Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಿಯಾಳಿ ಅಂಗನವಾಡಿ, ಸ್ಟೇಟ್‌ಹೋಮ್‌ಗೆ...

ಕಡಿಯಾಳಿ ಅಂಗನವಾಡಿ, ಸ್ಟೇಟ್‌ಹೋಮ್‌ಗೆ ಸಚಿವೆ ಜಯಮಾಲ ಭೇಟಿ

ಮಕ್ಕಳಿಗೆ ಸಮರ್ಪಕ ಪೌಷ್ಠಿಕ ಆಹಾರ ನೀಡಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Aug 2018 10:01 PM IST
share
ಕಡಿಯಾಳಿ ಅಂಗನವಾಡಿ, ಸ್ಟೇಟ್‌ಹೋಮ್‌ಗೆ ಸಚಿವೆ ಜಯಮಾಲ ಭೇಟಿ

ಉಡುಪಿ, ಆ.16: ಕಳೆದೆರಡು ದಿನಗಳಿಂದ ಉಡುಪಿ ಜಿಲ್ಲೆಯ ಪ್ರವಾಸದ ಲ್ಲಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ ಅವರು ಇಂದು ಕಡಿಯಾಳಿಯ ಒಂದು ಅಂಗನವಾಡಿ ಹಾಗೂ ನಿಟ್ಟೂರಿನಲ್ಲಿರುವ ಮಹಿಳಾ ನಿಲಯ (ಸ್ಟೇಟ್ ಹೋಮ್)ಗಳಿಗೆ ಭೇಟಿ ನೀಡಿ ಅಲ್ಲಿರುವ ವ್ಯವಸ್ಥೆ ಹಾಗೂ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಬೆಳಗ್ಗೆ ಮೊದಲು ಉಡುಪಿ ಶಿಶು ಅಭಿವೃದ್ದಿ ಯೋಜನೆಯ ಕಡಿಯಾಳಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಸಚಿವೆ ಮಕ್ಕಳೊಂದಿಗೆ ಆತ್ಮೀಯವಾಗಿ ಬೆರೆತು ಮಾತನಾಡಿದರು. ಸರಕಾರದಿಂದ ಮಕ್ಕಳಿಗೆ ಪೂರಕೈಯಾಗುವ ಎಲ್ಲಾ ಪೌಷ್ಠಿಕ ಆಹಾರಗಳು ಸಮರ್ಪಕವಾಗಿ ಮಕ್ಕಳಿಗೆ ಸಿಗುತ್ತಿರುವುದನ್ನು ವಿಚಾರಿಸಿ ಖಾತ್ರಿ ಪಡಿಸಿಕೊಂಡರು.

ಅಂಗನವಾಡಿಗೆ ದಾಖಲಾದ ಎಲ್ಲಾ 13 ಮಕ್ಕಳು ಹಾಜರಿರುವುದನ್ನು, ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹಾಜರಿಯನ್ನು ಪರಿಶೀಲಿಸಿದರು. ಅಂಗನವಾಡಿಯಲ್ಲಿ ಮಕ್ಕಳಿಗೆ ವಿತರಿಸಲಾಗುವ ಪೌಷ್ಟಿಕ ಆಹಾರವಾದ ಮೊಳಕೆ ಬರಿಸಿದ ಹೆಸರುಕಾಳು ಹಾಗೂ ಕೆನೆಭರಿತ ಹಾಲನ್ನು ಖುದ್ದಾಗಿ ಸೇವಿಸಿ ಅದರ ಗುಣಮಟ್ಟ ಹಾಗೂ ರುಚಿಯನ್ನು ಪರಿಶೀಲಿಸಿದರು. ಅಂಗನವಾಡಿ ಕೇಂದ್ರಕ್ಕೆ ಅಗತ್ಯವಿರುವ ಇಂಟರ್‌ಲಾಕ್ ವ್ಯವಸ್ಥೆ ಮಾಡಿಸುವಂತೆ ಸೂಚಿಸಿದ ಸಚಿವೆ, ಶಿಶು ಸ್ನೇಹಿ ಶೌಚಾಲಯದ ಅಗತ್ಯತೆ ಹಾಗೂ ಕೇಂದ್ರದ ಎದುರಿನ ಜಾಗದ ವಿಸ್ತರಣೆಯ ಅಗತ್ಯವನ್ನು ಮನದಟ್ಟು ಮಾಡಿಕೊಂಡು ಇಲಾಖೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಬಳಿಕ ಅಲ್ಲಿಂದ ನಿಟ್ಟೂರಿನ ಕೊಡಂಕೂರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಎಲ್ಲಾ 9 ಮಕ್ಕಳು, ಕಾರ್ಯಕರ್ತೆ ಹಾಗೂ ಸಹಾಯಕಿ ಹಾಜರಿರುವುದನ್ನು ಖಾತ್ರಿ ಪಡಿಸಿಕೊಂಡರು. ಮಕ್ಕಳಿಗೆ ಹೊರಾಂಗಣ ಆಟದ ವ್ಯವಸ್ಥೆ, ನೀರು ಶೇಖರಣೆಗೆ ಸಿಂಟೆಕ್ಸ್‌ನ ಅವಶ್ಯಕತೆಯನ್ನು ಮನಗಂಡು ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು. ಈ ವೇಳೆ ಉಪಸ್ಥಿತರಿದ್ದ ಸ್ಥಳೀಯರ ಬಳಿ ಅಂಗನವಾಡಿ ಕೇಂದ್ರದ ಚಟುವಟಿಕೆ ಬಗ್ಗೆ ಮಾಹಿತಿ ಪಡೆದುಕೊಂಡರು. ಮಕ್ಕಳಿಗೆ ಸರಿಯಾಗಿ ಪೌಷ್ಟಿಕ ಆಹಾರ ನೀಡುವಂತೆ ತಿಳಿಸಿದರು.

