Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ ಆಡಳಿತದಿಂದ ದೇಶದಲ್ಲಿ ಕಂಪೆನಿಗಳ...

ಮೋದಿ ಆಡಳಿತದಿಂದ ದೇಶದಲ್ಲಿ ಕಂಪೆನಿಗಳ ಸರಕಾರ: ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್

ರಾಜಕೀಯ ಜಾಗೃತಿ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ16 Aug 2018 10:46 PM IST
share
ಮೋದಿ ಆಡಳಿತದಿಂದ ದೇಶದಲ್ಲಿ ಕಂಪೆನಿಗಳ ಸರಕಾರ: ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್

ಚಿಕ್ಕಮಗಳೂರು, ಆ.16: ಪ್ರಧಾನಿ ನರೇಂದ್ರ ಮೋದಿ ಅವರು ಜನ ವಿರೋಧಿ ಆರ್ಥಿಕ ನೀತಿಗಳ ಜಾರಿಯಿಂದಾಗಿ ದೇಶದಲ್ಲಿ ಕಂಪೆನಿಗಳ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದು, ಇದನ್ನು ತಡೆಯಲು ಎಲ್ಲ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳು ಒಂದಾಗಬೇಕಿದೆ. ಜನವಿರೋಧಿ ಆಡಳಿತಕ್ಕೆ ಪರ್ಯಾಯ ಹೋರಾಟಗಳ ಮೂಲಕ ಪ್ರತಿರೋಧ ವ್ಯಕ್ತಪಡಿಸುವ ತುರ್ತು ಪ್ರಸಕ್ತ ಅನಿವಾರ್ಯವಾಗಿದೆ ಎಂದು ಸಿಪಿಐ ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸದಸ್ಯ ಡಾ.ಸಿದ್ದನಗೌಡ ಪಾಟೀಲ್ ತಿಳಿಸಿದ್ದಾರೆ.

