Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿನಿಮಾದಿಂದ ಮಕ್ಕಳಲ್ಲಿ ಮನೋವಿಕಾಸ...

ಸಿನಿಮಾದಿಂದ ಮಕ್ಕಳಲ್ಲಿ ಮನೋವಿಕಾಸ ಸಾಧ್ಯ: ಎಂ.ಬಸವಯ್ಯ

ವಾರ್ತಾಭಾರತಿವಾರ್ತಾಭಾರತಿ11 Aug 2018 10:07 PM IST
share
ಸಿನಿಮಾದಿಂದ ಮಕ್ಕಳಲ್ಲಿ ಮನೋವಿಕಾಸ ಸಾಧ್ಯ: ಎಂ.ಬಸವಯ್ಯ

ತುಮಕೂರು,ಆ.11: ಸಿನಿಮಾದಿಂದ ಮಕ್ಕಳಲ್ಲಿ ಮನೋವಿಕಾಸ ಸಾಧ್ಯ ಎಂದು ಜಿಲ್ಲಾ ಬಾಲಭವನ ಸಂಘ ಸದಸ್ಯ ಎಂ. ಬಸವಯ್ಯ ಅಭಿಪ್ರಾಯಪಟ್ಟಿದ್ದಾರೆ.

ಬಾಲಭವನದಲ್ಲಿ ಜಿ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಂಘ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ `ವಾರಾಂತ್ಯ ಸಿನಿಮಾ'ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಾಲಭವನದ ಆಶ್ರಯದಲ್ಲಿ ಪ್ರತಿ ಶನಿವಾರ ಮಕ್ಕಳಿಗಾಗಿ ಸಿನಿಮಾ ಆಯೋಜಿಸುತ್ತಿದ್ದೇವೆ. ಇದನ್ನು ಮಕ್ಕಳು ಗಮನವಿಟ್ಟು ನೋಡಿದರೆ ಹೊಸ ಹೊಸ ಆಲೋಚನೆಗಳು ತೆರೆದುಕೊಳ್ಳುತ್ತದೆ ಎಂದರು.

ದೃಶ್ಯ ಮಾಧ್ಯಮಗಳು ಮಕ್ಕಳ ಮೇಲೆ ಬೀರುವ ಪರಿಣಾಮವೇ ಬೇರೆ. ಆದಷ್ಟು ಮಕ್ಕಳು ಇಂಟರ್ ನೆಟ್, ಮೊಬೈಲ್‍ಗಳನ್ನು ಕಡಿಮೆ ಮಾಡಿ ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು ಮತ್ತು ಹೊಸ ಅಲೆಯ ಚಿತ್ರಗಳನ್ನು ನೋಡಬೇಕು. ಬಾಲಭವನ ಮುಂದಿನ ದಿನಗಳಲ್ಲಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದೇವೆ. ಮಕ್ಕಳ ನಾಟಕಗಳು, ನಾಟಕೋತ್ಸವಗಳನ್ನು ನಡೆಸುತ್ತೇವೆ. ಈ ಮೂಲಕ ಮಕ್ಕಳ ಜ್ಞಾನ ವಿಕಾಸಕ್ಕೆ ನೀರು ಹಾಕುವ ಕೆಲಸವನ್ನು ನಾವು ಮಾಡಲು ಸಿದ್ಧರಿದ್ದೇವೆ. ಮಕ್ಕಳ ಸಿನಿಮಾ ಆಯೋಜಿಸಲು ಹೊರಟಿರುವ ಬೆನ್ನಲ್ಲೇ ಸಾಕಷ್ಟು ಉತ್ತಮ ಪ್ರತಿಕ್ರಿಯೆ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಹೊಸ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ತಿಳಿಸಿದರು.

ಸಿನಿಮಾ ವಿಮರ್ಶಕ ಮನು ಮಾತನಾಡಿ, ಕೇರಳದಲ್ಲಿ 900 ಕ್ಕೂ ಹೆಚ್ಚು ಸಿನಿಮಾ ಕ್ಲಬ್‍ಗಳಿವೆ. ಅಲ್ಲಿನ ಜನ ಸಿನಿಮಾ ನೋಡಿ ಅದರ ಬಗ್ಗೆ ಚರ್ಚೆ ನಡೆಸುತ್ತಾರೆ. ಹೀಗಾಗಿ ಕೇರಳ ರಾಜ್ಯ ಸಾಂಸ್ಕೃತಿಕವಾಗಿ ಸಮೃದ್ಧಿಯಾಗಿದೆ ಎಂದು ವಿಶ್ಲೇಷಿಸಿದರು. ಮಕ್ಕಳು ರಂಜನೆಗಾಗಿ ಸಿನಿಮಾ ನೋಡಬಾರದು. ಅದರಲ್ಲಿರುವ ಆಶಯಗಳನ್ನು ಅರ್ಥ ಮಾಡಿಕೊಳ್ಳಬೇಕು. ಸದ್ಯ ಇವತ್ತು ಮಕ್ಕಳ ಬೆಳವಣಿಗೆಗೆ ಪೂರಕವಾದ ಚಿತ್ರಗಳನ್ನು ತೋರಿಸುತ್ತಿದ್ದೇವೆ. ಇದನ್ನು ಮಕ್ಕಳು ನೋಡಿ ಮಾನವೀಯ ಅಂಶಗಳನ್ನು ಬೆಳೆಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.

ಝೆನ್ ಟೀಮ್ ಮುಖ್ಯಸ್ಥ ಹಾಗೂ ಪತ್ರಕರ್ತ ಉಗಮ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್. ನಟರಾಜ್, ಮಮತಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X