ಮಳೆ-ಪ್ರವಾಹ: ಕೊಡಗು ಜಿಲ್ಲೆಗೆ 20 ಕೋಟಿ ರೂ.ಬಿಡುಗಡೆ
ಬೆಂಗಳೂರು, ಆ. 8: ಕೊಡಗು ಜಿಲ್ಲೆಯಲ್ಲಿನ ಭಾರಿ ಮಳೆಯಿಂದ ಉಂಟಾಗಿರುವ ಪ್ರವಾಹದಿಂದ ಜನ-ಜಾನುವಾರು ಪ್ರಾಣ, ಸಾರ್ವಜನಿಕ ಆಸ್ತಿ-ಬೆಳೆ ಹಾನಿ ಹಾಗೂ ರಸ್ತೆ, ಸೇತುವೆ ಸೇರಿ ಮೂಲಸೌಕರ್ಯ ತುರ್ತು ಪರಿಹಾರ ಕಾರ್ಯಕ್ಕೆ 20 ಕೋಟಿ ರೂ.ಗಳನ್ನು ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.
ಪ್ರಸ್ತುತ ಬಿಡುಗಡೆ ಮಾಡಿರುವ ಅನುದಾನವನ್ನು ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರಕಾರದ ಎನ್ಡಿಆರ್ಎಫ್ ಮಾರ್ಗಸೂಚಿಯನ್ವಯ ವೆಚ್ಚ ಮಾಡಬೇಕು. ಯಾವ ಉದ್ದೇಶಕ್ಕಾಗಿ ಅನುದಾನ ಬಿಡುಗಡೆಯಾಗಿದೆಯೋ ಅದೇ ಉದ್ದೇಶಕ್ಕಾಗಿ ಬಳಕೆ ಮಾಡಬೇಕು.
ಒಂದು ವೇಳೆ ಹಣ ಬಳಕೆಯಲ್ಲಿ ಯಾವುದೇ ಲೋಪವಾದರೂ ಆಯಾ ಜಿಲ್ಲಾಧಿಕಾರಿಗಳನ್ನೇ ನೇರವಾಗಿ ಹೊಣೆ ಮಾಡಲಾಗುವುದು ಎಂದು ಕಂದಾಯ ಇಲಾಖೆ ಆದೇಶದಲ್ಲಿ ಎಚ್ಚರಿಕೆಯನ್ನು ನೀಡಲಾಗಿದೆ.
Next Story