Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸ್ವಾತಂತ್ರೋತ್ಸವದ ಹಿನ್ನೆಲೆ:...

ಸ್ವಾತಂತ್ರೋತ್ಸವದ ಹಿನ್ನೆಲೆ: ಮುಂಜಾಗ್ರತಾ ಕ್ರಮವಾಗಿ ಸಂಚಾರ ಮಾರ್ಗ ಬದಲಾವಣೆ

ವಾರ್ತಾಭಾರತಿವಾರ್ತಾಭಾರತಿ13 Aug 2018 9:49 PM IST
share

ಬೆಂಗಳೂರು, ಆ.13: ಸ್ವಾತಂತ್ರೋತ್ಸವದ ಅಂಗವಾಗಿ ಅದ್ಧೂರಿ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವುದರಿಂದ, ಸಂಚಾರ ದಟ್ಟಣೆಯುಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಸಂಚಾರಿ ಮಾರ್ಗ ಬದಲಾವಣೆ ಮಾಡಲಾಗಿದೆ.

ಮೈದಾನ ಪ್ರವೇಶಕ್ಕಾಗಿ ವಿವಿಧ ಬಣ್ಣದ ಪಾಸ್‌ಗಳನ್ನು ಹೊಂದಿರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಬದಲಾದ ಸಂಚಾರ ಮಾರ್ಗದಲ್ಲಿ ಸಂಚಾರ ಮಾಡುವ ಮೂಲಕ ಸಹಕಾರ ನೀಡಬೇಕು ಎಂದು ಕೋರಲಾಗಿದೆ.

ಪ್ರವೇಶ ದ್ವಾರ-1(ಹಳದಿ ಪಾಸ್): ದ್ವಾರ-1ರಲ್ಲಿ ಹಳದಿ ಪಾಸ್ ಹೊಂದಿರುವ ಆಹ್ವಾನಿತರು ಪ್ರವೇಶಿಸಲು ಅವಕಾಶವಿದ್ದು, ಕಬ್ಬನ್ ರಸ್ತೆಯಲ್ಲಿ ಸಂಚರಿಸಿ ಮಾಣಿಕ್ ಷಾ ಪರೇಡ್ ಮೈದಾನಕ್ಕೆ ಉತ್ತರದ ಮೂಲಕ ಒಳ ಪ್ರವೇಶಿಸಬೇಕು. ಮೈದಾನದ ಪಶ್ಚಿಮ ಭಾಗದಲ್ಲಿ ಕಲ್ಪಿಸಲಾಗಿರುವ ಜಾಗದಲ್ಲಿ ವಾಹನಗಳ ನಿಲುಗಡೆ ಮಾಡಬೇಕು.

ಪ್ರವೇಶ ದ್ವಾರ-2 (ಬಿಳಿ ಕಾರ್ ಪಾಸ್): ದ್ವಾರ-2 ರಲ್ಲಿ ಪ್ರವೇಶಿಸುವವರು ಕಬ್ಬನ್ ರಸ್ತೆಯಲ್ಲಿ ಸಂಚರಿಸಿ ಪ್ರವೇಶ ದ್ವಾರ-2ರ ಮುಖಾಂತರ ಒಳ ಪ್ರವೇಶಿಸಬೇಕು. ನಂತರ ಬಲ ತಿರುವು ಪಡೆದು ಪರೇಡ್ ಮೈದಾನದ ಪಶ್ಚಿಮ ಭಾಗದಲ್ಲಿ ವಾಹನಗಳಿಗೆ ಮೀಸಲಿರಿಸಿರುವ ಜಾಗದಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕು. ಈ ಮೂಲಕ ಗಣ್ಯರು, ಸಚಿವರು, ಸರ್ಕಾರದ ಕಾರ್ಯದರ್ಶಿಗಳು, ರಕ್ಷಣಾ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪ್ರವೇಶಕ್ಕೆ ಅವಕಾಶವಿದೆ.

