Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕರ್ನಾಟಕಕ್ಕೊಂದು ಎನರ್ಜಿ...

ಕರ್ನಾಟಕಕ್ಕೊಂದು ಎನರ್ಜಿ ಕ್ಯಾಲ್ಕ್ಯುಲೇಟರ್: ಇಂಧನ ಬೇಡಿಕೆ, ಬಳಕೆ ಕುರಿತ ವೆಬ್‌ಟೂಲ್ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ9 Aug 2018 10:04 PM IST
share

ಬೆಂಗಳೂರು, ಆ. 9: ಭಾರತದಲ್ಲಿ ಬ್ರಿಟಿಷ್ ಹೈಕಮಿಷನರ್ ಡಾಮಿನಿಕ್ ಆಸ್ಕ್‌ವಿತ್ ಕೆಸಿಎಂಜಿ ಅವರು ಗುರುವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಅನಂತರ ಯುಕೆ ಸರಕಾರದ ಸಹಯೋಗದೊಂದಿಗೆ ಸಿದ್ಧಪಡಿಸಲಾಗಿರುವ ಕರ್ನಾಟಕ ಸ್ಟೇಟ್ ಎನರ್ಜಿ ಕ್ಯಾಲ್ಕ್ಯುಲೇಟರ್-2050 ವೆಬ್‌ಟೂಲ್ಅನ್ನು ಸಿಎಂ ಕುಮಾರಸ್ವಾಮಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬ್ರಿಟಿಷ್ ಹೈಕಮಿಷನರ್ ಡಾಮಿನಿಕ್ ಆಸ್ಕ್‌ವಿತ್ ಕೆಸಿಎಂಜಿ, ಆಂಧ್ರ, ಗುಜರಾತ್ ಹಾಗೂ ಅಸ್ಸಾಂ ನಂತರ ಎನರ್ಜಿ ಕ್ಯಾಲ್ಕ್ಯುಲೇಟರ್ ರೂಪಿಸಿದ 4ನೆ ರಾಜ್ಯ ಕರ್ನಾಟಕ. ಮಹಾರಾಷ್ಟ್ರ, ತಮಿಳುನಾಡು ರಾಜ್ಯಗಳಲ್ಲಿಯೂ ಎನರ್ಜಿ ಕ್ಯಾಲ್ಕ್ಯುಲೇಟರ್ ಸಿದ್ಧವಾಗುತ್ತಿದೆ. ಇದರಿಂದ ಇಂಧನ ಭದ್ರತೆ, ಇಂಧನ ಬಳಕೆ ಕುರಿತ ಯೋಜನೆ ರೂಪಿಸಲು ಅನುಕೂಲವಾಗಲಿದೆ ಎಂದರು.

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಇಂಧನ ಬಳಕೆ, ಇಂಗಾಲದ ಹೆಜ್ಜೆ ಗುರುತು ಲೆಕ್ಕಹಾಕಲು ಅನುಕೂಲವಾಗಲಿದೆ. ಇದನ್ನು ರಾಜ್ಯದ ಅಗತ್ಯಕ್ಕೆ ತಕ್ಕಂತೆ ರೂಪಿಸಲಾಗಿದೆ ಎಂದ ಅವರು, ಜೊತೆಗೆ ಅತಿ ಹೆಚ್ಚು ನವೀಕರಿಸಬಹುದಾದ ಇಂಧನ ಉತ್ಪಾದನೆ ಮಾಡುತ್ತಿರುವ ರಾಜ್ಯ ಕರ್ನಾಟಕವಾಗಿದೆ ಎಂದು ಅಭಿನಂದಿಸಿದರು. ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸ್ಥಾಪಿಸಲಾಗಿರುವ ಸೋಲಾರ್ ಪಾರ್ಕ್‌ನಲ್ಲಿ ಯು.ಕೆ. ಸಹಭಾಗಿತ್ವವನ್ನು ಸ್ಮರಿಸಿಕೊಂಡ ಅವರು, ಮುಂದಿನ ದಿನಗಳಲ್ಲಿ ಕರ್ನಾಟಕ ಸರಕಾರದ ಇನ್ನಷ್ಟು ಯೋಜನೆಗಳಿಗೆ ಕೈಜೋಡಿಸುವುದು ಎಂದು ಅವರು ಇದೇ ವೇಳೆ ತಿಳಿಸಿದರು.

ನೀತಿ ಆಯೋಗವು 2015ರಲ್ಲಿ ಯುಕೆ ಸಹಯೋಗದೊಂದಿಗೆ ಅಭಿವೃದ್ದಿ ಪಡಿಸಿದ ಇಂಡಿಯಾ ಎನರ್ಜಿ ಸೆಕ್ಯುರಿಟಿ ಸಿನಾರಿಯೋ 2047 ವೆಬ್‌ಟೂಲ್ನ ಮಾದರಿಯಲ್ಲಿ ರಾಜ್ಯಮಟ್ಟದಲ್ಲಿ ಎನರ್ಜಿ ಕ್ಯಾಲ್ಕ್ಯುಲೇಟರ್ ರೂಪಿಸಲಾಗಿದೆ.

ಇದೇ ಸಂದರ್ಭದಲ್ಲಿ ಬ್ರಿಟಿಷ್ ಕೌನ್ಸಿಲ್ ನ 70ನೆ ವರ್ಷಾಚರಣೆ ಹಿನ್ನೆಲೆಯಲ್ಲಿ ಮಹಿಳೆಯರಿಗಾಗಿ ಯುಕೆಯಲ್ಲಿ ಒಂದು ವರ್ಷದ ಎಸ್‌ಟಿಇಎಂ (ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತಶಾಸ್ತ್ರ) ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್‌ಗೆ ವಿದ್ಯಾರ್ಥಿ ವೇತನ ನೀಡುವ ಯೋಜನೆಯಡಿ ಆಯ್ಕೆಯಾದ 100 ಅಭ್ಯರ್ಥಿಗಳಲ್ಲಿ 15 ಮಹಿಳೆಯರು ಕರ್ನಾಟಕದವರು. ಆ ಯುವತಿಯರನ್ನು ಕುಮಾರಸ್ವಾಮಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಡಾಮಿನಿಕ್ ಮ್ಯಾಕ್‌ಅಲಿಸ್ಟರ್, ಬ್ರಿಟಿಷ್ ಕೌನ್ಸಿಲ್ ನ ಅಧಿಕಾರಿಗಳು, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಮುಖ್ಯಮಂತ್ರಿ ಕಾರ್ಯದರ್ಶಿ ಸೆಲ್ವಕುಮಾರ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X