Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಜಿ ಪ್ರಧಾನಿ, ‘ಅಜಾತಶತ್ರು’ ಅಟಲ್...

ಮಾಜಿ ಪ್ರಧಾನಿ, ‘ಅಜಾತಶತ್ರು’ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ

ವಾರ್ತಾಭಾರತಿವಾರ್ತಾಭಾರತಿ16 Aug 2018 5:37 PM IST
share
ಮಾಜಿ ಪ್ರಧಾನಿ, ‘ಅಜಾತಶತ್ರು’ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ

ಗುರುವಾರ ಸಂಜೆ ದಿಲ್ಲಿಯ ಏಮ್ಸ್‌ನಲ್ಲಿ ಕೊನೆಯುಸಿರೆಳೆದ ಭಾರತರತ್ನ

ಹೊಸದಿಲ್ಲಿ,ಆ.16: ಮಾಜಿ ಪ್ರಧಾನಿ ಹಾಗೂ ಬಿಜೆಪಿಯ ದಿಗ್ಗಜ ‘ಅಜಾತಶತ್ರು’ ಅಟಲ್ ಬಿಹಾರಿ ವಾಜಪೇಯಿ ಅವರು ಗುರುವಾರ ಸಂಜೆ ಇಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದಾಗಿ ಕಳೆದ ಜೂನ್‌ನಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

 ಸುದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಾಜಪೇಯಿ ಕಳೆದೊಂದು ದಶಕದಿಂದ ಸಕ್ರಿಯ ಸಾರ್ವಜನಿಕ ಜೀವನದಿಂದ ದೂರವಿದ್ದು,ತನ್ನ ನಿವಾಸಕ್ಕಷ್ಟೇ ಸೀಮಿತಗೊಂಡಿದ್ದರು.

‘‘ಶ್ರೀ ಅಟಲ್ ಬಿಹಾರಿ ವಾಜಪೇಯಿಯವರು ಗುರುವಾರ ಸಂಜೆ 5:05ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿಸಲು ಅತೀವ ದುಃಖವಾಗುತ್ತಿದೆ. ಜೂನ್ 16ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏಮ್ಸ್ ವೈದ್ಯರ ತಂಡದ ಆರೈಕೆಯೊಂದಿಗೆ ಒಂಭತ್ತು ವಾರಗಳ ಕಾಲ ಅವರ ದೇಹಸ್ಥಿತಿ ಸ್ಥಿರವಾಗಿತ್ತು. ದುರದೃಷ್ಟವಶಾತ್ ಕಳೆದ 36 ಗಂಟೆಗಳಲ್ಲಿ ಅವರ ಸ್ಥಿತಿ ಹದಗೆಟ್ಟಿತ್ತು ಮತ್ತು ಅವರಿಗೆ ಜೀವರಕ್ಷಕ ವ್ಯವಸ್ಥೆಯನ್ನು ಅಳವಡಿಸಲಾಗಿತ್ತು. ನಮ್ಮ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ನಾವು ಅವರನ್ನು ಕಳೆದುಕೊಂಡಿದ್ದೇವೆ. ಈ ಅಗಾಧ ನಷ್ಟಕ್ಕಾಗಿ ದೇಶದ ಶೋಕದಲ್ಲಿ ನಾವೂ ಭಾಗಿಯಾಗಿದ್ದೇವೆ ’’ ಎಂದು ಏಮ್ಸ್ ವೈದ್ಯಕೀಯ ಬುಲೆಟಿನ್‌ನಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ನಾಯಕರು ಏಮ್ಸ್‌ನಲ್ಲಿ ವಾಜಪೇಯಿಯವರನ್ನು ಭೇಟಿಯಾಗಿದ್ದರು. ಮೋದಿಯವರು ವೈದ್ಯರನ್ನು ಭೇಟಿಯಾಗಿ ವಾಜಪೇಯಿಯವರ ಆರೋಗ್ಯದ ಬಗ್ಗೆ ವಿಚಾರಿಸಿಕೊಂಡಿದ್ದರು. ಅವರು ವಾಜಪೇಯಿ ಕುಟುಂಬ ಸದಸ್ಯರನ್ನೂ ಭೇಟಿಯಾಗಿದ್ದರು ಎಂದು ಅಧಿಕೃತ ಪ್ರಕಟಣೆಯು ತಿಳಿಸಿದೆ.