ನಗರದ ಅಂಬೇಡ್ಕರ್ ಭವನದಲ್ಲಿ ಗುರುವಾರ ಸಿಪಿಐ ಜಿಲ್ಲಾ ಮಂಡಳಿ ವತಿಯಿಂದ ಏರ್ಪಡಿಸಲಾಗಿದ್ದ ರಾಜಕೀಯ ಜನಜಾಗೃತಿಗಾಗಿ ವಿಚಾರ ಸಂಕಿರಣದಲ್ಲಿ 'ಮೋದಿ ಆಡಳಿತದಲ್ಲಿ ಜನಸಾಮಾನ್ಯರ ಬವಣೆಗಳು' ವಿಷಯದ ಕುರಿತಾಗಿ ವಿಚಾರ ಮಂಡಿಸಿದ ಅವರು, ಸಂವಿಧಾನ ಭವ್ಯ ಭಾರತದ ಅಡಿಪಾಯವಾಗಿದ್ದು, ಇದನ್ನೇ ನಾಶಪಡಿಸುವ ಹುನ್ನಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ತೀವ್ರವಾಗಿ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಸಂವಿಧಾನದ ಮೂಲ ಉದ್ದೇಶ ಕಲ್ಯಾಣ ರಾಜ್ಯವಾಗಿದೆ. ಆದರೆ ಮೋದಿ ಅವರು ಕಳೆದ ನಾಲ್ಕು ವರ್ಷಗಳ ಅಧಿಕಾರವಧಿಯಲ್ಲಿ ದೇಶದ ಶಿಕ್ಷಣ, ಆರೋಗ್ಯ, ಕೃಷಿ, ವಿಮೆ, ಕೈಗಾರಿಕೆ ಮತ್ತಿತರ ಕ್ಷೇತ್ರಗಳನ್ನು ಖಾಸಗೀಕರಣಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಸಾಕಷ್ಟು ಮುಂದುವರೆದಿದ್ದು, ದೇಶದಲ್ಲಿ ಮತ್ತೆ ಕಂಪೆನಿಗಳ ಸರಕಾರವನ್ನು ಅಸ್ತಿತ್ವಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಈ ಪ್ರಯತ್ನಗಳ ಫಲವಾಗಿ ದೇಶದ ಸಂಪತ್ತೂ ಸೇರಿದಂತೆ ರೈತರು, ಕಾರ್ಮಿಕರು, ಬಡವರನ್ನು ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ದೇಶದ ನೆಲ, ಜಲ ಸೇರಿದಂತೆ ಬೃಹತ್‍ಕೈಗಾರಿಕೆಗಳು, ಆರೋಗ್ಯ, ವಿಮೆ, ಬ್ಯಾಂಕಿಂಗ್ ವ್ಯವಸ್ಥೆಗಳು ದೇಶದ ಜನರ ಸ್ವತ್ತಾದಲ್ಲಿ ಸಾಮಾಜಿಕ, ಆರ್ಥಿಕ ಪ್ರಗತಿ ಸಾಧ್ಯ ಎಂಬ ದೂರದೃಷ್ಟಿಯಿಂದ ಇವುಗಳ ಸರಕಾರೀಕರಣವಾಗಬೇಕೆಂದು ಅಂಬೇಡ್ಕರ್ ಅವರು ಸಂವಿಧಾನ ರಚನೆ ಸಂದರ್ಭದಲ್ಲಿ ಸರಕಾರಕ್ಕೆ ಮನವಿ ಮಾಡಿದ್ದರು. ಅದರ ಫಲವಾಗಿ 60ರ ದಶಕದಲ್ಲಿ ಇವುಗಳ ಸರಕಾರೀಕರಣವಾಯಿತು. ಆದರೆ 80ರ ದಶಕದಲ್ಲಿ ವಿಶ್ವಬ್ಯಾಂಕ್‍ನಂತಹ ಸಂಸ್ಥೆಗಳ ಒತ್ತಡದಿಂದಾಗಿ ಪ್ರಧಾನಿ ಪಿ.ವಿ.ನರಸಿಂಹರಾವ್ ಈ ಕ್ಷೇತ್ರಗಳ ಖಾಸಗೀಕರಣಕ್ಕೆ ಮುನ್ನುಡಿ ಬರೆದರು. ಪ್ರಸಕ್ತ ಮೋದಿ ಖಾಸಗೀಕರಣವೇ ದೇಶದ ಅಭಿವೃದ್ಧಿ ಎಂದು ಭಾವಿಸಿರುವುದರಿಂದ ಎಲ್ಲ ಸರಕಾರಿ ರಂಗಗಳ ಖಾಸಗೀಕರಣ ವೇಗ ಪಡೆದುಕೊಂಡಿದ್ದು, ಎಪಿಎಲ್‍ಎಂಸಿ ಕಾಯ್ದೆ ಮೂಲಕ ಕೃಷಿ ಕ್ಷೇತ್ರವನ್ನೂ ಕಾರ್ಪೊರೆಟ್ ಶಕ್ತಿಗಳ ತೆಕ್ಕೆಗೆ ತಳ್ಳಲು ಪ್ರಧಾನಿ ಮೋದಿ ಈಗಾಗಲೇ ನಾಂದಿ ಹಾಡಿದ್ದಾರೆ. ಇದರ ವಿರುದ್ಧ ಬಿಜೆಪಿಯೇತರ ಜಾತ್ಯತೀತ ಪಕ್ಷಗಳು, ಸಂಘಟನೆಗಳು ಪರ್ಯಾಯ ಹೋರಾಟ ರೂಪಿಸಬೇಕಿದೆ ಪಾಟೀಲ್ ಕರೆ ನೀಡಿದರು.

ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಮಾತನಾಡಿ, ಬಿಜೆಪಿಯ ಮಾಜಿ ಪ್ರಧಾನಿ ವಾಜಪೇಯಿ ಅವರಲ್ಲಿ ರಾಜಕೀಯ ನಾಯಕತ್ವದ ಗುಣಗಳಿತ್ತು. ಅಧಿಕಾರದಲ್ಲಿದ್ದಾಗ ಅವರು ಉಗ್ರ ಹಿಂದುತ್ವ ಪ್ರದರ್ಶಿಸಿರಲಿಲ್ಲ. ಆದರೆ ಮೋದ ಅವರ ಅಧಿಕಾರವಧಿಯಲ್ಲಿ ದೇಶದ ರಾಜಕಾರಣ ಕವಲುದಾರಿಯಲ್ಲಿದೆ. ಮೋದಿ ಅವರ ಬೊಗಳೆ, ಉಢಾಪೆ ಪ್ರವೃತ್ತಿಯಿಂದ ನೈಜದೇಶಭಕ್ತರಿಗೆ ಆತಂಕವಾಗುತ್ತಿದೆ. ಮೋದಿ ಹಾಗೂ ಅಮಿತ್ ಶಾ ಜೋಡಿ ಸುಳ್ಳು ಭರವಸೆಗಳನ್ನು ಜನರಿಗೆ ನೀಡಿ ಮೋಸಮಾಡಿದ್ದಾರೆ. ಜನರಿಗೆ ನೀಡಿದ್ದ ಭರವಸೆ ಈಡೇರಿಸುವ ಬದಲು ಅದಾನಿ, ಅಂಬಾನಿಯಂತಹ ಕಾರ್ಪೋರೆಟ್ ಶಕ್ತಿಗಳಿಗೆ ಪೂರಕವಾಗಿ ಆರ್ಥಿಕ ನೀತಿಗಳನ್ನು ಜಾರಿ ಮಾಡಿರುವುದರಿಂದ ದೇಶಾದ್ಯಂತ ಅರಾಜಕತೆ ಸೃಷಿಯಾಗಿದೆ. ಉದ್ಯೋಗಸೃಷ್ಟಿ, ಕಪ್ಪುಹಣ, ಬೆಲೆ ನಿಯಂತ್ರಣದ ಭರವಸೆಗಳು ಸುಳ್ಳಾದವು. ಜನರ ಖಾತೆಗೆ 15 ಪೈಸೆಯೂ ಬರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಇಂದಿರಾಗಾಂಧಿ ಅವಧಿಯಲ್ಲಿ ದೇಶದಲ್ಲಿ ಘೋಷಿತ ತುರ್ತು ಪರಿಸ್ಥಿತಿ ಇದ್ದರೆ, ಮೋದಿ ಅವಧಿಯಲ್ಲಿ ಅಘೋಷಿತ ತುತು ಪರಿಸ್ಥಿತಿ ಇದೆ ಎಂದು ಟೀಕಿಸಿದರು.

ಮಾಜಿ ಶಾಸಕ ಹಾಗೂ ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತ ಮಾತನಾಡಿ, ಚಿಕ್ಕಮಗಳೂರು ಜಿಲ್ಲೆ ಜೀವವಿರೋಧಿ ಶಕ್ತಿಗಳ ಪಾಲಾಗುತ್ತಿದ್ದು, ಜಾತಿ, ಧರ್ಮಗಳನ್ನು ಒಡೆಯುವ ಮೂಲಕ, ಹಣದ ಹೊಳೆಯನ್ನೆ ಹರಿಸುವ ಮೂಲಕ ಅಧಿಕಾರಕ್ಕಾಗಿ ಹಪಾಹಪಿ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಭ್ರಷ್ಟ ವ್ಯವಸ್ಥೆಯ ವಿರುದ್ಧ ಹೋರಾಟ ನಿರಂತರವಾಗಿರಬೇಕು. ಕಮ್ಯೂನಿಷ್ಟ್ ಸಿದ್ಧಾಂತ, ಲೋಹಿಯಾ ಸಿದ್ದಾಂತ ಹಾಗೂ ಸಮಾಜವಾದ ಸಿದ್ಧಾಂತಗಳ ತಳಹದಿ ಮೇಲೆ ಹೋರಾಟಗಳು ನಡೆದಾಗ ಜಾತಿ, ಮತ, ಹಣದ ಹಂಗಿಲ್ಲದೇ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಾಧ್ಯ ಎಂದು ಅಭಿಪ್ರಾಯಿಸಿದರು.

