ಕಾರಿನ ಚಕ್ರ ಕಳವು ಪ್ರಕರಣ: ಮೂವರ ಬಂಧನ

ಬೆಂಗಳೂರು, ಆ.14: ರಾತ್ರಿ ವೇಳೆಯಲ್ಲಿ ಕಾರಿನ ಚಕ್ರಗಳನ್ನು ಕಳವು ಮಾಡುತ್ತಿದ್ದ ಆರೋಪದಡಿ ಮೂವರನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿ, 3.81 ಲಕ್ಷ ರೂ. ಮೌಲ್ಯದ 33 ಕಾರಿನ ಚಕ್ರಗಳು ಹಾಗೂ 7 ಲಕ್ಷ ಬೆಲೆಯ 2 ಕಾರುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ಬಾಗಲಗುಂಟೆಯ ಸುನಿಲ್(23), ಬಸವರಾಜ್(33), ಟಿ. ದಾಸರಹಳ್ಳಿಯ ಸಂತೋಷ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಆ.3ರಂದು ಕಾರಿನ ಎರಡು ಚಕ್ರ ಹಾಗೂ ಮತ್ತೊಂದು ಕಾರಿನ ಒಂದು ಚಕ್ರ ಕಳವು ಆಗಿದ್ದ ಬಗ್ಗೆ ಉದಯಕುಮಾರ್ ಎಂಬುವರು ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಚಕ್ರಗಳನ್ನು ಕಳವು ಮಾಡುತ್ತಿದ್ದ ಮೂವರನ್ನು ಬಂಧಿಸಿ ಮಾಲು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ತಲೆ ಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಗಿರೀಶ್ ಎಂಬಾತ ತಲೆ ಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ.
ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ 14 ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ.