 ಹಿರಿಯ ಬಿಜೆಪಿ ನಾಯಕ ಎಲ್.ಕೆ.ಆಡ್ವಾಣಿ,ಗೃಹಸಚಿವ ರಾಜನಾಥ ಸಿಂಗ್,ಬಿಜೆಪಿ ಅಧ್ಯಕ್ಷ ಅಮಿತ್ ಶಾ,ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ,ಆರೋಗ್ಯ ಸಚಿವ ಜೆ.ಪಿ.ನಡ್ಡಾ ಮತ್ತು ಪರಿಸರ ಸಚಿವ ಹರ್ಷವರ್ಧನ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದ ಗಣ್ಯರಲ್ಲಿ ಸೇರಿದ್ದರು.

 ವಾಜಪೇಯಿ ಐದು ವರ್ಷಗಳ ಪೂರ್ಣಾವಧಿಯನ್ನು ಪೂರೈಸಿದ್ದ ದೇಶದ ಮೊದಲ ಕಾಂಗ್ರೆಸೇತರ ಪ್ರಧಾನಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 1942ರಲ್ಲಿ ಚಲೇಜಾವ್ ಚಳವಳಿಯ ಸಂದರ್ಭದಲ್ಲಿ ಮೊದಲ ಬಾರಿ ರಾಜಕೀಯ ಕ್ಷೇತ್ರಕ್ಕೆ ತೆರೆದುಕೊಂಡಿದ್ದ ಅವರು ಮುಂದಿನ ಐದು ವರ್ಷಗಳಲ್ಲಿ ಪೂರ್ಣಕಾಲಿಕ ಆರೆಸ್ಸೆಸ್ ಪ್ರಚಾರಕರಾಗಿದ್ದರು. ಅಪ್ರತಿಮ ವಾಗ್ಮಿಯಾಗಿದ್ದ ಅವರು ಶೀಘ್ರವೇ ಅಂದಿನ ಜನಸಂಘದ ಮುಖವಾಗಿದ್ದರು.

ನಾಳೆ ಅಂತ್ಯಸಂಸ್ಕಾರ

ವಾಜಪೇಯಿ ಅವರ ಪಾರ್ಥಿವ ಶರೀರವನ್ನು ಏಮ್ಸ್‌ನಿಂದ ಕೃಷ್ಣ ಮೆನನ್ ರಸ್ತೆಯಲ್ಲಿರುವ ನಿವಾಸಕ್ಕೆ ಒಯ್ಯಲಾಗಿದೆ. ಶುಕ್ರವಾರ ಸಂಜೆ ಐದು ಗಂಟೆಗೆ ದಿಲ್ಲಿಯ ಯಮುನಾ ನದಿಯ ದಂಡೆಯಲ್ಲಿರುವ ರಾಜ್‌ಘಾಟ್‌ನಲ್ಲಿ ಮಾಜಿ ಪ್ರಧಾನಿಯ ಅಂತ್ಯಸಂಸ್ಕಾರ ನೆರವೇರಲಿದೆ

ಏಳು ದಿನಗಳ ಶೋಕಾಚರಣೆ

ಕೇಂದ್ರ ಸರಕಾರವು ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದು, ರಾಷ್ಟ್ರಧ್ವಜವನ್ನು ಅರ್ಧಕ್ಕಿಳಿಸಲಾಗುವುದು. ಹಲವಾರು ರಾಜ್ಯಗಳೂ ಶೋಕಾಚರಣೆಯನ್ನು ಘೋಷಿಸಿದ್ದು,ಶುಕ್ರವಾರ ರಜೆಯನ್ನು ಪ್ರಕಟಿಸಿವೆ.

