Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಕ್ಕಳಲ್ಲಿ ದೈರ್ಯ ತುಂಬುವ ಕೆಲಸವಾಗಬೇಕು:...

ಮಕ್ಕಳಲ್ಲಿ ದೈರ್ಯ ತುಂಬುವ ಕೆಲಸವಾಗಬೇಕು: ರಾಜೇಶ್ ರೈ

ವಾರ್ತಾಭಾರತಿವಾರ್ತಾಭಾರತಿ13 Aug 2018 11:28 PM IST
share
ಮಕ್ಕಳಲ್ಲಿ ದೈರ್ಯ ತುಂಬುವ ಕೆಲಸವಾಗಬೇಕು: ರಾಜೇಶ್ ರೈ

ಉಳ್ಳಾಲ, ಆ. 13: ಮಕ್ಕಳನ್ನು ಸಂಸ್ಕಾರಯುತ, ಧೈರ್ಯವಂತಹ ಮನುಷ್ಯನನ್ನಾಗಿ ಮಾಡುವಂತಹ ಪ್ರಯತ್ನ ಆಗಬೇಕಿದೆ. ಈ ಮೂಲಕ ಅವರಲ್ಲಿ ಸರಿ  ಮತ್ತು ತಪ್ಪು ದಾರಿಗಳ ಜ್ಞಾನ ವೃದ್ಧಿಯಾಗಲು ಸಾಧ್ಯ ಎಂದು ಶ್ರೀ ಕ್ಷೇತ್ರ ಕೊಂಡಾಣ ಸಮಿತಿ ಅಧ್ಯಕ್ಷ ರಾಜೇಶ್ ರೈ ಕೋಟೆಕಾರ್ ಗುತ್ತು ಅಭಿಪ್ರಾಯಪಟ್ಟರು.

ಅವರು ಎಸ್ಸೆಸ್ಸೆಫ್ ರಾಜ್ಯಾದಂತಹ ಹಮ್ಮಿಕೊಂಡ "ನಮ್ಮ ಮಕ್ಕಳು ನಮ್ಮವರಾಗಲು" ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್ಸೆಸ್ಸೆಫ್ ಕೋಟೆಕಾರ್ ಸೆಕ್ಟರ್ ವತಿಯಿಂದ ಜನಜಾಗೃತಿ ಮೂಡಿಸುವ ಬೈಕ್ ರ್ಯಾಲಿಯ ಸಮಾರೋಪ ಹಾಗೂ ಎಸ್‌ವೈಎಸ್ ಕೆಸಿ ರೋಡು ಸೆಂಟರ್ ವತಿಯಿಂದ ಸ್ವಾತಂತ್ರ್ಯದ ಅಂಗವಾಗಿ ಬೀರಿ ಖಾಸಗಿ ಸಭಾಂಗಣದಲ್ಲಿ ರವಿವಾರ ಜರಗಿದ "ಭಾರತ ಭಾರತೀಯರದ್ದಾಗಲಿ" ಪ್ರಜಾ ಸಂಗಮ ಕಾರ್ಯಕ್ರಮದಲ್ಲಿ ಸಂದೇಶ ಭಾಷಣ ಮಾಡಿದರು.

ಹಿಂದೆ ಕೂಡು  ಕುಟುಂಬವಿತ್ತು. ಎಲ್ಲಾ ನೀತಿಪಾಠವನ್ನು ಮನೆಯೊಳಗೇ ಕಲಿಯುವಂತಹ ಸ್ಥಿತಿಯಿತ್ತು. ಮಕ್ಕಳಿಗೆ ಮನೆಯೇ ಪಾಠಶಾಲೆ ಆಗಿತ್ತು. ಆದರೆ ಇದೀಗ ಹೊರಗಡೆ ಆಟವಾಡುವಂತಹ ಮಕ್ಕಳನ್ನು ಒಳಗೆ ಕರೆತಂದು ಬಂಧಿಯಲ್ಲಿಟ್ಟು ಓದಿಸುವ ಕೆಲಸವಾಗುತ್ತಿದೆ. ಸಾಮಾನ್ಯ ಜೀವನವನ್ನು ಎದುರಿಸುವ ಜ್ಞಾನವನ್ನು ತುಂಬಲಾಗುತ್ತಿಲ್ಲ. ಪುಸ್ತಕದ ಅಕ್ಷರಗಳನ್ನು ಮಾತ್ರ ಓದಿಸುವ ಕಾರ್ಯವಾಗುತ್ತಿದೆ. ಇದರಿಂದಾಗಿ ಮಕ್ಕಳು ಹೊರಜಗತ್ತಿಗೆ ಹೊಂದಿಕೊಳ್ಳಲು ಕಷ್ಟಪಡುತ್ತಿದ್ದಾರೆ. ಬೇಡದ ದಾಸ್ಯಳಿಗೆ ಬಲಿಯಾಗುತ್ತಿದ್ದಾರೆ ಎಂದರು.