ಸಿಪಿಐ ಜಿಲ್ಲಾಧ್ಯಕ್ಷ ರೇಣುಕಾರಾದ್ಯ ಕಾರ್ಯಕ್ರಮದ ಅಧ್ಯಕತೆ ವಹಿಸಿ ಮಾತನಾಡಿದರು, ಮುಖಂಡ ಅಮ್ಜದ್ ಪ್ರಸ್ತಾವಿಕವಾಗಿ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ವಿಜಯ್‍ಕುಮಾರ್, ಬಿಎಸ್ಪಿ ಮುಖಂಡ ರಾಧಾಕೃಷ್ಣ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ದೇವರಾಜ್ ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳ ಮುಖಂಡರಾದ ಎಂ.ಎಲ್.ಮೂರ್ತಿ, ರಾಧಾ ಸುಂದರೇಶ್, ಗುರುಶಾಂತಪ್ಪ, ರಾಜರತ್ನಂ, ವಿಜಯ್‍ಕುಮಾರ್, ರಘು, ಮಂಜುನಾಥ್, ಗಿರೀಶ್ ಕ್ಯಾತನಬೀಡು,ಬಸವರಾಜ್, ಗೋಪಾಲಶೆಟ್ಟಿ ಸೇರಿದಂತೆ ವಿವಿಧ ಪಕ್ಷ, ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಮೋದಿ ಸಂವಿಧಾನವನ್ನೇ ಬದಲಾಯಿಸಿದ್ದಾರೆ:
ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿ ವಿರುದ್ಧ "ಭಾರತ ಬಿಟ್ಟು ತೊಲಗಿ" ಚಳವಳಿ ನಡೆಯಿತು. ಆದರೆ ಮೋದಿ ಆಡಳಿತದ ಅವಧಿಯಲ್ಲಿ ಸಾವಿರಾರರು ವಿದೇಶದಿ ಕಂಪೆನಿಗಳಿಗೆ ಆಹ್ವಾನ ನೀಡುವ "ಭಾರತಕ್ಕೆ ಬನ್ನಿ" ಚಳವಳಿ ಆರಂಭವಾಗಿದೆ ಎಂದ ಅವರು, ಸಂಸದ ಅನಂತ್‍ಕುಮಾರ್ ಹೆಗಡೆ ಸಂವಿಧಾನ ಬದಲಾಯಿಸುತ್ತೇವೆ ಎಂದಷ್ಟೇ ಹೇಳಿದ್ದಾರೆ. ಆದರೆ ಮೋದಿ ಸಂವಿಧಾನವನ್ನೇ ಬದಲಾಯಿಸಿದ್ದಾರೆ. ಬಿಜೆಪಿ ಸರಕಾರ ಕಳೆದ ಐದು ವರ್ಷಗಳಲ್ಲಿ ಮನುವಾದವನ್ನು ನಿಧಾನವಾಗಿ ಹರಡಿದ್ದಾರೆ. ಈ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಲ್ಲಿ ದೇಶದ ಆಡಳಿತ ಆರೆಸ್ಸೆಸ್ ಪಾಲಾಗಲಿದೆ. 
- ಡಾ.ಸಿದ್ದನಗೌಡ ಪಾಟೀಲ್

ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳು ಸಂವಿಧಾನ ಆಧಾರಸ್ಥಂಭ. ಇವುಗಳ ಮೇಲೆ ನಂಬಿಕೆ ಇಲ್ಲದವರೇ ದೇಶ ಆಳುತ್ತಿದ್ದಾರೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರನ್ನು ಓಟ್ ಬ್ಯಾಂಕ್ ಮಾಡಿಕೊಂಡು ಈ ಹಿಂದೆ ರಾಜಕಾರಣ ಮಾಡಲಾಯಿತು. ಪ್ರಸಕ್ತ ಹಿಂದುತ್ವದ ಹೆಸರಿನಲ್ಲಿ ಸಮಾಜ ಒಡೆದು ಓಟ್ ಬ್ಯಾಂಕ್ ಸೃಷ್ಟಿಸಿಕೊಳ್ಳಲಾಗಿದೆ. ಇದರ ಫಲವಾಗಿ ಈ ಸಮುದಾಯಗಳು ಇನ್ನೂ ಅತಂತ್ರ ಸ್ಥಿತಿಯಲ್ಲಿವೆ. ಈ ಬಗ್ಗೆ ಜನಜಾಗೃತಿ ಮಾಡಬೇಕಿದ್ದ ಮಾಧ್ಯಮಗಳ ಭೌದ್ಧಿಕತೆಯನ್ನೇ ಕಾರ್ಪೊರೆಟ್ ಶಕ್ತಿಗಳು ಖರೀದಿಸಿವೆ. ಚುನಾವಣಾ ವ್ಯವಸ್ಥೆ ಬದಲಾವಣೆ ಕಾಣದಿದ್ದಲ್ಲಿ ಪ್ರಜಾಪ್ರಭುತ್ವ ಅಪಹಾಸ್ಯಕ್ಕೊಳಗಾಗಲಿದೆ.
- ಎಚ್.ಎಂ.ರುದ್ರಸ್ವಾಮಿ, ಚಿಂತಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X