Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಮಚಂದ್ರಾಪುರ ಮಠಕ್ಕೆ ಗೋಕರ್ಣ ದೇವಾಲಯ...

ರಾಮಚಂದ್ರಾಪುರ ಮಠಕ್ಕೆ ಗೋಕರ್ಣ ದೇವಾಲಯ ಹಸ್ತಾಂತರ : ಆದೇಶ ರದ್ದುಪಡಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ10 Aug 2018 8:48 PM IST
share
ರಾಮಚಂದ್ರಾಪುರ ಮಠಕ್ಕೆ ಗೋಕರ್ಣ ದೇವಾಲಯ ಹಸ್ತಾಂತರ : ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು, ಆ.10: ಗೋಕರ್ಣ ದೇವಾಲಯನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಪಡಿಸಿದ ಆದೇಶವನ್ನು ರದ್ದುಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
2008ರ ಆ.12ರಂದು ಅಂದಿನ ಸರಕಾರ ಗೋಕರ್ಣ  ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿತ್ತು. ಇದೇ ವೇಳೆ ಸರಕಾರದ ನಿರ್ಧಾರವನ್ನು ಪ್ರಶ್ನೆ ಮಾಡಿ ರಾಜ್ಯ ಹೈಕೋರ್ಟ್‌ನಲ್ಲಿ ಬಾಲಕೃಷ್ಣ ದೀಕ್ಷಿತ್, ಎನ್ನುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.

ರಾಜ್ಯದ ಸರಕಾರದ ಆದೇಶದಲ್ಲಿ ಲೋಪದೋಷಗಳಿವೆ. ಮಹಾಬಲೇಶ್ವರ  ದೇವಸ್ಥಾನವನ್ನು ಧಾರ್ಮಿಕ ದತ್ತಿ ಪಟ್ಟಿಯಿಂದ ಕೈಬಿಟ್ಟಿದ್ದು ಸರಿಯಲ್ಲ. ಹೀಗಾಗಿ, ಬಿಎಸ್‌ವೈ ಸರಕಾರದ ಆದೇಶವನ್ನು ರದ್ದುಗೊಳಿಸುತ್ತಿದ್ದೇವೆ. ಗೋಕರ್ಣ ದೇವಸ್ಥಾನವು ಧಾರ್ಮಿಕ ದತ್ತಿ ದೇಗುಲವಾಗಿ ಮುಂದುವರಿಯಲಿ ಎಂದು ಹೈಕೋರ್ಟ್ ಪೀಠ ತನ್ನ 256 ಪುಟಗಳ ತೀರ್ಪಿನಲ್ಲಿ ತಿಳಿಸಿದೆ.

ಗೋಕರ್ಣ ದೇವಸ್ಥಾನಕ್ಕೆ ತತ್‌ಕ್ಷಣವೇ ಡಿಸಿ ನೇತೃತ್ವದಲ್ಲಿ ಉಸ್ತುವಾರಿ ಸಮಿತಿ ರಚನೆಯಾಗಬೇಕು ಎಂದು ಆದೇಶಿಸಿದ ನ್ಯಾಯಾಲಯವು, ಸಮಿತಿಯ ಸಲಹೆಗಾರರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ಅವರನ್ನು ನೇಮಿಸಿದೆ. ಸೆ. 10ರಂದು ಉಸ್ತುವಾರಿ ಸಮಿತಿ ಅಸ್ತಿತ್ವಕ್ಕೆ ಬರಲಿದ್ದು, ಅಲ್ಲಿಯವರೆಗೂ ಗೋಕರ್ಣ ಕ್ಷೇತ್ರವು ರಾಮಚಂದ್ರಾಪು ಮಠದ ಸುಪರ್ದಿಯಲ್ಲೇ ಇರಲಿದೆ.
ಅಷ್ಟರೊಳಗೆ ಗೋಕರ್ಣ ದೇವಸ್ಥಾನದ ಸ್ಥಿರಾಸ್ತಿ, ಚರಾಸ್ತಿ ಪಟ್ಟಿಯನ್ನು ತಯಾರಿಸಿ ಎರಡು ವಾರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾ.ಅರವಿಂದ್ ಕುಮಾರ್ ಮತ್ತು ನ್ಯಾ. ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ ಸೂಚಿಸಿದೆ.

