Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ:...

ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ: ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಮಹಿಳೆ

ವಾರ್ತಾಭಾರತಿವಾರ್ತಾಭಾರತಿ11 Aug 2018 5:43 PM IST
share
ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ: ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಮಹಿಳೆ

ಚಿಕ್ಕಮಗಳೂರು, ಆ.11: ಜಿಲ್ಲೆಯ ಮಲೆನಾಡು ಭಾಗದಲ್ಲಿ ಶನಿವಾರವೂ ಮಳೆ ಮುಂದುವರೆದಿದೆ. ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ, ಶೃಂಗೇರಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಈ ಭಾಗದಲ್ಲಿ ಹರಿಯುವ ತಂಗಾ, ಭದ್ರಾ, ಹೇಮಾವತಿ ನದಿಗಳಲ್ಲಿ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬಂದಿದ್ದು, ಶನಿವಾರ ಮುಂಜಾನೆಯಿಂದಲೇ ಮಳೆ ಅಬ್ಬರಿಸುತ್ತಿದೆ. 

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಜಾವಳಿ, ಗುತ್ತಿ, ಭೈರಾಪುರ ಸುತ್ತಮುತ್ತಲ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಚಾರ್ಮಾಡಿ ಘಾಟಿಯಲ್ಲಿ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಚಾರ್ಮಾಡಿ ರಸ್ತೆ ಮಾರ್ಗವಾಗಿ ಮಂಗಳೂರು, ಧರ್ಮಸ್ಥಳಕ್ಕೆ ಹೋಗುತ್ತಿರುವ ವಾಹನಗಳು ಭಾರೀ ಎಚ್ಚರಿಕೆ ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. 

ಶೃಂಗೇರಿ ಭಾಗದಲ್ಲಿ ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದ್ದು, ಶನಿವಾರ ಮುಂಜಾನೆಯಿಂದ ನಿರಂತರವಾಗಿ ಸಾಧಾರಣ ಮಳೆ ಸುರಿಯಲಾರಂಭಿಸಿತ್ತು. ತಾಲೂಕಿನ ಕಿಗ್ಗಾ, ನೆಮ್ಮಾರು. ಕೆರೆಕಟ್ಟೆ, ಮೆಣಸೆ ಮತ್ತಿತರ ಕಡೆಗಳಲ್ಲಿ ಶುಕ್ರವಾರ, ಶನಿವಾರ ಭಾರೀ ಮಳೆಯಾದ ಬಗ್ಗೆ ವರದಿಯಾಗಿದೆ. ಶೃಂಗೇರಿ ತಾಲೂಕಿನ ಬೇಗಾರು ಸಮೀಪದ ದೇವಾಲೆಕೊಪ್ಪ ಗ್ರಾಮದ ಸುಶೀಲಾ ಎಂಬವರು ಭತ್ತದ ಗದ್ದೆ ನಾಟಿ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಹಳ್ಳವೊಂದಕ್ಕೆ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಮಹಿಳೆಯ ಶೋಧಕಾರ್ಯ ನಡೆಸಲಾಗುತ್ತಿದೆ.

ಇನ್ನು ಕೊಪ್ಪ, ಎನ್.ಆರ್.ಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗದಿದ್ದರೂ ನಿರಂತರವಾಗಿ ಸಾಧಾರಣ ಮಳೆ ಸುರಿಯುತ್ತಿದೆ.  ಚಿಕ್ಕಮಗಳೂರು ತಾಲೂಕಿನಾದ್ಯಂತ ಶನಿವಾರ ಬೆಳಗ್ಗೆಯಿಂದ ಸಂಜೆಯವರೆಗೆ ಆಗಾಗ್ಗೆ ಸಾಧಾರಣ ಮಳೆ ಸುರಿದಿದ್ದು, ದಿನವಿಡೀ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಜಿಲ್ಲೆಯ ಬಯಲು ಸೀಮೆ ಭಾಗವಾದ ಕಡೂರು, ಬೀರೂರು, ತರೀಕೆರೆ ಸುತ್ತಮುತ್ತ ಸಾಧಾರಣ ಮಳೆಯಾದ ಬಗ್ಗೆ ವರದಿಯಾಗಿದೆ.

ಜಿಲ್ಲೆಯ ಮಲೆನಾಡು ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಇಲ್ಲಿನ ಪ್ರಮುಖ ನದಿಗಳಲ್ಲಿ ನೀರಿನ ಹರಿವೂ ಹೆಚ್ಚುತ್ತಿದೆ. ನದಿ ಪಾತ್ರದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಸಂಚರಿಸದಂತೆ ಜಿಲ್ಲಾಡಳಿತ ಆದೇಶ ನೀಡಿರುವುದರಿಂದ ಸ್ಥಳೀಯ ಪೊಲೀಸರು ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X