ಕೋಲಾರ: ರ್ಯಾಗಿಂಗ್ ಆರೋಪ- ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
ಕೋಲಾರ, ಆ. 13: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ರ್ಯಾಗಿಂಗ್ ಆರೋಪದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕೆಜಿಎಫ್ ನಗರದ ಇಟಿ ಬ್ಲಾಕ್ ನಲ್ಲಿ ರವಿವಾರ ರಾತ್ರಿ ನಡೆದಿದೆ.
ಸಂಜೀವಿನಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಆಕೆ ಬಂಗಾರಪೇಟೆಯ ಎಸ್.ಡಿ.ಸಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದರು ಎಂದು ತಿಳಿದುಬಂದಿದೆ.
ವಿದ್ಯಾರ್ಥಿನಿ ಇದ್ದ ಅದೇ ವಾರ್ಡ್ ನ ಜೋಸಿಫ್ ಹಾಗೂ ಇತರ ಸ್ನೇಹಿತರು ರ್ಯಾಗಿಂಗ್ ಮತ್ತು ಕಿರುಕುಳ ಮಾಡಿದ ಆರೋಪ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಷಕರು ಆರೋಪ ಮಾಡಿದ್ದಾರೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story