ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನ ಮುಖ್ಯ: ವಿಟಿಯು ಉಪ ಕುಲಪತಿ ಕರಿ ಸಿದ್ದಪ್ಪ
ಬೆಂಗಳೂರು, ಆ.11: ವಿದ್ಯಾರ್ಥಿ ದೆಸೆಯಲ್ಲಿಯೆ ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳುವುದರಿಂದ ಉತ್ತಮ ಸಾಧನೆ ಮಾಡಲು ಸಾಧ್ಯವಾಗಲಿದೆ ಎಂದು ವಿಟಿಯು ಉಪ ಕುಲಪತಿ ಕರಿ ಸಿದ್ದಪ್ಪ ತಿಳಿಸಿದರು.
ಕೆ.ಆರ್.ಪುರಂ ಕ್ಷೇತ್ರದ ಕೇಂಬ್ರಿಡ್ಜ್ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳ ಜೊತೆಗಿನ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನ ಮುಖ್ಯವಾಗುತ್ತದೆ. ನಮ್ಮ ಸುತ್ತಮುತ್ತ ಪರಿಸರದಿಂದ ಸಿಗುವ ಸಾಮಾನ್ಯ ಜ್ಞಾನವನ್ನು ಪಡೆದುಕೊಳ್ಳಲು ಆಸಕ್ತಿ ವಹಿಸಬೇಕು ಎಂದು ತಿಳಿಸಿದರು.
ಸಮೂಹ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಜ್ಞಾನಾರ್ಜನೆ ಆಗುತ್ತದೆ. ಇದರಿಂದ ಪ್ರತಿ ವಿದ್ಯಾರ್ಥಿಗಳು ಅವರಲ್ಲಿರುವ ಕೌಶಲ್ಯವನ್ನು ಎಲ್ಲ ವಿದ್ಯಾರ್ಥಿಗಳಿಗೆ ತಿಳಿಸುವಂತಾಗುತ್ತದೆ. ಇದು ಕಲಿಕೆಯಲ್ಲಿ ಅತ್ಯುತ್ತಮ ವಿಧಾನವೆಂದು ಅವರು ಅಭಿಪ್ರಾಯಿಸಿದರು.
Next Story