ಪ್ರವೇಶ ದ್ವಾರ-3 (ಪಿಂಕ್ ಪಾಸ್ ಪಾಸ್): ಪಿಂಕ್ ಪಾಸ್ ಹೊಂದಿರುವವರು ತಮ್ಮ ವಾಹನಗಳನ್ನು ಮೈನ್ ಗಾರ್ಡ್ ಕ್ರಾಸ್ ರಸ್ತೆ ಅಫೀನಾ ಪ್ಲಾಜಾ ಮುಂಭಾಗ ಕಾಮರಾಜ ರಸ್ತೆ ಆರ್ಮಿ ಪಬ್ಲಿಕ್ ಶಾಲೆ ಎದುರು ಮತ್ತು ಆರ್‌ಎಸ್‌ಐ ಗೇಟ್ ಮುಂಭಾಗ (ಉತ್ತರದ ಕಡೆ) ವಾಹನ ನಿಲುಗಡೆ ಮಾಡಿ ಒಳ ಪ್ರವೇಶ ಮಾಡಬೇಕು.

ಪ್ರವೇಶ ದ್ವಾರ-5 (ಹಸಿರು ಪಾಸ್): ಹಸಿರು ಬಣ್ಣದ ಪಾಸ್ ಹೊಂದಿರುವವರು ತಮ್ಮ ವಾಹನಗಳನ್ನು ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ವಾಹನ ನಿಲುಗಡೆ ಮಾಡಿ ಪರೇಡ್ ಮೈದಾನದ 4ಮತ್ತು 5ನೇ ಗೇಟ್‌ನಲ್ಲಿ ಕಾಲ್ನಡಿಗೆಯಲ್ಲಿ ಒಳ ಪ್ರವೇಶಿಸಬೇಕು. ಇನ್ನುಳಿದಂತೆ ಮಾಧ್ಯಮದ ವಾಹನಗಳು, ಡಿಪಿಸಿ ಮತ್ತು ಮೇಲ್ಪಟ್ಟ ಅಧಿಕಾರಿಗಳು ಹಾಗೂ ಇತರೆ ಇಲಾಖೆಗಳ ಮೇಲಧಿಕಾರಿಗಳ ವಾಹನಗಳು ಪ್ರವೇಶ ದ್ವಾರ-3ರ ಮೂಲಕ ಪ್ರವೇಶಿಸಿ ಪೂರ್ವ ಭಾಗದಲ್ಲಿ ವಾಹನ ನಿಲುಗಡೆ ಮಾಡಬೇಕು.

ಕವಾಯತು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ತಮ್ಮ ವಾಹನಗಳನ್ನು ತಮ್ಮ ವಾಹನಗಳನ್ನು ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಮೆಟ್ರೋ ನಿಲ್ದಾಣದವರೆಗೂ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಆ್ಯಂಬುಲೆನ್ಸ್, ಅಗ್ನಿಶಾಮಕದಳ, ನೀರಿನ ಟ್ಯಾಂಕರ್‌ಗಳು, ಕೆಎಸ್‌ಆರ್‌ಪಿ, ಸಿಆರ್‌ಪಿ, ಬಿಬಿಎಂಪಿ ಹಾಗೂ ಲೋಕೋಪಯೋಗಿ ವಾಹನಗಳು ಪ್ರವೇಶ ದ್ವಾರ-1ರಲ್ಲಿ ಪ್ರವೇಶಿಸಿ ಪೋರ್ಟ್‌ವಾಲ್ ಹಿಂಭಾಗ ಪಾರ್ಕಿಂಗ್ ಮಾಡಬೇಕು.
ದ್ವಿಚಕ್ರ ವಾಹನ ಸವಾರರು ಕಾಮರಾಜ ರಸ್ತೆ ಆರ್‌ಎಸ್‌ಐ ಗೇಟ್, ಆರ್ಮಿ ಪಬ್ಲಿಕ್ ಶಾಲೆ ಮುಂಭಾಗ, ಮೈನ್ ಗಾರ್ಡ್ ಕ್ರಾಸ್ ರಸ್ತೆ, ಸಫೀನ ಪ್ಲಾಜಾ ಬಳಿ ವಾಹನ ನಿಲುಗಡೆ ಮಾಡಬೇಕು. ಕಾರು ಪಾಸ್ ಇಲ್ಲದವರು ಶಿವಾಜಿನಗರ ಬಸ್ ನಿಲ್ದಾಣದ ಮೊದಲೇ ಮಹಡಿಯಲ್ಲಿ ವಾಹನ ಪಾರ್ಕಿಂಗ್ ಮಾಡಿ ಕಾಲ್ನಡಿಗೆಯಲ್ಲಿ ಗೇಟ್ ಸಂಖ್ಯೆ 4 ಮತ್ತು 5ರಲ್ಲಿ ಪ್ರವೇಶಿಸಬೇಕು.

