ಶಾಸಕ ಡಿ.ಸಿ.ಗೌರಿಶಂಕರ್‌ಗೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಆ.10: ಕಳೆದ ವಿಧಾನಸಭೆ ಚುನಾವಣೆ ವೇಳೆ ಅಕ್ರಮವೆಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್‌ಗೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ.
ಪರಾಜಿತ ಅಭ್ಯರ್ಥಿ ಬಿ.ಸುರೇಶ್ ಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಪೀಠ, ಡಿ.ಸಿ. ಗೌರಿಶಂಕರ್ ಸೇರಿ ಎಲ್ಲ 11 ಜನ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಸೆ.7ಕ್ಕೆ ವಿಚಾರಣೆ ಮುಂದೂಡಿತು.
ಪ್ರಕರಣವೇನು: ಕಳೆದ ಮೇ ತಿಂಗಳಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗೌರಿಶಂಕರ್, ಮತದಾರರಿಗೆ ಮತಯಾಚನೆ ಪತ್ರದ ಜೊತೆ ಆರೋಗ್ಯ ವಿಮೆ ಪಾಲಿಸಿ ನೀಡಿ ಆಮಿಷವೊಡ್ಡಿದ್ದಾರೆ. ಅಕ್ರಮದಿಂದ ಮತಗಳನ್ನು ಪಡೆದು ಆರಿಸಿ ಬಂದಿರುವ ಅವರು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 123 ಉಲ್ಲಂಸಿದ್ದಾರೆ ಎಂದು ಆರೊಪಿಸಿರುವ ಬಿ. ಸುರೇಶ್ ಗೌಡ, ಗೌರಿಶಂಕರ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.





