ಮಂಗಳೂರು: ವಿಕಾಸ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

ಮಂಗಳೂರು, ಆ.15: ನಗರದ ವಿಕಾಸ್ ಕಾಲೇಜಿನಲ್ಲಿ 72ನೇ ಸ್ವಾತಂತ್ರ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು.
ಮುಖ್ಯಅತಿಥಿಗಳಾಗಿ ಸೈಂಟ್ ಅಲೋಶಿಯಸ್ ಕಾಲೇಜಿನ ರಿಜಿಸ್ಟ್ರಾರ್ ಪ್ರೊ.ಎ.ಎಂ. ನರಹರಿ ಮಾತನಾಡಿ, ಸ್ವಾತಂತ್ರ್ಯವನ್ನು ಸದ್ಯ ಸಂಕುಚಿತ ಅರ್ಥದಲ್ಲಿ ಬಳಸಲಾಗುತ್ತಿದೆ. ಪ್ರತಿಯೊಬ್ಬ ಮನುಷ್ಯನು ಮನುಷ್ಯತ್ವವನ್ನು ಬೆಳೆಸಿಕೊಳ್ಳಬೇಕು. ತನ್ಮೂಲಕ ದೇಶವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲು ಭಾಗಿಯಾಗಬೇಕು ಎಂದರು.
ಗೌರವ ಅತಿಥಿಗಳಾಗಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್, ಡಿಸಿಆರ್‌ಇ ಡಾ. ವೇದಮೂರ್ತಿ ಸಿ.ಬಿ. ಮಾತನಾಡಿ, ಹಿರಿಯರು ತಮ್ಮ ಬಲಿದಾನದ ಮೂಲಕ ನಮಗೆ ಸ್ವಾತಂತ್ರ್ಯವನ್ನು ಒದಗಿಸಿ ಕೊಟ್ಟಿದ್ದಾರೆ. ಹೀಗೆ ಪಡೆದುಕೊಂಡ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವ ಬದಲು ಕಳೆದುಕೊಳ್ಳುತ್ತಿದ್ದೇವೆ. ಇಂದಿನ ಯುವಕರು ಎಚ್ಚೆತ್ತುಕೊಂಡು ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸದೆ ತಮ್ಮ ಶಕ್ತಿಯನ್ನು ದೇಶದ ಉನ್ನತಿಗೆ ಬಳಸಿಕೊಳ್ಳಬೇಕು ಎಂದರು.
ಮಾಜಿ ಸಚಿವ ಹಾಗೂ ಕಾಲೇಜಿನ ಮುಖ್ಯಸ್ಥ ಜೆ.ಕೃಷ್ಣ ಪಾಲೇಮಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಚಾಲಕ ಡಾ.ಡಿ.ಶ್ರೀಪತಿ ರಾವ್, ವಿಕಾಸ್ ಎಜ್ಯುಕೇಷನ್ ಟ್ರಸ್ಟ್‌ನ ಟ್ರಸ್ಟಿಗಳಾದ ಜೆ. ಕೊರಗಪ್ಪ, ವಿಕಾಸ್ ಎಜ್ಯೂ ಸೊಲ್ಯುಷನ್ ನಿರ್ದೇಶಕ ಡಾ.ಅನಂತ್‌ಪ್ರಭು ಜಿ., ಸಮನ್ವಯಾಧಿಕಾರಿ ಪಾರ್ಥಸಾರಥಿ ಪಾಲೇಮಾರ್, ಪ್ರಾಂಶುಪಾಲ ಪ್ರೊ.ಟಿ. ರಾಜಾರಾಮ್ ರಾವ್, ಕಾಮರ್ಸ್ ಇನ್‌ಚಾರ್ಜ್ ಐಶ್ವರ್ಯ ರಾವ್, ಕೌನ್ಸೆಲರ್ ಡಾ.ಮಂಜುಳ ಅನಿಲ್‌ರಾವ್ ಉಪಸ್ಥಿತರಿದ್ದರು.
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಭಾಷಣ, ದೇಶಭಕ್ತಿ ಗೀತೆ, ಚಿತ್ರಕಲಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಾದ ಪೃಥ್ವಿ ಸ್ವಾಗತಿಸಿದರು. ಶ್ರೇಯಾ ವಂದಿಸಿದರು. ಸಂಗೀತ, ದಾಮೋದರ್, ಆಯೇಶಾ ನಿರೂಪಿಸಿದರು.







