Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶಕ್ಕಾಗಿ ಹೋರಾಡಿದವರ ಟೀಕೆ ಸಲ್ಲದು:...

ದೇಶಕ್ಕಾಗಿ ಹೋರಾಡಿದವರ ಟೀಕೆ ಸಲ್ಲದು: ರಮಾನಾಥ ರೈ

76ನೇ ಕ್ವಿಟ್ ಇಂಡಿಯಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ9 Aug 2018 9:24 PM IST
share
ದೇಶಕ್ಕಾಗಿ ಹೋರಾಡಿದವರ ಟೀಕೆ ಸಲ್ಲದು: ರಮಾನಾಥ ರೈ

ಮಂಗಳೂರು, ಆ.9: ಕಾಂಗ್ರೆಸ್‌ನ್ನು ಟೀಕೆ ಮಾಡುವ ಭರದಲ್ಲಿ ದೇಶದ ಸ್ವಾತಂತ್ರಕ್ಕಾಗಿ ಹಲವಾರು ವರ್ಷಗಳ ಕಾಲ ಹೋರಾಡಿ, ಜೈಲಿಗೆ ಹೋಗಿದ್ದ ಜವಾಹರಲಾಲ್ ನೆಹರೂ ಅವರಂತಹ ನಾಯಕರನ್ನು ಟೀಕಿಸುತ್ತಿರುವುದು ಸಲ್ಲದು ಎಂದು ಮಾಜಿ ಸಚಿವ ರಮಾನಾಥ ರೈ ತಿಳಿಸಿದ್ದಾರೆ.

ನಗರದ ಪುರಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ 76ನೇ ವರ್ಷದ ಕ್ವಿಟ್ ಇಂಡಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ವರ್ತಮಾನದ ಪೀಳಿಗೆಗೆ ಸ್ವಾತಂತ್ರ ಸಂಗ್ರಾಮ ಇತಿಹಾಸದ ಪರಿಚಯದ ಕೊರತೆಯಿದೆ. ಅದನ್ನು ನೈಜವಾಗಿ ಜನಸಾಮಾನ್ಯರಿಗೆ ತಿಳಿಸುವ ಕೆಲಸ ಮಾಡಬೇಕು. ಇತ್ತೀಚೆಗೆ ಇತಿಹಾಸವನ್ನು ತಿರುಚುವ ಕೆಲಸವನ್ನು ಮಾಡಲಾಗುತ್ತಿದೆ. ನೈಜ ಇತಿಹಾಸವನ್ನು ಮೆಲುಕು ಹಾಕುವ ಅಗತ್ಯತೆ ಇಂದಿನ ದಿನಗಳಲ್ಲಿ ಎದುರಾಗಿದೆ ಎಂದು ಹೇಳಿದರು.

ಮಹಾತ್ಮಾ ಗಾಂಧೀಜಿ ವಿದ್ಯಾರ್ಥಿ ಜೀವನದಲ್ಲೇ ದಬ್ಬಾಳಿಕೆಯನ್ನು ವಿರೋಧಿಸಲು ಪ್ರಾರಂಭಿಸಿದ್ದರು. ಆಫ್ರಿಕಾದಲ್ಲಿ ಬಿಳಿಯರಿಂದ ಕರಿಯರ ಮೇಲ ನಡೆಯುತ್ತಿದ್ದ ದೌರ್ಜನ್ಯಗಳ ವಿರುದ್ಧ ಹೋರಾಟ ಮಾಡಿದರು. ಸ್ವಾತಂತ್ರಕ್ಕಾಗಿ ಮೋತಿಲಾಲ್ ನೆಹರೂ ಹೋರಾಟ ಮಾಡುತ್ತಿದ್ದ ವೇಳೆಯೇ ಭಾರತದ ಸ್ವಾತಂತ್ರ ಸಂಗ್ರಾಮಕ್ಕೆ ಧುಮುಕಿದರು ಎಂದರು.