ಎಸ್‌ವೈಎಸ್ ರಾಜ್ಯ ಪ್ರ.ಕಾರ್ಯದರ್ಶಿ ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್ ಮಾತನಾಡಿ ದೇಶದಲ್ಲಿ ಸಹಸ್ರ ವರ್ಷಗಳಿಂದ ಪಾಲಿಸುತ್ತಿರುವ ಸಿದ್ಧಾಂತವಿದೆ. ಆದರೆ ಸದ್ಯ ಗುಂಪುಗಳಾಗಿ ವೈವಿದ್ಯತೆಯಲ್ಲಿ ಏಕತೆಯನ್ನು ಮರೆಯುವಂತಹ ಪ್ರಯತ್ನಗಳು ವಿವಿಧ ಶಕ್ತಿಗಳಿಂದ ಆಗುತ್ತಿದೆ. ಭವ್ಯ ಪರಂಪರೆ ಯನ್ನು ಉಳಿಸುವ ನಿಟ್ಟಿನಲ್ಲಿ ಭಾರತೀಯರಲ್ಲಿ ಜಾಗೃತಿಯನ್ನು ಮೂಡಿಸುವ ಕಾರ್ಯ ಆಗಬೇಕಿದೆ. ಸರ್ವರಿಗೂ ಸೇರಿದ ದೇಶವಾಗಬೇಕಿದೆ. ಹಿಂದೆ ದೇಶವನ್ನು ಆಡಳಿತ ನಡೆಸಿದವರು ಧರ್ಮದ ಆಧಾರದಲ್ಲಿ ದೇಶವನ್ನು ಬಯಸಿರಲಿಲ್ಲ. ಅವರವರ ಸಮುದಾಯದ ಸಾಮ್ರಾಜ್ಯವನ್ನು ಸ್ಥಾಪಿಸುತ್ತಾ ಹಿಂದೆ ಹೋಗಿದ್ದಾರೆ. ಜಾತಿ, ಮತ, ಧರ್ಮ, ಪಕ್ಷ, ಮತಗಳ, ಪಂಗಡದ ಆಧಾರದಲ್ಲಿ ದೇಶವನ್ನು ಒಡೆಯಲು ಯುವಜನ ಬಿಡಬಾರದು. ಯಾರನ್ನೂ ಅನ್ಯರನ್ನಾಗಿ ಕಾಣದೆ, ಎಲ್ಲರೂ ನಮ್ಮವರೆಂದು ಕಾಣುವ ವಾತಾವರಣ ನಿರ್ಮಾಣವಾಗಬೇಕಿದೆ. ಪವಿತ್ರವಾದ ಪರಂಪರೆ ದೇಶದಲ್ಲಿ ಇನ್ನೂ ಮುಂದುವರಿಯಬೇಕು. ಭಾರತ ಜಗತ್ತಿನಲ್ಲಿ ಸೂಪರ್ ಪವರ್ ಆಗಿ ಮೆರೆಯುವಂತಹ ತಾಕತ್ತು ಬರಬೇಕಿದೆ ಎಂದರು.

