Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಶ್ರಮದಲ್ಲಿದ್ದ ಇಬ್ಬರು ಮಹಿಳೆಯರ ಸಾವು:...

ಆಶ್ರಮದಲ್ಲಿದ್ದ ಇಬ್ಬರು ಮಹಿಳೆಯರ ಸಾವು: ಪ್ರಕರಣ ಮುಚ್ಚಿಡಲು ಯತ್ನಿಸಿದ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ12 Aug 2018 7:28 PM IST
share
ಆಶ್ರಮದಲ್ಲಿದ್ದ ಇಬ್ಬರು ಮಹಿಳೆಯರ ಸಾವು: ಪ್ರಕರಣ ಮುಚ್ಚಿಡಲು ಯತ್ನಿಸಿದ ಅಧಿಕಾರಿಗಳು

ಪಾಟ್ನಾ, ಆ.12: ಬಿಹಾರದಲ್ಲಿರುವ ಮಾನಸಿಕ ಅಸ್ವಸ್ಥ ಮಹಿಳೆಯರ ಆಶ್ರಮದಲ್ಲಿ ಮೃತಪಟ್ಟಿರುವ ಇಬ್ಬರು ಮಹಿಳೆಯರ ಮರಣೋತ್ತರ ಪರೀಕ್ಷೆಯನ್ನು ಪಾಟ್ನದ ಮೆಡಿಕಲ್ ಕಾಲೇಜಿನಲ್ಲಿ ನಡೆಸಲಾಗಿದೆ. ಆದರೆ ರಾಜ್ಯ ಸರಕಾರದ ಅಧೀನದಲ್ಲಿರುವ ಈ ಆಶ್ರಮದ ಅಧಿಕಾರಿಗಳು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿಲ್ಲ ಎಂದು ವರದಿಯಾಗಿದೆ. ಆಶ್ರಮದಲ್ಲಿದ್ದ 40ರ ಹರೆಯದ ಮಹಿಳೆ ಹಾಗೂ 16ರ ಹರೆಯದ ಯುವತಿಯನ್ನು ಶುಕ್ರವಾರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅವರು ಆಸ್ಪತ್ರೆಗೆ ದಾಖಲಿಸುವಾಗಲೇ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ರವಿವಾರ ಬೆಳಿಗ್ಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಪಾಟ್ನದ ಡಿವೈಎಸ್ಪಿ ಮನೋಜ್ ಕುಮಾರ್ ಸುಧಾಂಶು ತಿಳಿಸಿದ್ದಾರೆ. ಮಹಿಳೆಯರು ಭೇದಿಯಿಂದ ಮೃತಪಟ್ಟಿರುವುದಾಗಿ ಆಶ್ರಮದ ಅಧಿಕಾರಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಆಶ್ರಮದ ನಿವಾಸಿಗಳಿಗೆ ಪರಾರಿಯಾಗಲು ನೆರವಾಗುತ್ತಿದ್ದ ಆರೋಪದಲ್ಲಿ ಪೊಲೀಸರು ಆಶ್ರಮದ ಸಿಬ್ಬಂದಿಯೊಬ್ಬನನ್ನು ಬಂಧಿಸಿದ್ದಾರೆ. ಶುಕ್ರವಾರ ಈ ಆಶ್ರಮಕ್ಕೆ ಭೇಟಿ ನೀಡಿದ್ದ ಪೊಲೀಸರು ಅಲ್ಲಿ ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದರು. ಅಲ್ಲದೆ ಅದೇ ದಿನ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ತಂಡವೂ ಆಶ್ರಮಕ್ಕೆ ಭೇಟಿ ನೀಡಿತ್ತು. ಆದರೆ ಮಹಿಳೆಯರು ಸಾವನ್ನಪ್ಪಿದ್ದ ವಿಷಯವನ್ನು ಸಿಬ್ಬಂದಿಗಳು ಆಗ ತಿಳಿಸಿರಲಿಲ್ಲ ಎನ್ನಲಾಗಿದೆ.

ಪಾಟ್ನಾ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ ಸಂದರ್ಭ ಸಾವು ಸಂಭವಿಸಿದೆ ಎಂದು ಆಶ್ರಮದ ಅಧಿಕಾರಿಗಳು ತಿಳಿಸಿದ್ದರೆ, ಅವರನ್ನು ಆಸ್ಪತ್ರೆಗೆ ಕರೆತರುವಾಗಲೇ ಮೃತಪಟ್ಟಿದ್ದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ರಾಜ್ಯ ಸರಕಾರದ ಅನುದಾನಿತ ಆಶ್ರಮದಲ್ಲಿ 30 ಬಾಲಕಿಯರ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ಭಾರೀ ಒತ್ತಡ ಎದುರಿಸುತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ರನ್ನು ಈ ಪ್ರಕರಣ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಪ್ರಮುಖ ಸಾಕ್ಷಿಯಾಗಿದ್ದ ಬಾಲಕಿ ನಾಪತ್ತೆ

ಈ ಮಧ್ಯೆ, ಮುಝಫರ್‌ಪುರದ ಆಶ್ರಮದಲ್ಲಿ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದ ಬಳಿಕ ಅಲ್ಲಿದ್ದ 44 ಬಾಲಕಿಯರನ್ನು ಮಧುಬನಿ ಆಶ್ರಮಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ಸ್ಥಳಾಂತರ ಪ್ರಕ್ರಿಯೆಯ ಸಂದರ್ಭ 13ರ ಹರೆಯದ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಾಳೆ. ಈಕೆ ಮುಝಫರ್‌ಪುರ ಲೈಂಗಿಕ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದಳು ಎನ್ನಲಾಗಿದೆ. ಈ ಬಾಲಕಿಗೆ ಎಲ್ಲಾ ವಿಷಯ ತಿಳಿದಿತ್ತು. ಅವಳನ್ನು ಮುಝಫರ್‌ಪುರದಿಂದ ಮಧುಬನಿ ಆಶ್ರಮಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ಮಧುಬನಿ ಆಶ್ರಮವು ನಿತೀಶ್ ಕುಮಾರ್ ಅವರ ಬೆಂಬಲಿಗ ಸಂಜಯ್ ಝಾ ಅವರ ಉಸ್ತುವಾರಿಯಲ್ಲಿದೆ. ಬಾಲಕಿಯನ್ನು ತಕ್ಷಣ ಹಾಜರು ಪಡಿಸದಿದ್ದರೆ ಮಧುಬನಿಯಲ್ಲಿ ನಾವು ಪ್ರತಿಭಟನೆ ನಡೆಸಲಿದ್ದೇವೆ ಎಂದು ಬಿಹಾರದ ಮಾಜಿ ಉಪಮುಖ್ಯಮಂತ್ರಿ, ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X