ಅಂದಿನ ದಿನಗಳಲ್ಲಿ ನಡೆದಿದ್ದು ಜಾತ್ಯತೀತ ಸ್ವಾತಂತ್ರ ಚಳವಳಿಯಾಗಿದೆ. ಎಲ್ಲ ವರ್ಗಗಳ, ಜಾತಿಗಳ ಜನರನ್ನು ಒಟ್ಟುಗೂಡಿಸಿಕೊಂಡು ಸ್ವಾತಂತ್ರ ಚಳವಳಿ ಕೈಗೊಂಡಿದ್ದರು. ಅಂಬೇಡ್ಕರ್ ರಚಿಸಿರುವ ಸಂವಿಧಾನ, ಪ್ರಜಾಪ್ರಭುತ್ವವನ್ನು ಪ್ರಸ್ತುತ ದಿನಗಳಲ್ಲಿ ಉಳಿಸಿ ಕಟ್ಟುವ ಕೆಲಸವಾಗಬೇಕು. ಮುಂದಿನ ಭಾರತ ಸುಂದರ, ಬಲಿಷ್ಠ, ಸಾಮರಸ್ಯ ಹೊಂದಿದ ರಾಷ್ಟ್ರವಾಗಬೇಕು. ಭಾವೈಕ್ಯತೆಯಿಂದ ದೇಶವನ್ನು ಉಳಿಸಿಕೊಂಡು ಹೋಗಬೇಕು ಎಂದು ಮನವಿ ಮಾಡಿದರು.
ಪ್ರಚಾರದ ಅಬ್ಬರದಲ್ಲಿ ರಸ್ತೆ ಬದಿಯಲ್ಲಿ ನಿಂತು ಘೋಷಣೆ ಕೂಗುವುದು ದೇಶಪ್ರೇಮವಾಗುತ್ತಿದೆ. ಯಾವುದೋ ಕಾರಣಕ್ಕೆ ಸತ್ತವರನ್ನು ಹುತಾತ್ಮ ರನ್ನಾಗಿಸಲಾಗುತ್ತಿದೆ. ದೇಶ ಅಧೋಗತಿಯತ್ತ ಸಾಗುತ್ತಿದೆ. ಅಂದು ನೆಹರೂ ಸರ್ವಾಧಿಕಾರಿ ಪ್ರಧಾನಿಯಾಗಿರಲಿಲ್ಲ. ಸ್ವಾತಂತ್ರ ಹೋರಾಟಗಾರರ ತ್ಯಾಗ ವನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದರು.

ಕೇಂದ್ರ ಸರಕಾರದಿಂದ ಕೇವಲ ಯೋಜನೆಗಳ ಕುರಿತು ಘೋಷಣೆಗಳನ್ನು ಹೊರಡಿಸುತ್ತಿದ್ದರೆಯೇ ವಿನಃ ಯಾವುದೇ ಕಾರ್ಯಗಳನ್ನು ಅನುಷ್ಠಾಣ ಗೊಳಿಸುತ್ತಿಲ್ಲ. ಲೋಕಪಾಲ ಜಾರಿಗೆ ತರುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದವರ ರಾಜ್ಯದಲ್ಲಿಯೇ ಲೋಕಾಯುಕ್ತ ಇಲ್ಲ. ಬಿಜೆಪಿಯು ಬಂಡವಾಳಶಾಹಿಗಳ ಜನತಾ ಪಕ್ಷವಾಗಿದೆ ಎಂದು ಅವರು ಟೀಕಿಸಿದರು.

ಮಹಾತ್ಮಾ ಗಾಂಧೀಜಿ ಸೇವೆಯನ್ನು ಗೌಣ ಮಾಡಲಾಗುತ್ತಿದೆ. ಇಂದಿರಾ ಗಾಂಧಿ ಕೂಡ ಜನರ ಬೆಂಬಲದಿಂದ ಪ್ರಧಾನಿಯಾದ್ದರೇ ವಿನಃ ಆನುವಂಶೀಯವಲ್ಲ ಎಂದರು. ಕಾರ್ಯಕ್ರಮಕ್ಕೂ ಮೊದಲು ನಗರದ ಬಾವುಟಗುಡ್ಡೆಯಿಂದ ಪುರಭವನದವರೆಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ರ್ಯಾಲಿ ನಡೆಸಿ, ಘೋಷಣೆಗಳನ್ನು ಕೂಗಿದರು.

ಕಾರ್ಯಕ್ರಮದಲ್ಲಿ ಪ್ರೊ.ಬಿ.ಶಿವರಾಮ್ ಶೆಟ್ಟಿ ಸ್ವಾತಂತ್ರ ಸಂಗ್ರಾಮದ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಮೊಯಿದಿನ್ ಬಾವ, ವಕ್ಫ್ ಜಿಲ್ಲಾಧ್ಯಕ್ಷ ಯು.ಕೆ.ಮೋನು, ಮೇಯರ್ ಭಾಸ್ಕರ್, ಉಪಮೇಯರ್ ಮುಹಮ್ಮದ್, ಕಾಂಗ್ರೆಸ್ ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಬಿ.ಎಚ್.ಖಾದರ್, ಧನಂಜಯ, ಮಿಥುನ್ ರೈ, ಕರೀಮ್, ವೆಂಕಪ್ಪಗೌಡ ಮತ್ತಿತರರು ಉಪಸ್ಥತರಿದ್ದರು. ಹರೀಶಕುಮಾರ್ ಸ್ವಾಗತಿಸಿದರು. ಮನಪಾ ಸಚೇತಕ ಶಶಿಧರ್ ಹೆಗಡೆ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X