Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಯಲ್ಲಿ ಮುಂದುವರಿದ ಭಾರೀ...

ದ.ಕ. ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ: ಲಕ್ಷಾಂತರ ರೂ. ಹಾನಿ

ವಾರ್ತಾಭಾರತಿವಾರ್ತಾಭಾರತಿ13 Aug 2018 11:22 PM IST
share
ದ.ಕ. ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ: ಲಕ್ಷಾಂತರ ರೂ. ಹಾನಿ

ಮಂಗಳೂರು, ಆ.13: ದ.ಕ. ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆ ಸೋಮವಾರವೂ ಮುಂದುವರಿದಿದೆ. ಮಂಗಳೂರು, ಸುರತ್ಕಲ್, ಮೂಡುಬಿದಿರೆ, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಪುತ್ತೂರು ತಾಲೂಕಿನಾದ್ಯಂತ ಭಾರೀ ಮಳೆ ಸುರಿದಿದೆ. ಸೋಮವಾರ ಬೆಳಗ್ಗೆ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ಮದ ಹೊತ್ತಿನ ಮಳೆ ಬಿರುಸನ್ನು ಪಡೆಯಿತು. ರಾತ್ರಿವರೆಗೂ ಭಾರೀ ಮಳೆ ಸುರಿದಿದೆ.

ಎಡೆಬಿಡದೇ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಪುತ್ತೂರು ತಾಲೂಕಿನ ಹಂಚಿನಡ್ಕ ಗ್ರಾಮದಲ್ಲಿ ನಾಲ್ಕು ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ. ಇದೇ ಗ್ರಾಮದ ಸಲ್ಮಾ ಎಂಬವರಿಗೆ ಸೇರಿದ ಮನೆಗೆ ತೀವ್ರ ಹಾನಿಯಾಗಿದ್ದು, ಸುಮಾರು 35 ಸಾವಿರ ರೂ. ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ.
ಪುತ್ತೂರು ಸಮೀಪದ ತೆಂಕಿಲ ಗ್ರಾಮದ ಶಂಕರ್ ಎಂಬವರಿಗೆ ಸೇರಿದ ಮನೆ ಪೂರ್ಣ ಪ್ರಮಾಣದಲ್ಲಿ ಹಾನಿಯಾಗಿದ್ದು, ಸುಮಾರು ಎರಡೂವರೆ ಲಕ್ಷ ರೂ. ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಮಂಗಳೂರು ನಗರದ ಬಲ್ಮಠ ಸಮೀಪದ ಸನ್ಯಾಸಿಗುಡ್ಡೆಯ ದಲಿತ ಮಹಿಳೆ ಲಲಿತಾ ಎಂಬವರಿಗೆ ಸೇರಿದ ಮನೆಯ ಮೇಲೆ ಬೃಹತ್ ಮರವೊಂದು ಬಿದ್ದಿದೆ. ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರಜೆ ಘೋಷಣೆ ಹೊರತಾಗಿಯೂ ತೆರೆದಿದ್ದ ಶಾಲಾ-ಕಾಲೇಜು !

ದ.ಕ. ಜಿಲ್ಲೆಯ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸುರಕ್ಷತೆಯ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ಸೋಮವಾರ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದರೂ ನಗರದಲ್ಲಿ ಕೆಲವು ಕಾಲೇಜುಗಳು ತೆರೆದಿದ್ದವು.

ನಿಟ್ಟೆ ಎಂಎಸ್‌ಎಎಂ ಕಾಲೇಜು, ನಂತೂರು ಹಾಗೂ ಪ್ರೆಸಿಡೆನ್ಸಿ ಶಾಲೆಯಲ್ಲಿ ರಜೆ ನೀಡಿಲ್ಲ ಎಂದು ಪಾಲಕರ ದೂರು ಬಂದಿತ್ತು. ಈ ಬಗ್ಗೆ ಸಂಬಂಧಪಟ್ಟವರಿಗೆ ಜಿಲ್ಲಾಡಳಿತ ಮಧ್ಯಪ್ರವೇಶಿಸಿ ಎಚ್ಚರಿಕೆ ನೀಡಿದೆ. ಬಳಿಕ ಸದರಿ ಶಿಕ್ಷಣ ಸಂಸ್ಥೆಗಳಲ್ಲಿ ರಜೆ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X