ನಿಧನ: ವಿಕ್ಟೋರಿಯನ್ ಫೆರ್ನಾಂಡಿಸ್

ಪುತ್ತೂರು, ಆ. 9: ಇಲ್ಲಿಯ ಸಂತ ಫಿಲೋಮಿನಾ ಕಾಲೇಜಿನ ಕಚೇರಿ ಅದೀಕ್ಷಕರಾದ ವಿಕ್ಟೋರಿಯನ್ ಫೆರ್ನಾಂಡಿಸ್ ಅಲ್ಪ ಕಾಲದ ಅನಾರೋಗ್ಯದಿಂದಾಗಿ ಗುರುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೂಲತ: ಬೆಳ್ತಂಗಡಿ ತಾಲೂಕಿನ ಕಣಿಯೂರಿನ ಕೊಡಂಬರಕಜೆ ನಿವಾಸಿಯಾದ ಅವರು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು, ಉಡುಪಿ ಕಲ್ಯಾಣಪುರ ವಿಲಾಗ್ರಿಸ್ ಕಾಲೇಜ್ ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ, ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಕಛೇರಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.
ತಮ್ಮ ವೃತ್ತಿ ಜೀವನದಲ್ಲಿ ಮಂಗಳೂರು ವಿವಿ ಮಟ್ಟದ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳ ಆಡಳಿತ ಸಿಬ್ಬಂದಿಗಳ ಸಂಘದ ನಾಯಕತ್ವ ವಹಿಸಿ ಹಲವಾರು ರೀತಿಯ ರಾಷ್ಟ್ರೀಯ ಮಟ್ಟದ ಸಮ್ಮೇಳನಗಳನ್ನು ಯಶಸ್ವಿಯಾಗಿ ಸಂಯೋಜಿಸಿದ್ದರು. ಅಖಿಲ ಭಾರತ ಮಟ್ಟದಲ್ಲಿ ವಿಶ್ವವಿದ್ಯಾನಿಲಯ ಹಾಗೂ ಕಾಲೇಜುಗಳ ಆಡಳಿತ ಸಿಬ್ಬಂದಿ ಸಂಘದ ದಕ್ಷಿಣ ವಲಯ ಮಟ್ಟದಲ್ಲಿ ಕಾರ್ಯದರ್ಶಿಯಾಗಿದ್ದುಕೊಂಡು ಕಾರ್ಯಕಾರಿ ಸಮಿತಿ ಸಭೆಗಳನ್ನೂ ಸಂತ ಫಿಲೋಮಿನಾ ಕಾಲೇಜಿನಲ್ಲಿ ಆಯೋಜಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಅಂತಿಮ ದರ್ಶನಕ್ಕೆ ಅವಕಾಶ:
ಮೃತರ ಅಂತಿಮ ದರ್ಶನವನ್ನು ಆ. 10ರಂದು ಬೆಳಗ್ಗೆ 10 ಘಂಟೆಗೆ ಕಾಲೇಜು ಆವರಣದಲ್ಲಿ ನಡೆಸಲು ಸಿದ್ಧತೆ ನಡೆಸಲಾಗಿದ್ದು, ಬಳಿಕ ಅಂತ್ಯಕ್ರಿಯೆಯ ವಿಧಿ ವಿಧಾನಗಳು ಸುರತ್ಕಲ್‌ನ ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ಸಂಜೆ 3.30 ಕ್ಕೆ ನಡೆಯಲಿದೆ ಎಂದು ಕಾಲೇಜಿನ ಪಿಆರ್‌ಒ ಪ್ರಕಟಣೆ ತಿಳಿಸಿದೆ.