ಪರ್ಯಾಯ ಮಾರ್ಗಗಳು: ಸ್ವಾತಂತ್ರೋತ್ಸವದ ಅಂಗವಾಗಿ ಅಂದು ಬೆಳಗ್ಗೆ 8.30ರಿಂದ ಬೆಳಗ್ಗೆ 10.30ರ ವರೆಗೆ ಕಬ್ಬನ್ ರಸ್ತೆಯಲ್ಲಿ ಬಿಆರ್‌ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ವಾಹನ ಸಂಚಾರಕ್ಕೆ ಪರ್ಯಾಯ ರಸ್ತೆ ಕಲ್ಪಿಸಲಾಗಿದೆ. -ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್‌ನಿಂದ ಬಿಆರ್‌ವಿ ಜಂಕ್ಷನ್ ಕಡೆಗೆ ಬರುವ ವಾಹನಗಳು, ಕಾಮರಾಜ ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್‌ನಲ್ಲಿ ಕಾಮರಾಜ ರಸ್ತೆಗೆ ಎಡತಿರುವು ಪಡೆದು, ಕಾವೇರಿ ಆರ್ಟ್ಸ್ ಮತ್ತು ಕ್ರಾಫ್ಟ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು, ಎಂ.ಜಿ.ರಸ್ತೆಯ ಮುಖಾಂತರ ಬಂದು, ಅನಿಲ್ ಕುಂಬ್ಳೆ ವೃತ್ತದ ಮೂಲಕ ಸಾಗಬೇಕು.

-ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್‌ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾ- ಎಡ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ - ಆಲೀಸ್ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮಗಾರ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್- ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ -ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.

-ಅನಿಲ್ ಕುಂಬ್ಳೆ ವೃತ್ತದಿಂದ ಕಬ್ಬನ್‌ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ರಸ್ತೆಯಲ್ಲಿ ಸಾಗಿ ಬಲಕ್ಕೆ ತಿರುವು ಪಡೆದು-ಇನ್‌ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾ- ಎಡಕ್ಕೆ ತಿರಿವು ಪಡೆದು ಮೈನ್‌ಗಾರ್ಡ್ ರಸ್ತೆ- ಆಲಿ ಸರ್ಕಲ್- ಡಿಸ್ಪೆನ್ಸರಿ ರಸ್ತೆ - ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್- ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ - ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದು ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್‌ಗೆ ಸಾಗಬಹುದಾಗಿದೆ. -ಎಂ.ಜಿ.ರಸ್ತೆಯಲ್ಲಿ ಕಾವೇರಿ ಆರ್ಟ್ಸ್ ಮತ್ತು ಕ್ರಾಫ್ಟ್ ವೃತ್ತದಿಂದ ಬಂದು, ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ಗೆ ಹೋಗುವ ವಾಹನಗಳು ನೇರವಾಗಿ ಎಂ.ಜಿ.ರಸ್ತೆಯಲ್ಲಿ ಸಾಗಿ ಅನಿಲ್‌ಕುಂಬ್ಳೆ ವೃತ್ತದ ಬಳಿಗೆ ಬಂದು, ಬಲ ತಿರುವು ಪಡೆದು- ಬಿಆರ್‌ವಿ ಜಂಕ್ಷನ್‌ನಲ್ಲಿ ನೇರವಾಗಿ ಸಂಚರಿಸಿ ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ಮುಂದೆ ಸಾಗಬಹುದು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X