ಶಿವಮೊಗ್ಗ: ಆಯಿಲ್ ಸೆಂಟರ್ ನಲ್ಲಿ ಬೆಂಕಿ ಅವಘಡ; ಲಕ್ಷಾಂತರ ರೂ. ನಷ್ಟ
ಶಿವಮೊಗ್ಗ, ಆ. 11: ಆಯಿಲ್ ಅಂಗಡಿಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿರುವ ಘಟನೆ ಜಿಲ್ಲೆಯ ಸಾಗರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ತಡರಾತ್ರಿ ನಡೆದಿದೆ.
ನಾಗರಾಜ್ ಎಂಬವರಿಗೆ ಸೇರಿದ ಈಗಲ್ ಆಯಿಲ್ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ. ಅಂಗಡಿಗೆ ಬೆಂಕಿ ಹೊತ್ತಿಕೊಂಡ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಕಿಯ ಕೆನ್ನಾಲಿಗೆಗೆ ಸುಮಾರು 6 ಲಕ್ಷ ರೂ. ಮೌಲ್ಯದ ಆಯಿಲ್ ಪಂಪ್‍ಗಳು, ಅಮೂಲ್ಯ ದಾಖಲೆಗಳು, ಗಿಫ್ಟ್ ಓಚರ್, ಪೀಠೋಪಕರಣ ಸಂಪೂರ್ಣ ಭಸ್ಮವಾಗಿದೆ. ಬೆಂಕಿಯಿಂದ ಮೇಲ್ಭಾಗದ ಕೊಠಡಿಗೆ ಸಹ ಹಾನಿಯಾಗಿದೆ. ಈ ಸಂಬಂಧ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story