನಿಯಮಾನುಸಾರ ನಡೆಸುವಂತೆ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಕೆ. ಸಂಬಂಧಿಸಿದ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು, ಮಧುಗಿರಿ ಹಾಗೂ ಚಿಕ್ಕನಾಯಕನಹಳ್ಳಿ ಪುರಸಭೆ ಮತ್ತು ಗುಬ್ಬಿ ಹಾಗೂ ಕೊರಟಗೆರೆ ಪಟ್ಟಣ ಪಂ.ಗಳ ಚುನಾವಣೆಗೆ ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದ್ದು, ಕಟ್ಟುನಿಟ್ಟಿನಿಂದ ಜಾರಿಗೊಳಿಸಿ ಎಂದು ಚುನಾವಣಾಧಿಕಾರಿಗಳಿಗೆ ಸೂಚಿಸಿದರು. 

ಕಳೆದ ಜೂನ್ 27ರ ಅಂತ್ಯಕ್ಕೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಚಿಕ್ಕನಾಯಕನಹಳ್ಳಿ ಪುರಸಭೆಯಲ್ಲಿ 23 ಮತಗಟ್ಟೆಗಳಿದ್ದು, 18518 ಮತದಾರರಿದ್ದಾರೆ. ಮಧುಗಿರಿ ಪುರಸಭೆಯಲ್ಲಿ 22823 ಮತದಾರರಿದ್ದು, 23 ಮತಗಟ್ಟೆಗಳಿವೆ. ಗುಬ್ಬಿ ಪಟ್ಟಣ ಪಂ.ನಲ್ಲಿ 15853 ಮತದಾರರಿದ್ದು,19 ಮತಗಟ್ಟೆಗಳು ಹಾಗೂ ಕೊರಟಗೆರೆ ಪಟ್ಟಣ ಪಂ.ನಲ್ಲಿ 12598 ಮತದಾರರಿದ್ದು, 15 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದರು. 

ಈಗಾಗಲೇ ಚುನಾವಣಾಧಿಕಾರಿಗಳನ್ನು ಮತ್ತು ಸಹಾಯಕ ಚುನಾವಣಾಧಿಕಾರಿಗಳ ನೇಮಕಾತಿಯು ಪೂರ್ಣಗೊಂಡಿದ್ದು, ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಚುನಾವಣೆ ನಡೆಯುವ ನಗರ ಪ್ರದೇಶ, ಪಟ್ಟಣ ಪ್ರದೇಶದ ವ್ಯಾಪ್ತಿಗೆ ತಲಾ 2 ತಂಡಗಳಂತೆ ಸೆಕ್ಟರ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು. ಈ ತಂಡಗಳಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದರು. 

ಆಗಸ್ಟ್ 8ರಿಂದ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಅಕ್ರಮ ಮದ್ಯ ಮಾರಾಟ, ಸಾಗಾಣಿಕೆ, ಹಂಚಿಕೆ ಮತ್ತಿತರ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುವಂತೆ ಅಬಕಾರಿ ಇಲಾಖೆಯ ಅಧಿಕಾರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಚುನಾವಣಾ ಮತದಾನ ಕರ್ತವ್ಯಕ್ಕೆ ಅಗತ್ಯವಿರುವ 350ಕ್ಕೂ ಹೆಚ್ಚು ಸಿಬ್ಬಂದಿಯನ್ನು ನೇಮಿಸಲು ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಮಸ್ಟರಿಂಗ್, ಡಿಮಸ್ಟರಿಂಗ್ ಹಾಗೂ ಮತ ಎಣಿಕೆ ಕೇಂದ್ರವನ್ನು ಈಗಾಗಲೇ ಗುರುತಿಸಲಾಗಿದ್ದು, ಚಿಕ್ಕನಾಯಕನಹಳ್ಳಿಯಲ್ಲಿ ಸರಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜು, ಮಧುಗಿರಿ ಪುರಸಭೆ-ಸರಕಾರಿ ಪ್ರಥಮದರ್ಜೆ ಕಾಲೇಜು,ಮಧುಗಿರಿ, ಗುಬ್ಬಿ ಪಟ್ಟಣ ಪಂ.-ತಾಲೂಕು ಕಚೇರಿ,ಗುಬ್ಬಿ. ಕೊರಟಗೆರೆ ಪಟ್ಟಣ ಪಂ.-ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೊರಟಗೆರೆಯಲ್ಲಿ ಮಸ್ಟರಿಂಗ್, ಡಿಮಸ್ಟರಿಂಗ್ ಹಾಗೂ ಮತ ಎಣಿಕೆ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ವಿವರಣೆ ನೀಡಿದರು.

ರಾಜ್ಯ ಚುನಾವಣಾ ಆಯೋಗಕ್ಕೆ ಕಡ್ಡಾಯವಾಗಿ ಪ್ರತಿನಿತ್ಯ ಕಳುಹಿಸಬೇಕಾಗಿರುವ ಚುನಾವಣಾ ಪ್ರಕ್ರಿಯೆಯ ವರದಿಗಳನ್ನು ಸಕಾಲಕ್ಕೆ ಕಳುಹಿಸಬೇಕು. ಪ್ರಚಾರ ನಡೆಸಲು ಅಭ್ಯರ್ಥಿಗಳಿಗೆ ಹಾಗೂ ಪಕ್ಷಗಳಿಗೆ ಅನುಮತಿ ನೀಡುವಾಗ ಕಾನೂನು ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಏಕಗವಾಕ್ಷಿಯ ಯೋಜನೆಯಡಿ ಅನುಮತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರತಿ ಆನಂದ್, ಉಪವಿಭಾಗಾಧಿಕಾರಿಗಳಾದ ಡಾ.ವೆಂಕಟೇಶಯ್ಯ, ಕೃಷ್ಣಮೂರ್ತಿ ಹಾಗೂ ಶಿವಕುಮಾರ್ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X