Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಹಕಾರಿ ಸಂಘಗಳಲ್ಲಿನ 9,448 ಕೋಟಿ ರೂ....

ಸಹಕಾರಿ ಸಂಘಗಳಲ್ಲಿನ 9,448 ಕೋಟಿ ರೂ. ಚಾಲ್ತಿ ಸಾಲ ಮನ್ನಾ: ಸಿಎಂ ಕುಮಾರಸ್ವಾಮಿ

ಸಚಿವ ಸಂಪುಟ ಸಭೆ ತೀರ್ಮಾನ

ವಾರ್ತಾಭಾರತಿವಾರ್ತಾಭಾರತಿ9 Aug 2018 9:46 PM IST
share
ಸಹಕಾರಿ ಸಂಘಗಳಲ್ಲಿನ 9,448 ಕೋಟಿ ರೂ. ಚಾಲ್ತಿ ಸಾಲ ಮನ್ನಾ: ಸಿಎಂ ಕುಮಾರಸ್ವಾಮಿ

ಬೆಂಗಳೂರು, ಆ.9: ಸಹಕಾರಿ ಸಂಘಗಳಲ್ಲಿನ ಪ್ರಸಕ್ತ ಸಾಲಿನ ಜು.10 ವರೆಗಿನ ರೈತರ ಒಂದು ಲಕ್ಷ ರೂ.ವರೆಗಿನ ಚಾಲ್ತಿ ಸಾಲ ಸಂಪೂರ್ಣ ಮನ್ನಾ ಮಾಡಲು ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. 

ಗುರುವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಹಕಾರ ಸಂಘಗಳಲ್ಲಿನ ಒಟ್ಟು 10,734 ಕೋಟಿ ರೂ.ಸಾಲದಲ್ಲಿ 9448 ಕೋಟಿ ರೂ. ಸಾಲ ಮನ್ನಾ ಆಗಲಿದೆ. ಇದರಿಂದ ಸಹಕಾರಿ ಸಂಘಗಳಲ್ಲಿ ಸದಸ್ಯರಾಗಿರುವ 20.38 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದರು.

ರೈತರ ಸಾಲ ಮನ್ನಾ ಮಾಡಲು ಹಣದ ಕೊರತೆಯಿಲ್ಲ. ಸಾಲ ನವೀಕರಣ ಸಂದರ್ಭದಲ್ಲಿ ಸಹಕಾರ ಇಲಾಖೆ ಪ್ರತಿ ತಿಂಗಳು ಸಲ್ಲಿಸುವ ಬೇಡಿಕೆಗೆ ಅನುಗುಣವಾಗಿ ಹಣಕಾಸು ಇಲಾಖೆ ಅನುದಾನ ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಎರಡನೇ ಹಂತವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 6500 ಕೋಟಿ ರೂ. ಗಳ ಸಾಲಮನ್ನಾ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಲಾಗುವುದು. ಈ ಕುರಿತು ಈಗಾಗಲೇ ಅಗತ್ಯ ಪ್ರಕ್ರಿಯೆಗಳು ಪ್ರಾರಂಭವಾಗಿದ್ದು, ಬ್ಯಾಂಕರುಗಳ ಜೊತೆ ಚರ್ಚಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಬಹುಶಃ ಸಾಲಮನ್ನಾದ ಪ್ರಕ್ರಿಯೆ 4 ಹಂತಗಳ ಬದಲಾಗಿ ಮುಂದಿನ ವರ್ಷವೇ ಪೂಣಗೊಳ್ಳಬಹುದು ಎಂಬ ಆಶಾಭಾವನೆ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಸಾಲ ಮನ್ನಾ ಕುರಿತ ಮಾರ್ಗಸೂಚಿಗಳ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದು, ಒಂದು ಕುಟುಂಬಕ್ಕೆ ಒಂದು ಲಕ್ಷರೂ.ವರೆಗಿನ ಸಾಲಮನ್ನಾ ಎಂಬ ಅಂಶವನ್ನು ಕೈಬಿಡಲಾಗಿದೆ ಎಂದು ತಿಳಿಸಿದರು.

ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಸರಕಾರ ಬದ್ಧವಾಗಿದೆ. ನಿಮ್ಮನ್ನು ಉಳಿಸಿಕೊಳ್ಳುವುದು ನಮ್ಮ ಆದ್ಯತೆ. ಆತ್ಮಹತ್ಯೆ ಮಾಡಿಕೊಂಡು ನಿಮ್ಮ ಕುಟುಂಬವನ್ನು ಬೀದಿ ಪಾಲು ಮಾಡಬೇಡಿ ಎಂದು ಮುಖ್ಯಮಂತ್ರಿ ಮನವಿ ಮಾಡಿದರು.

ಪತ್ರಿಕೆಯೊಂದರಲ್ಲಿ ಶಾದಿಭಾಗ್ಯ ಯೋಜನೆಗೆ ಅನುದಾನ ಕಡಿತ, ಮಾತೃಪೂರ್ಣ ಯೋಜನೆ ಕೈ ಬಿಟ್ಟಿರುವುದಾಗಿ ವರದಿ ಪ್ರಕಟವಾಗಿದೆ. ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಪ್ರಸಕ್ತ ಸಾಲಿನ ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಜು.31ರವರೆಗೆ ಒಪ್ಪಿಗೆ ಲೇಖಾನುದಾನದಲ್ಲಿ ಯಾವುದೆ ಯೋಜನೆಗಳನ್ನು ಕೈ ಬಿಟ್ಟಿಲ್ಲ. ಇನ್ನು ಹೆಚ್ಚುವರಿಯಾಗಿ ಕಾರ್ಯಕ್ರಮಗಳನ್ನು ಸೇರಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಮೇಕೆದಾಟು ಯೋಜನೆ: ಮೇಕೆದಾಟು ಯೋಜನೆ ಜಾರಿ ಕುರಿತು ನಿನ್ನೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಹೊಸದಿಲ್ಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿ ಸಂಬಂಧಪಟ್ಟ ರಾಜ್ಯಗಳ ಸಭೆ ಕರೆಯುವಂತೆ ಮನವಿ ಮಾಡಿದ್ದಾರೆ. ಈ ಯೋಜನೆಯಿಂದ ತಮಿಳುನಾಡಿನ ರೈತರಿಗೇ ಅನುಕೂಲ ಹೆಚ್ಚು. ಈ ಸಂಬಂಧ ತಮಿಳುನಾಡಿನ ಮುಖ್ಯಮಂತ್ರಿ, ಪ್ರಮುಖ ರಾಜಕೀಯ ನಾಯಕರು ಹಾಗೂ ರೈತರನ್ನು ಮನವೊಲಿಸಲಾಗುವುದು ಎಂದು ಅವರು ಹೇಳಿದರು.

ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್ ಮಾತನಾಡಿ, ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (2018-19) ವತಿಯಿಂದ ನಡೆಸುತ್ತಿರುವ ವಸತಿ ಶಾಲೆ/ಕಾಲೇಜುಗಳ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಟೈ ಮತ್ತು ಬೆಲ್ಟ್‌ಗಳನ್ನು ಅಂದಾಜು 10.36 ಕೋಟಿ ರೂ.ಗಳ ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದರು.

ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ ಸಚಿವ ಸಂಪುಟಕ್ಕೆ ಸೂಕ್ತ ಶಿಫಾರಸು ಮಾಡಲು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಹೊಳೆನರಸೀಪುರ-ಮಾವಿನ ಕೆರೆ ವ್ಯಾಪ್ತಿಯಲ್ಲಿ ರೈಲ್ವೆ ಮೇಲು ಸೇತುವೆ ಮತ್ತು ಕೂಡು ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೇಂದ್ರ ಸರಕಾರದ ಸಹಯೋಗದೊಂದಿಗೆ 39.93 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಬಂಡೆಪ್ಪ ಕಾಶೆಂಪೂರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಉಪಸ್ಥಿತರಿದ್ದರು.

ಸನ್ನಡತೆ ಆಧಾರದಲ್ಲಿ ಕೈದಿಗಳ ಬಿಡುಗಡೆ
ಸ್ವಾತಂತ್ರ ದಿನಾಚರಣೆ ಅಂಗವಾಗಿ ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವವರ ಪೈಕಿ 93 ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
-ಬಂಡೆಪ್ಪ ಕಾಶೆಂಪೂರ್, ಸಹಕಾರ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X