ಅಲ್ಲಿಂದ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಇರುವ ರಾಜ್ಯ ಮಹಿಳಾ ನಿಲಯಕ್ಕೆ ಭೇಟಿ ನೀಡಿದ ಸಚಿವೆ, ನಿಲಯದಲ್ಲಿದ್ದ 61 ಮಂದಿ ಮಹಿಳೆಯರು ಹಾಗೂ ಬಾಲಕಿಯರನ್ನು ಮಾತನಾಡಿಸಿದರು. ಅಲ್ಲಿನ ವ್ಯವಸ್ಥೆ ಕುರಿತು ಅಧಿಕಾರಿಗಳಿಂದ ಅಗತ್ಯ ಮಾಹಿತಿಗಳನ್ನು ಪಡೆದರು.

ರಾಜ್ಯ ಮಹಿಳಾ ನಿಲಯದಲ್ಲಿದ್ದ ಎಲ್ಲರನ್ನು ಮಾತನಾಡಿಸಿ ಅವರ ಕೌಟುಂಬಿಕ ಹಿನ್ನೆಲೆ, ಅವರಿಗಿರಬಹುದಾದ ಸಮಸ್ಯೆಗಳನ್ನು ವೌನವಾಗಿ ಆಲಿಸಿದರು ಹಾಗೂ ಅವರಿಗೆ ಧೈರ್ಯವನ್ನು ತುಂಬಲು ಪ್ರಯತ್ನಿಸಿದರು. ಸ್ಟೇಟ್‌ಹೋಮ್‌ನ ನಿವಾಸಿಗರಿಗಾಗಿ ಇರುವ ಹುಣಿಸೆಹಣ್ಣು ಸಂಸ್ಕರಣಾ ಘಟಕ, ಅಗರ ಬತ್ತಿ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾವೆಲ್ಲರೂ ಇಲ್ಲಿ ತೋಟಗಾರಿಕೆ, ಲೈಬ್ರರಿ, ಹೊರಾಂಗಣ ಚಟುವಟಿಕೆ, ಆರೋಗ್ಯಕ್ಕಾಗಿ ಪ್ರಾಣಯಾಮ ಮುಂತಾದ ಚಟುವಟಿಕೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವಂತೆ ಕಿವಿಮಾತು ಹೇಳಿದರು. ಇಲ್ಲಿರುವವ ರೊಂದಿಗೆ ಪ್ರೀತಿಯಿಂದ ವ್ಯವಹರಿಸಲು ಸಿಬ್ಬಂದಿಗಳಿಗೆ ಕರೆ ನೀಡಿದರು.  ತಾವೆಲ್ಲರೂ ಇಲ್ಲಿ ತೋಟಗಾರಿಕೆ, ಲೈಬ್ರರಿ, ಹೊರಾಂಗಣ ಚಟುವಟಿಕೆ, ಆರೋಗ್ಯಕ್ಕಾಗಿ ಪ್ರಾಣಯಾಮ ಮುಂತಾದ ಚಟುವಟಿಕೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವಂತೆ ಕಿವಿಮಾತು ಹೇಳಿದರು. ಇಲ್ಲಿರುವವ ರೊಂದಿಗೆ ಪ್ರೀತಿಯಿಂದ ವ್ಯವಹರಿಸಲು ಸಿಬ್ಬಂದಿಗಳಿಗೆ ಕರೆ ನೀಡಿದರು. ಸಚಿವರ ಭೇಟಿಯ ವೇಳೆ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವೆ ಜಯಮಾಲ ಅವರು ಬುಧವಾರ ಸಂಜೆ ಕೊಲ್ಲೂರಿನ ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X