ಎಸ್‌ವೈಎಸ್ ಕೆ.ಸಿ ರೋಡು ಸೆಂಟರ್ ಅಧ್ಯಕ್ಷ ಎನ್. ಎಸ್ ಉಮ್ಮರ್ ಮಾಸ್ಟರ್ ಕಾಯರ್ಕ್ರಮದ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಯಾಗಿ ಅಲೋಶಿಯಸ್ ಕಾಲೇಜಿನ ನಿರ್ದೇಶಕ ಫಾದರ್ ಡೆನ್ಝಿಲ್ ಲೋಬೋ, ತಲಪಾಡಿ ಗ್ರಾ.ಪಂ ಅಧ್ಯಕ್ಷ ಸುರೇಸ್ ಅಳ್ವ, ತಾ.ಪಂ ಸದಸ್ಯ ಮೊದೀನ್ ಬಾವ, ಎಸ್‌ವೈಎಸ್ ಮಂಗಳೂರು ವಲಯಧ್ಯಕ್ಷ ಮುಹಮ್ಮದಾಲಿ ಸಖಾಫಿ ಸುರಿಬೈಲ್, ಎಸ್ಸೆಸ್ಸೆಫ್ ಕೋಟೆಕಾರ್ ಸೆಕ್ಟರ್ ಅಧ್ಯಕ್ಷ ಅಬ್ದುಲ್ ಬಾರಿ ಸಅದಿ, ಎಸ್ ಎಂಎ ತಲಪಾಡಿ ರೇಂಜ್ ಅಧ್ಯಕ್ಷ ಎ.ಎಂ ಅಬ್ಬಾಸ್ ಹಾಜಿ, ಸ್ವಾಗತ ಸಮಿತಿ ಅಧ್ಯಕ್ಷ ಯು.ಬಿ ಮುಹಮ್ಮದ್ ಹಾಜಿ, ಬೀರಿ ಸಾರ್ವಜನಿಕ ಗಣೇಶೋತ್ಸ ಸಮಿತಿ ಅಧ್ಯಕ್ಷ ರಾಮನಾಥ್ ಕೋಟೆಕಾರ್, ಬೀರಿ ಯುವಕ ಮಂಡಲ ಹಿರಿಯ ಸದಸ್ಯ ಲಿಂಗಪ್ಪ ಗಟ್ಟಿ, ಉಚ್ಚೀಲ ಜುಮಾ ಮಸೀದಿ ಅಧ್ಯಕ್ಷ ಅಬ್ಬಾಸ್ ಹಾಜಿ ಪೆರಿಬೈಲ್, ಕೆಳಗಿನ ಕೋಟೆಕಾರ್ ಗುತ್ತು ಮುತ್ತಣ್ಣ ಶೆಟ್ಟಿ, ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಹಮೀದ್ ಹಸನ್, ಎಸ್ಸೆಸ್ಸೆಫ್ ತಲಪಾಡಿ ಸೆಕ್ಟರ್ ಅಧ್ಯಕ್ಷ ಇಸ್ಮಾಯಿಲ್ ಕೆ.ಸಿ ನಗರ, ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ಕೋಟೆಕಾರ್ ಸೆಕ್ಟರ್ ಅಧ್ಯಕ್ಷ ಅಬ್ದುಲ್  ಸಅದಿ ಸ್ವಾಗತಿಸಿದರು. ಎಸ್‌ವೈಎಸ್ ಕೆ.ಸಿ ರೋಡು ಸೆಂಟರ್ ಕಾರ್ಯದರ್ಶಿ ಫಾರೂಖ್ ಕೋಟೆಪುರ ವಂದಿಸಿದರು. ಕೆ.ಸಿ.ರೋಡು ಹಿದಾಯತ್ ನಗರದ ಅಲ್ ಹಿದಾಯ ಮಸೀದಿ ವಠಾರದಿಂದ ಚಾಲನೆಗೊಂಡ ಬೈಕ್ ರ್ಯಾಲಿ ಕೋಟೆಕಾರು ಬೀರಿಯವರೆಗೆ  ಸಾಗಿತ್ತು. ಬಶೀರ್ ಮದನಿ ಕೂಳೂರು ದಿಕ್ಸೂಚಿ ಭಾಷಣ ನೆರವೇರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X