ವಾಜಪೇಯಿ ಅರೋಗ್ಯ ಸ್ಥಿತಿ ಗಂಭೀರ : ಬಿಜೆಪಿಯ ಎಲ್ಲ ಕಾರ್ಯಕ್ರಮಗಳು ರದ್ದು
ಹೊಸದಿಲ್ಲಿ. ಆ.16: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಗುರುವಾರ ತನ್ನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.
ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಾಜಪೇಯಿ ಆರೋಗ್ಯ ಸ್ಥಿತಿಯ ಬಗ್ಗೆ ಏಮ್ಸ್ ಆಸ್ಪತ್ರೆಯಿಂದ ಬೆಳಗ್ಗೆ 11 ಗಂಟೆಗೆ ಬಿಡುಗಡೆಗೊಳಿಸಲಾದ ಹೆಲ್ತ್ ಬುಲೆಟಿನ್ ನಲ್ಲಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವಾಜಪೇಯಿ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿಸಿದೆ.
ವಾಜಪೇಯಿ ಆರೋಗ್ಯ ಸ್ಥಿತಿ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಗಣ್ಯರ ದಂಡು ಆಸ್ಪತ್ರೆಯತ್ತ ಆಗಮಿಸುತ್ತಿದ್ದಾರೆ, ಬಿಜೆಪಿಯ ಎಲ್ಲ ಮುಖ್ಯ ಮಂತ್ರಿಗಳಿಗೂ ದಿಲ್ಲಿಗೆ ಆಗಮಿಸುವಂತೆ ಬುಲಾವ್ ನೀಡಲಾಗಿದೆ .
ಏಮ್ಸ್ ಆಸ್ಪತ್ರೆಯತ್ತ ಬಿಗಿ ಭದ್ರತೆಯನ್ನು ಮಾಡಲಾಗಿದ್ದು, ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.
Next Story