ಚಿಕ್ಕಮಗಳೂರು : ಅತ್ಯಾಚಾರ ಎಸಗಿದ ಆರೋಪಿಗೆ 10 ವರ್ಷ ಕಠಿಣ ಸಜೆ
ಚಿಕ್ಕಮಗಳೂರು, ಆ.10: 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನಗರದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ.
ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಯಪುರ ಗ್ರಾಮದ 17 ವರ್ಷದ ವಿದ್ಯಾರ್ಥಿನಿಯನ್ನು ಕರೆದೊಯ್ದು ಅತ್ಯಾಚಾರ ಮಾಡಿದ ಹಿನ್ನಲೆಯಲ್ಲಿ ಜಯಪುರ ಪೊಲೀಸ್ ಠಾಣೆ ಪೊಲೀಸರು ಆರೋಪಿ ರಂಜಿತ್‍ಕುಮಾರ್ ಮೇಲೆ ಪ್ರಕರಣವನ್ನು ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಲ್.ಅಶೋಕ್ ಅವರು ಆರೋಪಿ ರಂಜಿತ್‍ಕುಮಾರ್‍ಗೆ ಪೋಕ್ಸೋ ಕಾಯ್ದೆ ಕಲಂ 6 ರ ಅಡಿಯಲ್ಲಿ 10 ವರ್ಷ ಕಠಿಣ ಸಜೆ ಹಾಗೂ ರೂ.25,000 ದಂಡ ವಿಧಿಸಿದೆ. ದಂಡ ಮೊತ್ತ 25,000 ರೂ.ಗಳನ್ನು ನೊಂದ ಬಾಲಕಿಗೆ ಪರಿಹಾರ ನೀಡುವಂತೆ ತೀರ್ಪು ನೀಡಿದೆ.
ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ಆರ್.ನಾಗರಾಜ್ ವಾದ ಮಂಡಿಸಿದರು.
Next Story