ಕೇಂದ್ರ ಸಚಿವ ರಾಜನ್ ಗೊಹೈನ್ ವಿರುದ್ಧ ಅತ್ಯಾಚಾರ ಆರೋಪ
ಗುವಾಹತಿ, ಆ. 10: ಕೇಂದ್ರ ರೈಲ್ವೆ ಖಾತೆಯ ಸಹಾಯಕ ಸಚಿವ ರಾಜನ್ ಗೋಹೈನ್ ಅವರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಅಸ್ಸಾಂನ ಮಹಿಳೆಯೋರ್ವರು ಶುಕ್ರವಾರ ಆರೋಪಿಸಿದ್ದಾರೆ.
ಸಚಿವರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಕೇಂದ್ರ ಅಸ್ಸಾಂನ ನಾಗಾಂವ್ ಜಿಲ್ಲೆಯ ಮಹಿಳೆ ನಾಗಂವ್ ಸದಾರ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ ದಾಖಲಿಸಿದ್ದಾರೆ. ಆಗಸ್ಟ್ 2ರಂದು ಪ್ರಕರಣ ದಾಖಲಿಸಲಾಗಿದೆ. ನಾವು ತನಿಖೆ ನಡೆಸುತ್ತಿದ್ದೇವೆ ಎಂದು ನಾಗಾಂವ್ ಪೊಲೀಸ್ ಅಧೀಕ್ಷಕ ಶಂಕರ್ ರಾಯ್ ಮೇಧಿ ತಿಳಿಸಿದ್ದಾರೆ. ಈ ಬಗ್ಗೆ ಸಚಿವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
Next Story