ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಮೇಲೆ ಹಲ್ಲೆ: ಆರೋಪ
ಮೈಸೂರು,ಆ.14: ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಬಿಜೆಪಿಯ ಪಾಲಿಕೆ ಟಿಕೆಟ್ ಆಕಾಂಕ್ಷಿ ಮೇಲೆ ಪಕ್ಷೇತರ ಟಿಕೆಟ್ ಆಕಾಂಕ್ಷಿ ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ಮೈಸೂರಿನ ಮಂಡಿ ಮೊಹಲ್ಲಾದಲ್ಲಿ ನಡೆದಿದೆ.
ತೀವ್ರವಾಗಿ ಗಾಯಗೊಂಡಿರುವ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಜಕೀಯ ರವಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಕ್ಷೇತರ ಟಿಕೆಟ್ ಆಕಾಂಕ್ಷಿ ಗುಣಶೇಖರ್ ಹಾಗೂ ಸೀನ ಎಂಬವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸದಂತೆ ಬೆದರಿಕೆ ಹಾಕಿ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ರಾಜಕೀಯ ರವಿ ಜೊತೆ ಇದ್ದ ರಾಜಣ್ಣ ಹಾಗೂ ಶ್ರೇಯಸ್ ಗೂ ಗಾಯಗಳಾಗಿದ್ದು, ಈ ಸಂಬಂಧ ಮಂಡಿ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story