ಶೋಕಸಂದೇಶಗಳ ಮಹಾಪೂರ

ರಾಷ್ಟ್ರಪತಿ ರಾಮನಾಥ ಕೋವಿಂದ್,ಪ್ರಧಾನಿ ನರೇಂದ್ರ ಮೋದಿ,ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವಾರು ಗಣ್ಯರು ವಾಜಪೇಯಿ ನಿಧನಕ್ಕೆ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸಿದ್ದಾರೆ.

ವಾಜಪೇಯಿ ಅವರ ನಿಧನ ತನಗೆ ತೀವ್ರ ದುಃಖವನ್ನುಂಟು ಮಾಡಿದೆ. ಅವರು ನಿಜವಾದ ಭಾರತೀಯ ಮುತ್ಸದ್ದಿಯಾಗಿದ್ದರು ಎಂದು ರಾಷ್ಟ್ರಪತಿಗಳು ತನ್ನ ಸಂತಾಪದಲ್ಲಿ ಹೇಳಿದ್ದಾರೆ.

‘ನಮ್ಮ ಪ್ರೀತಿಪಾತ್ರರಾಗಿದ್ದ ಅಟಲ್‌ಜಿಯವರ ನಿಧನ ಇಡೀ ರಾಷ್ಟ್ರವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಅವರ ನಿಧನದಿಂದಾಗಿ ಯುಗವೊಂದು ಅಂತ್ಯಗೊಂಡಿದೆ. ಅವರು ದೇಶಕ್ಕಾಗಿ ಬದುಕಿದ್ದರು ಮತ್ತು ದಶಕಗಳ ಕಾಲ ನಿಷ್ಠೆಯಿಂದ ದೇಶಕ್ಕೆ ಸೇವೆ ಸಲ್ಲಿಸಿದ್ದರು. ಈ ದುಃಖದ ಘಳಿಗೆಯಲ್ಲಿ ಅವರ ಕುಟುಂಬ,ಬಿಜೆಪಿ ಕಾರ್ಯಕರ್ತರು ಮತ್ತು ಕೋಟ್ಯಂತರ ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಓಂ ಶಾಂತಿ’ ಎಂದು ಮೋದಿ ಟ್ವಟರ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ವಾಜಪೇಯಿಯವರ ನಾಯಕತ್ವ ಗುಣಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿರುವ ಮೋದಿ,ಅವರು 21ನೇ ಶತಮಾನದ ಸುಭದ್ರ ಮತ್ತು ಸಮೃದ್ಧ ಭಾರತಕ್ಕೆ ಬುನಾದಿಯನ್ನು ಹಾಕಿದ್ದರು.ವಿವಿಧ ಕ್ಷೇತ್ರಗಳಲ್ಲಿ ಅವರ ಭವಿಷ್ಯದ ನೀತಿಗಳು ಭಾರತದ ಪ್ರತಿಯೊಬ್ಬ ಪ್ರಜೆಯ ಬದುಕನ್ನು ತಲುಪಿದ್ದವು ಎಂದಿದ್ದಾರೆ.

ವಾಜಪೇಯಿಯವರೊಂದಿಗಿನ ತನ್ನ ಅಸಂಖ್ಯಾತ ನೆನಪಗಳನ್ನು ಮೆಲುಕು ಹಾಕಿರುವ ಮೋದಿ,ಅವರ ನಿಧನವು ತನ್ನ ಪಾಲಿಗೆ ತುಂಬಲಾಗದ ನಷ್ಟವಾಗಿದೆ ಎಂದು ಹೇಳಿದ್ದಾರೆ.

“ಭಾರತವು ತನ್ನ ಮಹಾನ್ ಪುತ್ರನನ್ನು ಕಳೆದುಕೊಂಡಿದೆ. ಮಾಜಿ ಪ್ರಧಾನಿ ಅಟಲ್‌ಜಿ ಅವರು ಕೋಟ್ಯಂತರ ಜನರ ಪ್ರೀತಿಗೆ,ಗೌರವಕ್ಕೆ ಪಾತ್ರರಾಗಿದ್ದರು. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ನಾವು ಅವರನ್ನು ಕಳೆದುಕೊಂಡಿದ್ದೇವೆ” ಎಂದು ರಾಹುಲ್ ಗಾಂಧಿ ತನ್ನ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X