ಹಾಗೆಯೇ ಗೋಕರ್ಣ ದೇವಾಲಯ ಧಾರ್ಮಿಕ ದತ್ತಿ ದೇಗುಲವಾಗಿ ಮುಂದುವರೆಯಲಿದೆ ಎಂದು ನ್ಯಾಯಪೀಠವು ತಿಳಿಸಿತು. ಗೋಕರ್ಣ ದೇವಸ್ಥಾನಕ್ಕೆ ತತಕ್ಷಣವೇ ಡಿಸಿ ನೇತೃತ್ವದಲ್ಲಿ ಉಸ್ತುವಾರಿ ಸಮಿತಿ ರಚನೆಯಾಗಬೇಕು ಎಂದು ಆದೇಶಿಸಿದ್ದು, ಸಮಿತಿಯ ಸಲಹೆಗಾರರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ಅವರನ್ನು ನೇಮಿಸಿದೆ.

ಶ್ರೀಕ್ಷೇತ್ರ ಮಠದ ಆಡಳಿತಕ್ಕೆ ಬಂದ ಮೇಲೆ ದೇವಸ್ಥಾನದ ಸಂಪೂರ್ಣ ಆರ್ಥಿಕ ವ್ಯವಸ್ಥೆಯನ್ನು ಪಾರದರ್ಶಕ ಮಾಡಲಾಗಿದೆ. ಇಲ್ಲಿ ಬರುವ ಪ್ರತಿ ಪೈಸೆಯೂ ಕೂಡ ಅತ್ಯಂತ ಪಾರದರ್ಶಕವಾಗಿ ನಿರ್ವಹಿಸಲ್ಪಡುತ್ತದೆ ಎಂದು ಮಠ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
2008ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನೇತೃತ್ವದ ಬಿಜೆಪಿ ಸರಕಾರವು, ಗೋಕರ್ಣ ದೇವಸ್ಥಾನವನ್ನು ರಾಮಚಂದ್ರಾಪುರ ಮಠ್ಕಕೆ ಹಸ್ತಾಂತರಿಸಿತ್ತು.

ಪ್ರಕರಣದ ಹಿನ್ನೆಲೆ: ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗೋಕರ್ಣ ದೇವಾಲಯವನ್ನು ಹಿಂದೂ ಧಾರ್ಮಿಕ ದತ್ತಿ ಮತ್ತು ಧರ್ಮದಾಯಿ ಇಲಾಖೆಯ ವ್ಯಾಪ್ತಿಯಿಂದ ಹೊಸನಗರ ರಾಮಚಂದ್ರಾಪುರ ಮಠದ ಸುಪರ್ದಿಗೆ ವಹಿಸಲಾಗಿತ್ತು.

ಇತಿಹಾಸ ಪ್ರಸಿದ್ದ ಗೋಕರ್ಣ ಮಹಾಬಲೇಶ್ವರ ದೇವಾಲಯವನ್ನು ಸರಕಾರ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಇಂಗಿತ ವ್ಯಕ್ತ ಪಡಿಸಿರುವ ಹಿನ್ನೆಲೆಯಲ್ಲಿ, ಸರಕಾರದ ವಿರುದ್ದ ಭಾರೀ ವಿರೋಧ ವ್ಯಕ್ತವಾಗಿತ್ತು.ಗೋಕರ್ಣ ದೇವಸ್ಥಾನ ಯಾವತ್ತಿಗೂ ಕೂಡ ರಾಮಚಂದ್ರಾಪುರ ಮಠದ್ದೇ ಆಗಿರುವ ಕಾರಣ ಸರಕಾರಕ್ಕೆ ಈ ದೇವಸ್ಥಾನದ ಮೇಲೆ ಎಂದಿಗೂ ಹಕ್ಕು ಇರಲಿಲ್ಲ. ಪ್ರಚಲಿತ ಕಾನೂನಿನಂತೆ ಗೋಕರ್ಣ ದೇವಸ್ಥಾನವನ್ನು ಅಧಿಸೂಚಿತ ಪಟ್ಟಿಗೆ ಸೇರಿಸಲು ಸಾಧ್ಯವಿರಲಿಲ್ಲ.

ಈ ವಿಚಾರವನ್ನು ಸರಕಾರವೇ ತನ್ನ ಆದೇಶ ಪ್ರತಿಕ್ರಿಯೆಯಲ್ಲಿ ಹಾಗೂ ನ್ಯಾಯಾಲಯದಲ್ಲಿ ನಿರ್ದಿಷ್ಟವಾಗಿ ಹೇಳಿತ್ತು. ಇದೇ ನಿಲುವನ್ನು ಆಧರಿಸಿ ಸರಕಾರ ಸರ್ವೋಚ್ಛ ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿದೆ ಎಂದು ಮಠ ಸ್ಪಷ್ಟನೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X